
ನಾಪೋಕ್ಲು ಸೆ.22 NEWS DESK : ಮೂರ್ನಾಡು ಪದವಿ ಕಾಲೇಜಿನ ಎನ್‍ಎಸ್‍ಎಸ್ ಘಟಕವನ್ನು ಉದ್ಘಾಟಿಸಲಾಯಿತು. ಕಾಲೇಜಿನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮೂರ್ನಾಡು ಮಾರುತಿ ಪದವಿ ಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕಿ ಎಂ.ಡಿ.ಹೇಮಾವತಿ ಅವರು ಮಾತನಾಡಿ ವಿದ್ಯಾರ್ಥಿಗಳು ನಾಯಕತ್ವ ಗುಣವನ್ನು ಬೆಳೆಸಿಕೊಳ್ಳಬೇಕು. ಪೋಷಕರು ಹಾಗೂ ಶಿಕ್ಷಕರಿಗೆ ವಿಧೇಯರಾಗಿ ಸಮಾಜಕ್ಕೆ ಆಸ್ತಿ ಆಗಬೇಕು ಎಂದು ಕರೆ ನೀಡಿದರು. ಕಾಲೇಜಿನ ನಿರ್ದೇಶಕರಾದ ಎಂ.ಕೆ.ಚಂಗಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ವಿಲ್ಮಾ, ಉಪನ್ಯಾಸಕ ವರ್ಗದವರು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು. ಎನ್‍ಎಸ್‍ಎಸ್ ಘಟಕದ ಯೋಜನಾಧಿಕಾರಿಗಳಾದ ಕಲ್ಪನಾ ಪ್ರತಿಜ್ಞಾವಿಧಿ ಬೋಧಿಸಿದರು.
ವರದಿ : ದುಗ್ಗಳ ಸದಾನಂದ








