
ಸಿದ್ದಾಪುರ ಸೆ.20 NEWS DESK : ರಾಜ್ಯ ಸರ್ಕಾರವು ಸೆ.22 ರಿಂದ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ನಡೆಸುತ್ತಿದ್ದು, ಈ ಸಮೀಕ್ಷೆಯಲ್ಲಿ ಹಲವಾರು ನ್ಯೂನತೆಗಳಿದ್ದು ಈ ನೂನ್ಯತೆಗಳನ್ನು ಸರಿಪಡಿಸಬೇಕೆಂದು ಜಿಲ್ಲಾ ಎಸ್.ಎನ್.ಡಿ.ಪಿ.ಯೂನಿಯನ್‌ನ ಜಿಲ್ಲಾಧ್ಯಕ್ಷ ವಿ.ಕೆ.ಲೋಕೇಶ್ ಒತ್ತಾಯಿಸಿದ್ದಾರೆ. ಈ ಕುರಿತು ಹೇಳಿಕೆ ನೀಡಿರುವ ಅವರು ಪ್ರಸ್ತುತ ಇರುವ ಜಾತಿ ಕಾಲಂಮಿನಲ್ಲಿ ಮಲಯಾಳಿ ಬಿಲ್ಲವ ಎಂಬ ಜಾತಿ ಇದ್ದು, ಈ ರೀತಿ ಜಾತಿ ಇರುವುದಿಲ್ಲ ಎಂದು ತಿಳಿಸಿದರು. ನಮ್ಮ ಜನಾನಂಗದವರು ತೀಯಾನ್ (ezhava) ಎಂದು ನಮೂದಿಸಬೇಕೆಂದು ಮನವಿ ಮಾಡಿದ್ದಾರೆ. ರಾಜ್ಯ ಸರ್ಕಾರವು ಈಗಿರುವ ಕ್ರೈಸ್ತ ಧರ್ಮ ದ ಎದುರು 46 ಹಿಂದೂ ಜಾತಿಗಳ ಹೆಸರುಗಳನ್ನು ನಮೂದಿಸಿರುವುದು ಮುಂದಿನ ದಿನಗಳಲ್ಲಿ ಸರ್ಕಾರವೇ ಮತಾಂತರಕ್ಕೆ ಪ್ರಚೋದನೆ ಕೊಟ್ಟಂತಾಗುತ್ತದೆ ಎಂದು ಆರೋಪಿಸಿದರು.ಈ ಹಿನ್ನೆಲೆಯಲ್ಲಿ ಸರ್ಕಾರವು ಇದೀಗ ಕೈಗೊಂಡಿರುವ ಸಮೀಕ್ಷೆಯನ್ನು ಕೈಬಿಡಬೇಕೆಂದು ಲೋಕೇಶ್ ಮನವಿ ಮಾಡಿಕೊಂಡಿದ್ದಾರೆ. ಸಮಾಜ ಬಾಂಧವರು ಜಾತಿಯ ಕಾಲಂನಲ್ಲಿ ತೀಯನ್ ಮತ್ತು ಧರ್ಮದ ಕಾಲಂನಲ್ಲಿ ಹಿಂದೂ ಧರ್ಮ ಎಂದು ನಮೂದಿಸಬೇಕೆಂದು ಮನವಿ ಮಾಡಿದ್ದಾರೆ.









