
ಮಡಿಕೇರಿ NEWS DESK ಸೆ.22 : ರಾಜ್ಯ ಸರಕಾರ ಮತ್ತು ಕೇಂದ್ರ ಸರಕಾರದ ಜಾತಿ ಜನಗಣತಿಯ ಸಂದರ್ಭ ಕೊಡಗು ಜಿಲ್ಲೆಯ ಅರೆಭಾಷೆ ಗೌಡರು ಜಾತಿಯ ಕಾಲಂನಲ್ಲಿ GOWDA (ಗೌಡ) ಎಂದು ನಮೂದಿಸುವಂತೆ ಮೂರ್ನಾಡು ಗೌಡ ಸಮಾಜ ಮನವಿ ಮಾಡಿದೆ. ಪತ್ರಿಕಾ ಪ್ರಕಟಣೆ ನೀಡಿರುವ ಮೂರ್ನಾಡು ಗೌಡ ಸಮಾಜದ ಅಧ್ಯಕ್ಷ ಪಾಣತ್ತಲೆ ಹರೀಶ್ ಅವರು ಬಹಳ ಹಿಂದಿನಿAದಲೂ ಕೊಡಗಿನ ಅರೆಭಾಷೆ ಗೌಡರ ಕಂದಾಯ, ಶೈಕ್ಷಣಿಕ ಸೇರಿದಂತೆ ಎಲ್ಲಾ ದಾಖಲೆಗಳಲ್ಲಿ ಗೌಡ ಎಂದೇ ನಮೂದಿಸಿರುವುದರಿಂದ ಈಗ ಬದಲಾವಣೆ ಮಾಡಿದರೆ ತೊಂದರೆಯಾಗುವ ಸಾಧ್ಯತೆಗಳಿದೆ. ಆದ್ದರಿಂದ ಗಣತಿದಾರರು ಬಂದಾಗ ಅರೆಭಾಷೆ ಗೌಡ ಸಮುದಾಯ ಬಾಂಧವರು ಜಾತಿ ಕಾಲಂ ನಲ್ಲಿ GOWDA (ಗೌಡ), ಉಪಜಾತಿ ಅರೆಭಾಷೆ ಗೌಡ ಮತ್ತು ಭಾಷೆಯ ಕಾಲಂ ನಲ್ಲಿ ಅರೆಭಾಷೆ ಎಂದು ನಮೂದಿಸುವಂತೆ ಕೋರಿದ್ದಾರೆ. ಎಲ್ಲಾ ಮೂಲ ದಾಖಲೆಗಳನ್ನು ಒಕ್ಕಲಿಗ ಎಂದು ಹೊಂದಿರುವ ಅರೆಭಾಷೆ ಗೌಡ ಸಮುದಾಯದವರು ಇದ್ದರೆ, ಜಾತಿ ಒಕ್ಕಲಿಗ, ಉಪಜಾತಿ ಅರೆಭಾಷೆ ಗೌಡ, ಅರೆಭಾಷೆ ಒಕ್ಕಲಿಗ ಮತ್ತು ಮಾತೃಭಾಷೆ ಅರೆಭಾಷೆ ಎಂದು ನಮೂದಿಸಲು ಯಾವುದೇ ಅಭ್ಯಂತರವಿರುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಉಪಜಾತಿಯಲ್ಲಿ ಅರೆಭಾಷೆ ಗೌಡ ಎಂಬುವುದನ್ನು ಪ್ರತ್ಯೇಕ ಕಾಲಂನಲ್ಲಿ ಸೇರಿಸಬೇಕೆಂದು ಕೊಡಗು ಗೌಡ ಸಮಾಜಗಳ ಒಕ್ಕೂಟ ಸಲ್ಲಿಸಿದ ಮನವಿಗೆ ಸರಕಾರ ಸ್ಪಂದಿಸಿದೆ. ಸಮುದಾಯ ಬಾಂಧವರು ಎಲ್ಲಾ ವಿವರಗಳನ್ನು ಗಮನದಲ್ಲಿರಿಸಿಕೊಂಡು ಉಪಜಾತಿ ಎನ್ನುವ ಕಾಲಂನಲ್ಲಿ ‘ಅರೆಭಾಷೆ ಗೌಡ’ ಎಂದು ನಮೂದಿಸುವುದರೊಂದಿಗೆ ಕಡ್ಡಾಯವಾಗಿ ಎರಡೂ ಗಣತಿಯಲ್ಲಿ ಪಾಲ್ಗೊಳ್ಳಬೇಕೆಂದು ತಿಳಿಸಿದ್ದಾರೆ. ಕೊಡಗು ಗೌಡ ಸಮಾಜಗಳ ಒಕ್ಕೂಟ ಅರೆಭಾಷೆ ಗೌಡ ಸಮುದಾಯದ ಸಭೆಗಳನ್ನು ನಡೆಸಿ ಕೊಡಗಿನ ಎಲ್ಲಾ ಗೌಡ ಸಮಾಜಗಳೊಂದಿಗೆ ಸಮಾಲೋಚಿಸಿ ಉಔWಆಂ (ಗೌಡ) ಎಂದು ನಮೂದಿಸಲು ನಿರ್ಣಯ ಕೈಗೊಂಡಿದೆ. ಇದಕ್ಕೆ ಮೂರ್ನಾಡು ಗೌಡ ಸಮಾಜದ ಒಪ್ಪಿಗೆ ಇದೆ. ಗಣತಿಯಲ್ಲಿ ತಮ್ಮ ಜಾತಿಗೆ ಇರುವ ಇನ್ನೊಂದು ಹೆಸರು ಎಂಬ ಕಾಲಂ ಕೂಡ ಇದ್ದು, ಇದರಲ್ಲಿ ಒಕ್ಕಲಿಗ, ಕೊಡಗು ಗೌಡ, ಅರೆಭಾಷೆ ಒಕ್ಕಲಿಗ ಎಂದು ನಮೂದಿಸಲು ಪಾಣತ್ತಲೆ ಹರೀಶ್ ಸಲಹೆ ನೀಡಿದ್ದಾರೆ.








