
ಮೈಸೂರು NEWS DESK ಸೆ.22 : ನಾಡದೇವತೆ ತಾಯಿ ಶ್ರೀ ಚಾಮುಂಡೇಶ್ವರಿಯ ಅಗ್ರಪೂಜೆಯೊಂದಿಗೆ 2025ರ ಮೈಸೂರು ದಸರಾ ಮಹೋತ್ಸವವನ್ನು ಸಾಹಿತಿ ಬಾನು ಮುಷ್ತಾಕ್ ಅವರು ಉದ್ಘಾಟಿಸಿದರು. ನಾಡಿನ ಕಲೆ, ಸಾಹಿತ್ಯ, ಸಂಸ್ಕೃತಿ, ಪರಂಪರೆಯನ್ನು ಆರಾಧಿಸಿ, ಸಂಭ್ರಮಿಸುವ ಈ ಶುಭ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಾಜರಿದ್ದು, ಸಮಸ್ತ ಕನ್ನಡಿಗರ ಬಾಳು ಹಸನಾಗಲಿ ಎಂದು ತಾಯಿಯಲ್ಲಿ ಪ್ರಾರ್ಥಿಸಿದರು.









