
ಕುಶಾಲನಗರ, ಸೆ.23 NEWS DESK : ಸೋಮವಾರಪೇಟೆ ಮತ್ತು ಕುಶಾಲನಗರ ತಾಲ್ಲೂಕು ಮಟ್ಟದ ಪದವಿ ಪೂರ್ವ ಕಾಲೇಜುಗಳ ಕ್ರೀಡಾಕೂಟದಲ್ಲಿ ಹೆಬ್ಬಾಲೆ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಬಾಲಕರ ಥ್ರೋಬಾಲ್ ಪಂದ್ಯಾವಳಿಯಲ್ಲಿ ಕೂಡಿಗೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಬಾಲಕರು ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಶಿರಂಗಾಲ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ನಡೆದ ತಾಲ್ಲೂಕು ಮಟ್ಟದ ಬಾಲಕರು ಮತ್ತು ಬಾಲಕಿಯರ ಖೋ- ಖೋ ಪಂದ್ಯಾವಳಿ ನಡೆಯಿತು. ಈ ಪಂದ್ಯಾವಳಿಯಲ್ಲಿ ಕೂಡ ಕೂಡಿಗೆ ಸರ್ಕಾರಿ ಪಿಯೂ ಕಾಲೇಜಿನ ಬಾಲಕರು ಮತ್ತು ಬಾಲಕಿಯರು ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾ ಮಟ್ಟದ ಪಂದ್ಯಾವಳಿಗೆ ಆಯ್ಕೆಯಾಗಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲ ಹಂಡ್ರಂಗಿ ನಾಗರಾಜ್ ತಿಳಿಸಿದ್ದಾರೆ. ಎಲ್ಲಾ ಪಂದ್ಯಾವಳಿಗಳಲ್ಲಿ ಈ ತಂಡಗಳು ಇದೇ ಮೊದಲ ಬಾರಿಗೆ ಜಿಲ್ಲಾಮಟ್ಟದ ಪಂದ್ಯಾವಳಿಗೆ ಆಯ್ಕೆಗೊಂಡಿರುವುದು ಕಾಲೇಜಿಗೆ ಕೀರ್ತಿ ತಂದಿದೆ ಎಂದು ತಿಳಿಸಿದ್ದಾರೆ. ಈ ಪಂದ್ಯಾವಳಿಗಳ ತಂಡದ ವ್ಯವಸ್ಥಾಪಕರಾಗಿ ಕಾರ್ಯ ನಿರ್ವಹಿಸಿದ ಉಪನ್ಯಾಸಕರಾದ ಎಂ.ಟಿ.ರಮೇಶ್ ಮತ್ತು ನಂದಿನಿ ಅವರಿಗೆ ಹಾಗೂ ಕ್ರೀಡಾಪಟುಗಳಿಗೆ ಮತ್ತು ಉಪನ್ಯಾಸಕರ ವೃಂದಕ್ಕೂ ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಸೋಮಶೇಖರ್ ಹಾಗೂ ಪ್ರಾಂಶುಪಾಲ ನಾಗರಾಜ್ ಅಭಿನಂದನೆ ಸಲ್ಲಿಸಿದ್ದಾರೆ.









