Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ವಿರಾಜಪೇಟೆ, ಕುಶಾಲನಗರ ಮತ್ತು ಹುದಿಕೇರಿ ಆಸ್ಪತ್ರೆ ಮೇಲ್ದರ್ಜೆಗೆ : ಸಚಿವ ದಿನೇಶ್ ಗುಂಡೂರಾವ್*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ವಿರಾಜಪೇಟೆ, ಕುಶಾಲನಗರ ಮತ್ತು ಹುದಿಕೇರಿ ಆಸ್ಪತ್ರೆ ಮೇಲ್ದರ್ಜೆಗೆ : ಸಚಿವ ದಿನೇಶ್ ಗುಂಡೂರಾವ್*

ಸೆಪ್ಟೆಂಬರ್ 23, 20253 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಸೆ.23 NEWS DESK : ವಿರಾಜಪೇಟೆ ಸಾರ್ವಜನಿಕ ಆಸ್ಪತ್ರೆ ಜಿಲ್ಲಾಸ್ಪತ್ರೆಯಾಗಿ, ಹುದಿಕೇರಿಯ ಪ್ರಾಥಮಿಕ ಆರೋಗ್ಯ ಕೇಂದ್ರ ಸಮುದಾಯ ಆರೋಗ್ಯ ಕೇಂದ್ರವಾಗಿ ಹಾಗೂ ಕುಶಾಲನಗರ ಸಮುದಾಯ ಆರೋಗ್ಯ ಕೇಂದ್ರ ತಾಲ್ಲೂಕು ಆಸ್ಪತ್ರೆಯಾಗಿ ಮೇಲ್ದರ್ಜೆಗೇರಿಸಲಾಗುತ್ತಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ದಿನೇಶ್ ಗುಂಡೂರಾವ್ ಅವರು ತಿಳಿಸಿದ್ದಾರೆ. ವಿರಾಜಪೇಟೆ ಸಾರ್ವಜನಿಕ ಆಸ್ಪತ್ರೆ ಹಾಗೂ ಹುದಿಕೇರಿಯ ಪ್ರಾಥಮಿಕ ಆರೋಗ್ಯ ಕೇಂದ್ರ ವೀಕ್ಷಣೆ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಸಚಿವರು ಈ ಬಾರಿ ಬಜೆಟ್ ಸಂದರ್ಭದಲ್ಲಿ ವಿರಾಜಪೇಟೆ ಸಾರ್ವಜನಿಕ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸಬೇಕು ಎಂದು ಪ್ರಕಟಿಸಲಾಗಿತ್ತು. ಹಾಗೆಯೇ ಪೊನ್ನಂಪೇಟೆ ಮತ್ತು ಕುಶಾಲನಗರ ಸಮುದಾಯ ಆರೋಗ್ಯ ಕೇಂದ್ರವನ್ನು ತಾಲ್ಲೂಕು ಆಸ್ಪತ್ರೆಯನ್ನಾಗಿ ಮೇಲ್ದರ್ಜೆಗೇರಿಸಲು ಉದ್ದೇಶವಾಗಿತ್ತು. ಕುಶಾಲನಗರ ಸಮುದಾಯ ಆರೋಗ್ಯ ಕೇಂದ್ರವನ್ನು ತಾಲ್ಲೂಕು ಆಸ್ಪತ್ರೆಯನ್ನಾಗಿ ಹಾಗೂ ಹುದಿಕೇರಿ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಸಮುದಾಯ ಆರೋಗ್ಯ ಕೇಂದ್ರವನ್ನಾಗಿ ಮೇಲ್ದರ್ಜೆಗೇರಿಸಲಾಗುತ್ತದೆ ಎಂದು ಸಚಿವರು ಹೇಳಿದರು. ‘ವಿರಾಜಪೇಟೆಯಲ್ಲಿ 400 ಹಾಸಿಗೆ ಆಸ್ಪತ್ರೆ ನಿರ್ಮಿಸುವ ಉದ್ದೇಶವಾಗಿತ್ತು. ಸದ್ಯ 250 ಹಾಸಿಗೆಯ ಆಸ್ಪತ್ರೆ ನಿರ್ಮಿಸಲಾಗುತ್ತಿದ್ದು, ವೈದ್ಯರು ಹಾಗೂ ಶುಶ್ರೂಷಕರು ಸೇರಿದಂತೆ ಸಿಬ್ಬಂದಿಗಳ ವಸತಿ ಗೃಹವನ್ನು ಸಹ ನಿರ್ಮಿಸಲಾಗುತ್ತಿದೆ ಸುಮಾರು 105 ಕೋಟಿ ರೂ. ವೆಚ್ಚದಲ್ಲಿ ವಿರಾಜಪೇಟೆ ಸಾರ್ವಜನಿಕ ಆಸ್ಪತ್ರೆಯನ್ನು ಜಿಲ್ಲಾಸ್ಪತ್ರೆಯನ್ನಾಗಿ ಮೇಲ್ದರ್ಜೆಗೇರಿಸಲಾಗುತ್ತದೆ ಎಂದು ದಿನೇಶ್ ಗುಂಡೂರಾವ್ ಅವರು ಮಾಹಿತಿ ನೀಡಿದರು. ಹುದಿಕೇರಿಯಲ್ಲಿ ಸುಮಾರು 6 ಕೋಟಿ ರೂ. ವೆಚ್ಚದಲ್ಲಿ 30 ಹಾಸಿಗೆಯ ಸಮುದಾಯ ಆರೋಗ್ಯ ಕೇಂದ್ರವನ್ನಾಗಿ ಮೇಲ್ದರ್ಜೆಗೇರಿಸಲಾಗುತ್ತದೆ. ಹಾಗೆಯೇ ಕುಶಾಲನಗರದಲ್ಲಿ 40 ಕೋಟಿ ರೂ. ವೆಚ್ಚದಲ್ಲಿ ತಾಲ್ಲೂಕು ಆಸ್ಪತ್ರೆಯನ್ನಾಗಿ ಮೇಲ್ದರ್ಜೆಗೇರಿಸಲಾಗುತ್ತಿದೆ ಎಂದು ಸಚಿವರು ಮಾಹಿತಿ ನೀಡಿದರು.’ವಸತಿ ಗೃಹ ನಿರ್ಮಾಣ ಸೇರಿದಂತೆ ಸಚಿವ ಸಂಪುಟದಲ್ಲಿ ಚರ್ಚಿಸಿ ಮುಂದಿನ ವಾರ ಟೆಂಡರ್ ಆಹ್ವಾನಿಸಲಾಗುವುದು. ಜೊತೆಗೆ ನವೆಂಬರ್ ಅಥವಾ ಡಿಸೆಂಬರ್ ತಿಂಗಳಲ್ಲಿ ವಿರಾಜಪೇಟೆ, ಹುದಿಕೇರಿ ಮತ್ತು ಕುಶಾಲನಗರ ಆಸ್ಪತ್ರೆ ಮೇಲ್ದರ್ಜೆಗೇರಿಸುವ ಸಂಬಂಧ ಭೂಮಿ ಪೂಜೆ ನೆರವೇರಿಸಲಾಗುವುದು ಎಂದು ಸಚಿವರು ಪ್ರಕಟಿಸಿದರು. ಸ್ಥಳೀಯ ಶಾಸಕರಾದ ಎ.ಎಸ್.ಪೊನ್ನಣ್ಣ ಅವರ ಪ್ರಯತ್ನದಿಂದ ವಿರಾಜಪೇಟೆ ಕ್ಷೇತ್ರದ ಆಸ್ಪತ್ರೆ ಸೇರಿದಂತೆ ಹೆಚ್ಚಿನ ಅಭಿವೃದ್ಧಿಗೆ ಸರ್ಕಾರ ಎಲ್ಲಾ ರೀತಿಯ ಸಹಕಾರ ನೀಡುತ್ತಿದೆ. ನಾನು ಸಹ ಇದೇ ಜಿಲ್ಲೆಯವನಾಗಿರುವುದರಿಂದ ಜಿಲ್ಲೆಯ ಅಭಿವೃದ್ಧಿಗೆ ಕೈಜೋಡಿಸಲಾಗುವುದು ಎಂದು ದಿನೇಶ್ ಗುಂಡೂರಾವ್ ಅವರು ಹೇಳಿದರು. ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸಚಿವರು ಪ್ರಜಾಪ್ರಭುತ್ವದಲ್ಲಿ ಯಾವುದೇ ಕೆಲಸ ಮಾಡುವಾಗ ಪರ ವಿರೋಧ ಇದ್ದೇ ಇರುತ್ತದೆ. ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಎಲ್ಲಾ ವರ್ಗದ ಜನರಿಗೆ ಸರ್ಕಾರದ ಕಾರ್ಯಕ್ರಮಗಳನ್ನು ಮತ್ತಷ್ಟು ಪರಿಣಾಮಕಾರಿಯಾಗಿ ತಲುಪಿಸಲು ಸಹಕಾರಿಯಾಗಲಿದೆ ಎಂದು ತಿಳಿಸಿದರು. ಪ್ರತೀ ಬಡವರಿಗೂ ಮೀಸಲಾತಿ ಕಲ್ಪಿಸಬೇಕು ಎಂಬುದು ಸರ್ಕಾರದ ಆಶಯವಾಗಿದೆ. ಆ ನಿಟ್ಟಿನಲ್ಲಿ ಸರ್ಕಾರದ ವಿಶೇಷ ಸೌಲಭ್ಯಗಳನ್ನು ತಲುಪಿಸುವುದು ಅತೀ ಮುಖ್ಯವಾಗಿದ್ದು, ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕೈಗೊಳ್ಳಲಾಗುತ್ತದೆ ಎಂದರು. ಬಡ ಜನರಿಗೆ ಕಾರ್ಯಕ್ರಮಗಳನ್ನು ತಲುಪಿಸುವಲ್ಲಿ ಅಂಕಿ ಅಂಶಗಳು ಅತೀ ಮುಖ್ಯವಾಗಿದ್ದು, ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕೈಗೊಳ್ಳಲಾಗಿದೆ. ಅದನ್ನು ಬಿಟ್ಟು ಅಪಸ್ವರ ತೆಗೆಯುವುದು ಸರಿಯಲ್ಲ. ಅನುಮಾನ ಇದ್ದಲ್ಲಿ ಮಾಹಿತಿ ನೀಡಬಹುದಾಗಿದೆ. ಅದನ್ನು ಬಿಟ್ಟು ಗೊಂದಲ ನಿರ್ಮಾಣ ಮಾಡುವುದು ಬೇಡ ಎಂದರು. ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರಾದ ಎ.ಎಸ್.ಪೊನ್ನಣ್ಣ ಅವರು ಮಾತನಾಡಿ ಚುನಾವಣಾ ಸಂದರ್ಭದಲ್ಲಿಯೇ ವಿರಾಜಪೇಟೆ ಆಸ್ಪತ್ರೆಯನ್ನು ಜಿಲ್ಲಾಸ್ಪತ್ರೆಯನ್ನಾಗಿ ಮೇಲ್ದರ್ಜೆಗೇರಿಸಬೇಕೆಂದು ಪ್ರಕಟಿಸಲಾಗಿತ್ತು. ಅದರಂತೆ ಈಗ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸಲಾಗುತ್ತದೆ ಎಂದು ಹೇಳಿದರು. ಹಾಗೆಯೇ ಹುದಿಕೇರಿಯ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಸಮುದಾಯ ಆರೋಗ್ಯ ಕೇಂದ್ರವನ್ನಾಗಿ ಮೇಲ್ದರ್ಜೆಗೇರಿಸಲಾಗುತ್ತದೆ ಎಂದು ಮಾಹಿತಿ ನೀಡಿದರು. ತಾಲ್ಲೂಕು ಆಸ್ಪತ್ರೆಯನ್ನು ಜಿಲ್ಲಾಸ್ಪತ್ರೆಯನ್ನಾಗಿ ಮೇಲ್ದರ್ಜೆಗೇರಿಸಬೇಕು ಎಂದು ಪ್ರತ್ಯೇಕ ಪ್ರಣಾಳಿಕೆಯಲ್ಲಿ ಪ್ರಕಟಿಸಲಾಗಿತ್ತು, ಆ ನಿಟ್ಟಿನಲ್ಲಿ ಮುಖ್ಯಮಂತ್ರಿ ಅವರು ಮತ್ತು ಸಚಿವರು ಸ್ಪಂದಿಸಿದ್ದಾರೆ. ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದರು. ಒಳ್ಳೆಯ ಆಸ್ಪತ್ರೆ ನಿರ್ಮಾಣ ಮಾಡಲಾಗುವುದು, ಶೀಘ್ರ ಕಾಮಗಾರಿ ಆರಂಭಿಸಲಾಗುವುದು ಎಂದು ಎ.ಎಸ್.ಪೊನ್ನಣ್ಣ ಹೇಳಿದರು. ಸಚಿವರಾದ ದಿನೇಶ್ ಗುಂಡೂರಾವ್ ಅವರು ವಿರಾಜಪೇಟೆಯ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ ರೋಗಿಗಳ ಆರೋಗ್ಯ ಕ್ಷೇಮ ವಿಚಾರಿಸಿದರು. ತೀವ್ರ ನಿಗಾ ಘಟಕ ಸೇರಿದಂತೆ ವಿವಿಧ ವಿಭಾಗಗಳಿಗೆ ತೆರಳಿ ಪರಿಶೀಲಿಸಿದರು. ಬಡ ಜನರಿಗೆ ಉತ್ತಮ ಆರೋಗ್ಯ ಸೇವೆ ಕಲ್ಪಿಸುವಂತೆ ವೈದ್ಯರಿಗೆ ಸೂಚಿಸಿದರು. ಎಂಜಿನಿಯರ್‍ಗಳ ಜೊತೆ ಜಾಗ ಪರಿಶೀಲಿಸಿದರು. ಬಳಿಕ ಹುದಿಕೇರಿಯಲ್ಲಿ ನಿರ್ಮಾಣವಾಗುವ ಸಮುದಾಯ ಆರೋಗ್ಯ ಕೇಂದ್ರ ಸ್ಥಳ ವೀಕ್ಷಿಸಿದರು. ನಗರದ ಕುಶಾಲನಗರದಲ್ಲಿ ನೂತನವಾಗಿ ನಿರ್ಮಿಸಲಾಗುತ್ತಿರುವ ತಾಲ್ಲೂಕು ಆಸ್ಪತ್ರೆಯ ಸ್ಥಳ ವೀಕ್ಷಣೆ ಮಾಡಿದರು. ಬಳಿಕ ಆಲೂರು ಸಿದ್ದಾಪುರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ವೀಕ್ಷಿಸಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಕುಮಾರ್, ಕಾರ್ಯಕ್ರಮ ಅನುಷ್ಠಾನಾಧಿಕಾರಿಗಳಾದ ಡಾ.ಆನಂದ್, ಡಾ.ಸನತ್ ಕುಮಾರ್, ಡಾ.ಮದುಸೂದನ್, ತಾಲ್ಲೂಕು ವೈದ್ಯಾಧಿಕಾರಿಗಳಾದ ಡಾ.ಸಿಂಪಿ, ಡಾ.ಯತೀಶ್ ಕುಮಾರ್, ವಿರಾಜಪೇಟೆ ಪುರಸಭೆ ಅಧ್ಯಕ್ಷರಾದ ಮನೆಯಪಂಡ ದೇಚಮ್ಮ ಕಾಳಪ್ಪ, ಪುರಸಭೆ ಮುಖ್ಯಾಧಿಕಾರಿ ನಾಚಪ್ಪ, ಇತರರು ಇದ್ದರು.

 

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.