Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಏ.2 ರಂದು ಸೋಮವಾರಪೇಟೆ ತಾ.ಪಂ.ಕೆಡಿಪಿ ಸಭೆ*
  • *ವಿರಾಜಪೇಟೆಯ ಮಲೆ ಮಹದೇಶ್ವರ ದೇವಾಲಯದ ವಾರ್ಷಿಕ ಉತ್ಸವ*
  • *ಮಾ.15 ರಂದು ಮೂರ್ನಾಡು ಗೌಡ ಮಹಿಳಾ ಒಕ್ಕೂಟದಿಂದ ಮಹಿಳಾ ದಿನಾಚರಣೆ*
  • *ವಿರಾಜಪೇಟೆ ಶ್ರೀ ಮುತ್ತಪ್ಪ ದೇವಾಲಯದ ತೆರೆ ಮಹೋತ್ಸವಕ್ಕೆ ಚಾಲನೆ*
  • *ಫಾಸ್ಟ್ ಪುಡ್(ಚಾಟ್ಸ್ ಸೆಂಟರ್) ತಯಾರಿಕೆ ತರಬೇತಿಗೆ ಅರ್ಜಿ ಆಹ್ವಾನ*
  • *ಕೋಟ್ಪಾ ಕಾಯ್ದೆ ಉಲ್ಲಂಘನೆ : 1800 ರೂ.ದಂಡ*
  • *ಸ್ವ-ಉದ್ಯೋಗ ತರಬೇತಿಗೆ ಅರ್ಜಿ ಆಹ್ವಾನ*
  • *ಅಡುಗೆ ಅನಿಲದ ಕೊರತೆ : ಕೇಂದ್ರ ವಿರುದ್ಧ ಕುಶಾಲನಗರದಲ್ಲಿ ಪ್ರತಿಭಟನೆ*
  • *ಕನ್ನಡ ಸಾಹಿತ್ಯ ಸುದೀರ್ಘವಾದ ಕಾಲದಿಂದ ಜೀವಂತಿಕೆ ಉಳಿಸಿಕೊಂಡು ಬೆಳೆಯುತ್ತಿರುವ ಸಾಹಿತ್ಯ : ಪ್ರೊ.ಡಿ.ಕೆ.ಸರಸ್ವತಿ*
  • *ಸೋಮವಾರಪೇಟೆ : ಹೋಟೆಲ್ ಹಾಗೂ ಬೇಕರಿಗಳಿಗೆ ಆಹಾರ ನಿರೀಕ್ಷಕರ ಭೇಟಿ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮೂಲನಿವಾಸಿ ಅರಮನೆಪಾಲೆ ಸಮಾಜದ ಮಹಾಸಭೆ : ನಿರ್ಲಕ್ಷಿಸಲ್ಪಟ್ಟ ಮತ್ತು ಅಳಿವಿನಂಚಿನ ಸಮುದಾಯದ ರಕ್ಷಣೆ ನಾಗರೀಕ ಸಮಾಜದ ಹೊಣೆ : ಡಾ.ಸುಭಾಷ್ ನಾಣಯ್ಯ ಅಭಿಮತ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮೂಲನಿವಾಸಿ ಅರಮನೆಪಾಲೆ ಸಮಾಜದ ಮಹಾಸಭೆ : ನಿರ್ಲಕ್ಷಿಸಲ್ಪಟ್ಟ ಮತ್ತು ಅಳಿವಿನಂಚಿನ ಸಮುದಾಯದ ರಕ್ಷಣೆ ನಾಗರೀಕ ಸಮಾಜದ ಹೊಣೆ : ಡಾ.ಸುಭಾಷ್ ನಾಣಯ್ಯ ಅಭಿಮತ*

ಸೆಪ್ಟೆಂಬರ್ 24, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಸೆ.24 NEWS DESK : ನಿರ್ಲಕ್ಷಿಸಲ್ಪಟ್ಟ ಮತ್ತು ಅಳಿವಿನಂಚಿನ ಸಮುದಾಯಗಳ ರಕ್ಷಣೆ ನಾಗರೀಕ ಸಮಾಜದ ಹೊಣೆಯಾಗಬೇಕು ಎಂದು ಕೊಡವ ಭಾಷಿಕ ಸಮುದಾಯಗಳ ಕೂಟದ ಅಧ್ಯಕ್ಷ ಡಾ.ಮೇಚಿರ ಸುಭಾಷ್ ನಾಣಯ್ಯ ಅವರು ಅಭಿಪ್ರಾಯಪಟ್ಟಿದ್ದಾರೆ. ಹಾಕತ್ತೂರು ಸರಕಾರಿ ಪ್ರಾಥಮಿಕ ಶಾಲಾ ಸಭಾಂಗಣದಲ್ಲಿ ನಡೆದ ಕೊಡಗು ಮೂಲನಿವಾಸಿ ಅರಮನೆಪಾಲೆ ಸಮಾಜದ ವಾರ್ಷಿಕ ಮಹಾಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕೊಡಗಿನ ಹಲವು ಸಮುದಾಯಗಳು ಇಂದು ಅಳಿವಿನಂಚಿಗೆ ಬಂದು ತಲುಪಿದ್ದು, ಅದರಲ್ಲಿ ಅರಮನೆಪಾಲೆ ಸಮುದಾಯವು ಒಂದು. ಇದು ಕೊಡಗಿನಲ್ಲಿ ತನ್ನದೇ ಆದ ಸಾಂಸ್ಕೃತಿಕ ಹಿನ್ನೆಲೆಯನ್ನು ಹೊಂದಿದೆ. ಕೊಡಗಿನ ಕೊಡವ ಸಂಸ್ಕೃತಿಯ ಮೂಲ ಬೇರುಗಳನ್ನು ಹೊಂದಿರುವ ಈ ಸಮುದಾಯವನ್ನು ಸರಕಾರ ಇಲ್ಲಿಯವರೆಗೆ ಗುರುತಿಸದೆ ಇರುವುದು ವಿಪರ್ಯಾಸ ಎಂದು ಬೇಸರ ವ್ಯಕ್ತಪಡಿಸಿದರು. ನಿರ್ಲಕ್ಷ್ಯಕ್ಕೆ ಒಳಗಾಗುವ ಸಮುದಾಯಗಳ ರಕ್ಷಣೆ ನಾಗರೀಕ ಸಮಾಜದ  ಹೊಣೆಯಾಗಿದೆ. ಈ ನಿಟ್ಟಿನಲ್ಲಿ ಕೊಡವ ಭಾಷಿಕ ಸಮುದಾಯಗಳ ಕೂಟ ಎಲ್ಲಾ ರೀತಿಯ ಸಲಹೆ, ಸಹಕಾರ ನೀಡಲು ಮತ್ತು ಅಗತ್ಯ ಕ್ರಮ ಕೈಗೊಳ್ಳಲು ಸದಾ ಸಿದ್ಧವಿದೆ ಎಂದು ಡಾ.ಸುಭಾಷ್ ನಾಣಯ್ಯ ಭರವಸೆ ನೀಡಿದರು. ಅರಮನೆಪಾಲೆ ಜನಾಂಗದ ಸಾಂಸ್ಕೃತಿಕ ಆಚರಣೆಗಳು ಅಳಿವಿನಂಚಿಗೆ ತಲುಪಿದ್ದು, ಪರಿಸ್ಥಿತಿ ಹೀಗೇ ಮುಂದುವರಿದರೆ ಒಂದು ಮೂಲ ಸಂಸ್ಕೃತಿಯೇ ಇಲ್ಲದಾಗುವ ಅಪಾಯವಿದೆ. ಇದರ ಪರಿಣಾಮವನ್ನು ಇಡೀ ಪ್ರಜ್ಞಾವಂತ ಸಮಾಜ ಹೊರಬೇಕಾಗುತ್ತದೆ ಎಂದರು. ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ ನ ಮಡಿಕೇರಿ ತಾಲ್ಲೂಕು ಘಟಕದ ಅಧ್ಯಕ್ಷರು ಹಾಗೂ ಅರಮನೆಪಾಲೆ ಸಮಾಜದ ಪ್ರಧಾನ ಸಂಘಟಕ ಪಿ.ಕೆ.ಮಂದಣ್ಣ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಕೊಡಗಿನ ಅತೀ ಪುರಾತನ ಅರಮನೆಪಾಲೆ ಜನಾಂಗ ಇಂದು ಅತ್ಯಲ್ಪ ಜನಸಂಖ್ಯೆಯನ್ನು ಹೊಂದಿದ್ದು, ವಿನಾಶದ ಹಾದಿಯಲ್ಲಿದೆ. ಸರಕಾರದ ಲೆಕ್ಕಗಳಲ್ಲಿ ಸಂಖ್ಯೆ 15 ಸಾವಿರ ಎಂದು ಇದೆ. ಜಾತಿಗಳಿಗೆ ಸಂಬಂಧಿಸಿದಂತೆ ಬ್ರಿಟಿಷರ ಅವೈಜ್ಞಾನಿಕ ನೀತಿಗಳನ್ನೇ ಸ್ವತಂತ್ರ ಭಾರತದ ಸರಕಾರಗಳೂ ಅನುಸರಿಸುತ್ತಿವೆ ಎಂದು ಆರೋಪಿಸಿದರು. ಕೊಡವ ಸಂಸ್ಕೃತಿಯ ಅವಿಭಾಜ್ಯ ಅಂಗವಾಗಿರುವ ಅರಮನೆಪಾಲೆ ಸಮುದಾಯಕ್ಕೆ ಕೊಡಗಿನಲ್ಲಿ ಜಾತಿಯಾಗಿ ಮಾನ್ಯತೆಯೇ ಇಲ್ಲದಾಗಿರುವುದು ದೊಡ್ಡ ದುರಂತ. ಕೇವಲ ಓಟು ಬ್ಯಾಂಕ್ ರಾಜಕಾರಣಕ್ಕಾಗಿ ಜನಾಂಗವನ್ನು ಒತ್ತಾಯ ಪೂರ್ವಕವಾಗಿ ಯಾವುದೋ ಜಾತಿಗೆ ಸೇರಿಸಲಾಗುತ್ತಿದೆ. ಕೊಡವ ಸಂಸ್ಕೃತಿ, ಆಚಾರ ವಿಚಾರ, ಪದ್ಧತಿ, ಪರಂಪರೆಯ ಆಚರಣೆಗೆ ಸಮುದಾಯ ಭಯ ಪಡುವಂತಾಗಿದೆ. ಇದು ನಾಗರೀಕ ಸಮಾಜದ ದುಸ್ಥಿತಿ ಮತ್ತು ಸಮುದಾಯದ ದುರ್ವಿಧಿಯಾಗಿದೆ ಎಂದು ವಿಷಾದ ವ್ಯಕ್ತಪಡಿಸಿದರು. ಸಮಾಜದ ಪ್ರಧಾನ ಸಂಚಾಲಕ ಅರಮನೆಪಾಲೆರ ಮಂಜುನಾಥ್ ಜಿ. ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮುಖ್ಯ ಅತಿಥಿಗಳಾಗಿ ಅರಮನೆಪಾಲೆರ ದೇವಯ್ಯ ಕಕ್ಕಬ್ಬೆ, ಮಾಜಿ ಸೈನಿಕರಾದ ಅರಮನೆಪಾಲೆರ ಸುಭಾಷ್ ಬಾಳುಗೋಡು, ಅರಮನೆಪಾಲೆರ ಶಿವಪ್ಪ ಕಂಡಿಮಕ್ಕಿ, ಅರಮನೆಪಾಲೆ ಸಮಾಜದ ಕಾರ್ಯದರ್ಶಿ ಅರಮನೆಪಾಲೆರ ದೇವಯ್ಯ ಹಾಕತ್ತೂರು, ವಿವಿಧ ಗ್ರಾಮ ಸಮಿತಿ, ಸಮಾಜದ ಕ್ರೀಡಾ ಸಮಿತಿ, ಮರಣ ಧನ ಸಹಾಯ ನಿಧಿ ಸಮಿತಿ, ಕ್ರಿಕೆಟ್ ಪಂದ್ಯಾವಳಿ ಸಮಿತಿಯ ಪದಾಧಿಕಾರಿಗಳು ಹಾಗೂ ಸಮಾಜದ ಸದಸ್ಯರು ಉಪಸ್ಥಿತರಿದ್ದರು. ನಿತ್ಯಾ ಹಾಗೂ ವರ್ಷ ಪ್ರಾರ್ಥಿಸಿದ ಕಾರ್ಯಕ್ರಮದಲ್ಲಿ ರಘು ತಂಡದಿಂದ ಪ್ರದರ್ಶಿಸಲ್ಪಟ್ಟ ಹಾಕತ್ತೂರು ಭಾಗದ ಅರಮನೆಪಾಲೆ ಜಾನಪದ ಪುತ್ತರಿ ಆಚರಣೆ ಕೋರಕಳಿ ಪ್ರಮುಖ ಆಕರ್ಷಣೆಯಾಗಿ ಗಮನ ಸೆಳೆಯಿತು. ಡಿಂಪಲ್ ಪೇರೂರು, ಹಾಕತ್ತೂರಿನ ಯಶಸ್ವಿನಿ ಹಾಗೂ ವರ್ಷ ಅವರ ನೃತ್ಯ ನೆರೆದಿದ್ದವರ ಮೆಚ್ಚುಗೆಗೆ ಪಾತ್ರವಾಯಿತು. ರಾಷ್ಟ್ರಗೀತೆಯೊಂದಿಗೆ ಕಾರ್ಯಕ್ರಮ ಸಮಾರೋಪಗೊಂಡಿತು. *ನೂತನ ಆಡಳಿತ ಮಂಡಳಿ* ಅರಮನೆಪಾಲೆ ಸಮಾಜದ ಮುಂದಿನ 5 ವರ್ಷಗಳ ಅವಧಿಗೆ ನೂತನ ಆಡಳಿತ ಮಂಡಳಿಯನ್ನು ರಚಿಸಲಾಗಿದ್ದು, ಅಧ್ಯಕ್ಷರಾಗಿ ಅರಮನೆಪಾಲೆರ ದೇವಯ್ಯ ಕಕ್ಕಬ್ಬೆ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಅರಮನೆಪಾಲೆರ ಸುಜು ದೇವಯ್ಯ ಬಾಳುಗೋಡು, ಕಾರ್ಯದರ್ಶಿಯಾಗಿ ಅರಮನೆಪಾಲೆರ ದೇವಯ್ಯ ಹಾಕತ್ತೂರು, ಖಜಾಂಚಿಯಾಗಿ ಸುಭಾಷ್ ಬಾಳುಗೋಡು ನೇಮಕಗೊಂಡರು. ನಿರ್ದೇಶಕರುಗಳನ್ನಾಗಿ ಅರಮನೆಪಾಲೆರ ದಿನೇಶ್ ಬಿಳಿಗೇರಿ, ಲೀನಾಶಿವಪ್ಪ ಕಂಡಿಮಕ್ಕಿ, ದಮಯಂತಿ ಬಿಳಿಗೇರಿ, ಭಾರತಿ ಚೆಯ್ಯಂಡಾಣೆ, ಸರಿತಾ ನಾಗಬಾಣೆ, ಅರಮನೆಪಾಲೆರ ಯತೀಶ್ ಬಿದ್ದಪ್ಪ ಬಾಳುಗೋಡು, ಅರಮನೆಪಾಲೆರ ಮಧು ಕುಂಜಿಲ, ಕಕ್ಕಬ್ಬೆ, ಅರಮನೆಪಾಲೆರ ಗಣೇಶ್ ಚೆಯ್ಯಂಡಾಣೆ, ಅರಮನೆಪಾಲೆರ ವಿಶ್ವನಾಥ್ ಪೇರೂರು, ಅರಮನೆಪಾಲೆರ ಶಿವಪ್ಪ ಚೇಲಾವರ, ಅರಮನೆಪಾಲೆರ ಮಹೇಶ್ ಮಾದಾಪುರ ಅವರುಗಳನ್ನು ಆಯ್ಕೆ ಮಾಡಲಾಯಿತು.

 

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಏ.2 ರಂದು ಸೋಮವಾರಪೇಟೆ ತಾ.ಪಂ.ಕೆಡಿಪಿ ಸಭೆ*

ಮಾರ್ಚ್ 17, 2026

*ವಿರಾಜಪೇಟೆಯ ಮಲೆ ಮಹದೇಶ್ವರ ದೇವಾಲಯದ ವಾರ್ಷಿಕ ಉತ್ಸವ*

ಮಾರ್ಚ್ 17, 2026

*ಮಾ.15 ರಂದು ಮೂರ್ನಾಡು ಗೌಡ ಮಹಿಳಾ ಒಕ್ಕೂಟದಿಂದ ಮಹಿಳಾ ದಿನಾಚರಣೆ*

ಮಾರ್ಚ್ 17, 2026

*ವಿರಾಜಪೇಟೆಯ ಮಲೆ ಮಹದೇಶ್ವರ ದೇವಾಲಯದ ವಾರ್ಷಿಕ ಉತ್ಸವ*

ಮಾರ್ಚ್ 17, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ ಮಾ.17 NEWS DESK : ವಿರಾಜಪೇಟೆ ಸಮೀಪದ ಪ್ರಕೃತಿಯ ಸೊಬಗಿನ ನಡುವೆ ‘ಮಳೆ ದೇವರು’ಎಂದು ಹೆಸರುವಾಸಿಯಾಗಿರುವ ಮಲೆ ಮಹದೇಶ್ವರ…

*ಮಾ.15 ರಂದು ಮೂರ್ನಾಡು ಗೌಡ ಮಹಿಳಾ ಒಕ್ಕೂಟದಿಂದ ಮಹಿಳಾ ದಿನಾಚರಣೆ*

ಮಾರ್ಚ್ 17, 2026

*ವಿರಾಜಪೇಟೆ ಶ್ರೀ ಮುತ್ತಪ್ಪ ದೇವಾಲಯದ ತೆರೆ ಮಹೋತ್ಸವಕ್ಕೆ ಚಾಲನೆ*

ಮಾರ್ಚ್ 17, 2026

*ಫಾಸ್ಟ್ ಪುಡ್(ಚಾಟ್ಸ್ ಸೆಂಟರ್) ತಯಾರಿಕೆ ತರಬೇತಿಗೆ ಅರ್ಜಿ ಆಹ್ವಾನ*

ಮಾರ್ಚ್ 17, 2026

*ಕೋಟ್ಪಾ ಕಾಯ್ದೆ ಉಲ್ಲಂಘನೆ : 1800 ರೂ.ದಂಡ*

ಮಾರ್ಚ್ 17, 2026

*ಸ್ವ-ಉದ್ಯೋಗ ತರಬೇತಿಗೆ ಅರ್ಜಿ ಆಹ್ವಾನ*

ಮಾರ್ಚ್ 17, 2026

*ಅಡುಗೆ ಅನಿಲದ ಕೊರತೆ : ಕೇಂದ್ರ ವಿರುದ್ಧ ಕುಶಾಲನಗರದಲ್ಲಿ ಪ್ರತಿಭಟನೆ*

ಮಾರ್ಚ್ 17, 2026

*ಕನ್ನಡ ಸಾಹಿತ್ಯ ಸುದೀರ್ಘವಾದ ಕಾಲದಿಂದ ಜೀವಂತಿಕೆ ಉಳಿಸಿಕೊಂಡು ಬೆಳೆಯುತ್ತಿರುವ ಸಾಹಿತ್ಯ : ಪ್ರೊ.ಡಿ.ಕೆ.ಸರಸ್ವತಿ*

ಮಾರ್ಚ್ 17, 2026

*ಸೋಮವಾರಪೇಟೆ : ಹೋಟೆಲ್ ಹಾಗೂ ಬೇಕರಿಗಳಿಗೆ ಆಹಾರ ನಿರೀಕ್ಷಕರ ಭೇಟಿ*

ಮಾರ್ಚ್ 17, 2026

*ಶ್ರೀ ಚೈತನ್ಯ ಮಠಪುರ ಮುತ್ತಪ್ಪ ದೇವಸ್ಥಾನಕ್ಕೆ ಬೃಹತ್ ಗಾತ್ರದ ಸ್ಟೀಲ್ ಪಾತ್ರೆಯ ಕೊಡುಗೆ*

ಮಾರ್ಚ್ 17, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.