Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*‘ವಿದ್ಯಾರ್ಥಿಗಳಿಗೆ ನಾಯಕತ್ವದ ಗುಣಲಕ್ಷಣಗಳು’ ವಿಚಾರ ಸಂಕಿರಣ : ದೇಶಭಕ್ತಿ, ದೇಶ ರಕ್ಷಣೆಗೆ ಪರೀಕ್ಷಾಂಗ ಕುಲ ಸಚಿವ ಎಂ.ಸುರೇಶ್ ಕರೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*‘ವಿದ್ಯಾರ್ಥಿಗಳಿಗೆ ನಾಯಕತ್ವದ ಗುಣಲಕ್ಷಣಗಳು’ ವಿಚಾರ ಸಂಕಿರಣ : ದೇಶಭಕ್ತಿ, ದೇಶ ರಕ್ಷಣೆಗೆ ಪರೀಕ್ಷಾಂಗ ಕುಲ ಸಚಿವ ಎಂ.ಸುರೇಶ್ ಕರೆ*

ಸೆಪ್ಟೆಂಬರ್ 25, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಸೆ.25 NEWS DESK : ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಜೀವನದಲ್ಲಿ ದೇಶಭಕ್ತಿ ಮತ್ತು ದೇಶ ರಕ್ಷಣೆಯ ಕುರಿತು ದೃಢ ನಿರ್ಧಾರಗಳನ್ನು ಕೈಗೊಳ್ಳಬೇಕು ಎಂದು ಕೊಡಗು ವಿಶ್ವವಿದ್ಯಾಲಯದ ಪರೀಕ್ಷಾಂಗ ಕುಲ ಸಚಿವ ಎಂ.ಸುರೇಶ್ ಕರೆ ನೀಡಿದ್ದಾರೆ. ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜ್ ನ ಎನ್‍ಸಿಸಿ ಘಟಕದ ವತಿಯಿಂದ ‘ವಿದ್ಯಾರ್ಥಿಗಳಿಗೆ ನಾಯಕತ್ವದ ಗುಣಲಕ್ಷಣಗಳು’ ಎಂಬ ವಿಷಯದ ಕುರಿತು ನಡೆದ ವಿಚಾರ ಸಂಕಿರಣ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ವಿದ್ಯಾರ್ಥಿಗಳು ಎನ್‍ಸಿಸಿಗೆ ಸೇರುವುದರ ಮೂಲಕ ಶಿಸ್ತನ್ನು ಅಳವಡಿಸಿಕೊಂಡು ಸಮಾಜದಲ್ಲಿ ಉತ್ತಮ ನಾಗರೀಕರಾಗಿ ಬದುಕಬೇಕು. ತಮ್ಮ ಭವಿಷ್ಯದ ಗುರಿಯನ್ನು ತಲುಪಬೇಕಾದರೆ ಶ್ರಮ ಮತ್ತು ಹೋರಾಟ ಮನೋಭಾವ ಹೊಂದಿರಬೇಕು ಎಂದರು. ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಂಡು ಮಾತನಾಡಿದ ಐಕ್ಯುಎಸಿ ಹಾಗೂ ಭೌತಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ.ಕೆ.ಪಿ.ನಾಗರಾಜು ಅವರು ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಶಿಸ್ತು, ಸಂಯಮ, ಧೈರ್ಯ, ಕ್ರೀಡಾ ಸ್ಫೂರ್ತಿ, ಛಲ ಮತ್ತು ನಾಯಕತ್ವದ ಗುಣಗಳನ್ನು ಅಳವಡಿಸಿಕೊಂಡರೆ ಸಮರ್ಥ ನಾಯಕನಾಗಬಹುದು ಎಂದು ಸಲಹೆ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜ್ ನ ಪ್ರಾಂಶುಪಾಲ ಮೇಜರ್ ಪ್ರೊ.ಬಿ.ರಾಘವ ಅವರು, ವಿದ್ಯಾರ್ಥಿಗಳು ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಲು ಶಿಕ್ಷಣವನ್ನು ಒಂದು ಅಸ್ತ್ರವನ್ನಾಗಿ ಬಳಸಿಕೊಳ್ಳಬೇಕು ಎಂದರು. ತಾನು ಬೆಳೆಯುವುದರೊಂದಿಗೆ ಸಮಾಜ ಹಾಗೂ ದೇಶದ ಪರಿವರ್ತನೆಯಲ್ಲಿ ತೊಡಗಿಸಿಕೊಳ್ಳಬೇಕು. ಸುಸ್ಥಿರ ಅಭಿವೃದ್ಧಿಗೆ ಗಮನ ಹರಿಸಬೇಕು ಮತ್ತು ದುಶ್ಚಟಗಳಿಂದ ದೂರವಿರಬೇಕು. ಓದಿನೊಂದಿಗೆ ಪಠ್ಯೇತರ ಚಟುವಟಿಕೆಗಳಿಗೆ ಒತ್ತು ನೀಡಬೇಕೆಂದು ಕಿವಿಮಾತು ಹೇಳಿದರು. ಕಾರ್ಯಕ್ರಮದಲ್ಲಿ ಹಿಂದಿ ವಿಭಾಗದ ಉಪನ್ಯಾಸಕಿ ಖುರ್ಷಿದ ಬಾನು, ಪ್ರೊ.ತಿಪ್ಪೆಸ್ವಾಮಿ ಈ, ಪ್ರೊ.ಎಂ.ಪಿ.ಕೃಷ್ಣ, ಎನ್‍ಸಿಸಿ ಕೆಡೆಡ್‍ಗಳ ನಾಯಕರಾದ ಕೆ.ಎಂ.ತಿಮ್ಮಯ್ಯ, ನಿಖಿಲ್ ಸಿ.ಎ, ಎ.ಕೆ.ಸೋಮಣ್ಣ, ಚರಿಷ್ಮ ರೈ, ವರ್ಷ ಕೆ.ವಿ, ಬೋಧಕ ಹಾಗೂ ಬೋಧಕೇತರ ವರ್ಗದವರು ಉಪಸ್ಥಿತರಿದ್ದರು. ಸಿ.ಟಿ.ಸೆಜಲ್ ಸ್ವಾಗತಿಸಿ, ಕೆಡೆಟ್ ಮೇಹಕ್ ನಿರೂಪಿಸಿ, ಎಂ.ಎಸ್.ಆಶಿತ ವಂದಿಸಿದರು. ಇದೇ ಸಂದರ್ಭ ಕೆಡೆಟ್‍ಗಳಿಗೆ ರ್ಯಾಂಕಿಂಗ್ ಬ್ಯಾಡ್ಜ್‍ಗಳನ್ನು ನೀಡುವುದರ ಮೂಲಕ ನಾಯಕತ್ವದ ಜವಾಬ್ದಾರಿಯನ್ನು ಹಸ್ತಾಂತರಿಸಲಾಯಿತು. ಸಭಾ ಕಾರ್ಯಕ್ರಮದ ನಂತರ ಎನ್‍ಸಿಸಿ ಕೆಡೆಟ್‍ಗಳು ಭರತನಾಟ್ಯ, ಕರಾಟೆ, ಗಾಯನ ಮತ್ತು ಜನಪದ ನೃತ್ಯಗಳ ಮೂಲಕ ತಮ್ಮ ಪ್ರತಿಭಾ ಕೌಶಲ್ಯವನ್ನು ಪ್ರದರ್ಶಿಸಿ ಗಮನ ಸೆಳೆದರು.

 

 

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.