Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಪ್ರತಿಭಾ ಕಾರಂಜಿ :ರಾಜ್ಯಮಟ್ಟದಲ್ಲಿ ನಾಲ್ಕನೇ ಸ್ಥಾನ ಗಳಿಸಿದ ಕಾವೇರಿ ಶಾಲೆ ವಿದ್ಯಾರ್ಥಿಗಳು*
  • ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?
  • *ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*
  • ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!
  • *ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*
  • *ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*
  • *ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*
  • *ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*
  • *ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*
  • *ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಮೂರ್ನಾಡು ಗ್ರಾಮದಲ್ಲಿ ‘ಕೊಡವಾಮೆರ ಬಟ್ಟೆ-ಬೊಳಿ’ ಕಾರ್ಯಕ್ರಮ : ಕೊಡವ ಭಾಷಿಕರ ಅಸ್ಮಿತೆ ಉಳಿಸಿ ಬೆಳೆಸುವಲ್ಲಿ ಶ್ರಮಿಸಿ : ಅಜ್ಜಿನಿಕಂಡ ಮಹೇಶ್ ನಾಚಯ್ಯ*
ಇತ್ತೀಚಿನ ಸುದ್ದಿಗಳು

*ಮೂರ್ನಾಡು ಗ್ರಾಮದಲ್ಲಿ ‘ಕೊಡವಾಮೆರ ಬಟ್ಟೆ-ಬೊಳಿ’ ಕಾರ್ಯಕ್ರಮ : ಕೊಡವ ಭಾಷಿಕರ ಅಸ್ಮಿತೆ ಉಳಿಸಿ ಬೆಳೆಸುವಲ್ಲಿ ಶ್ರಮಿಸಿ : ಅಜ್ಜಿನಿಕಂಡ ಮಹೇಶ್ ನಾಚಯ್ಯ*

September 25, 20253 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ಸೆ.25 NEWS DESK : ಸರ್ಕಾರದಿಂದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಯುತ್ತಿದ್ದು, ಕೊಡವ ಭಾಷಿಕರು ಜಾತಿಯಲ್ಲಿ ಕೊಡವ ಎಂದು, ಉಪ ಜಾತಿಯಲ್ಲಿ 21 ಸಮಾಜಗಳು ತಮ್ಮ ತಮ್ಮ ಉಪಜಾತಿ, ಧರ್ಮದಲ್ಲಿ ‘ಕೊಡವ’ ಎಂದು ನಮೂದಿಸುವಂತಾಗಬೇಕು ಎಂದು ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಅಜ್ಜಿನಿಕಂಡ ಮಹೇಶ್ ನಾಚಯ್ಯ ಕರೆ ನೀಡಿದ್ದಾರೆ. ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಹಾಗೂ ಮೂರ್ನಾಡು ಕೊಡವ ಸಮಾಜ ಇವರ ಸಹಯೋಗದಲ್ಲಿ ಮೂರ್ನಾಡು ಕೊಡವ ಸಮಾಜದಲ್ಲಿ ಗುರುವಾರ ನಡೆದ ‘ಕೊಡವಾಮೆರ ಬಟ್ಟೆ-ಬೊಳಿ’ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸಂಸ್ಕೃತಿಯು ಧರ್ಮದ ಮೂಲ ಬೇರಾಗಿದೆ. ಧರ್ಮ ಮತ್ತು ಸಂಸ್ಕೃತಿಯನ್ನು ಬೇರೆ ಬೇರೆಯಾಗಿ ವಿಂಗಡಿಸಲು ಅಸಾಧ್ಯ. ಆ ದಿಸೆಯಲ್ಲಿ ಕೊಡವ ಧರ್ಮ ಎಂದು ನಮೂದಿಸುವಂತಾಗಬೇಕು ಎಂದು ಪ್ರತಿಪಾದಿಸಿದರು. ಕೊಡವ ಭಾಷಿಕರ ಅಸ್ಮಿತೆಯನ್ನು ಉಳಿಸುವಲ್ಲಿ ಕೊಡವ ಭಾಷಿಕರು ಮುಂದಾಗಬೇಕು. ಆ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಕೈಜೋಡಿಸುವಂತೆ ಮನವಿ ಮಾಡಿದರು. ಕೊಡವ ಭಾಷಿಕರಲ್ಲಿ 21 ಸಮಾಜಗಳು ಇದ್ದು, ಎಲ್ಲರೂ ಒಟ್ಟುಗೂಡಿ ಕೊಡವ ಸಂಸ್ಕೃತಿ, ಸಾಹಿತ್ಯ, ಪರಂಪರೆ ಉಳಿಸಿ ಬೆಳೆಸಬೇಕು ಎಂದು ತಿಳಿಸಿದರು. ಕೊಡಗು ಜಿಲ್ಲೆಯಲ್ಲಿ ಹಿಂದಿನ ಕಾಲದಿಂದಲೂ ಕಾಡನ್ನು ರಕ್ಷಿಸಿಕೊಂಡು ಎಲ್ಲಾ ದೇವಾನುದೇವತೆಗಳನ್ನು ಕಾಡಿನಲ್ಲಿ ಪೂಜಿಸಿಕೊಂಡು ಬರುತ್ತಿದ್ದಾರೆ. ಆ ನಿಟ್ಟಿನಲ್ಲಿ ಕೊಡಗು ಜಿಲ್ಲೆಯಲ್ಲಿನ ಕೊಡವ ಭಾಷಿಕ ಅಸ್ಮಿತೆಯನ್ನು ಉಳಿಸಿಕೊಂಡು ಹೋದರೆ ಮಾತ್ರ ಕೊಡವಾಮೆಯ ಉಳಿವಿಗೆ ಸಾಧ್ಯ. ಕೊಡವಾಮೆ ಉಳಿಯಲಿ, ಕೊಡವ ಧರ್ಮ ಬೆಳೆಯಲಿ ಎಂದು ಮಹೇಶ್ ನಾಚಯ್ಯ ಒತ್ತಿ ಹೇಳಿದರು.  ಕೊಡವರಲ್ಲಿ ಸುಮಾರು 1147 ಮನೆತನವಿದ್ದು, ಕೊಡವ ಭಾಷಿಕರು ಸೇರಿದಂತೆ ಒಟ್ಟು 2 ಸಾವಿರಕ್ಕೂ ಹೆಚ್ಚು ಮನೆತನಗಳಿವೆ. ಎಲ್ಲರೂ ಒಟ್ಟುಗೂಡಿ ಕೊಡವ ಸಂಸ್ಕೃತಿ, ಸಾಹಿತ್ಯ, ಕಲೆ, ಉಡುಗೆ ತೊಡುಗೆ ಭಾಷೆಯನ್ನು ಉಳಿಸಬೇಕು ಎಂದರು.  ಕೊಡವಾಮೆರ ಬಟ್ಟೆ ಬೊಳಿ ಎಂದರೆ ಬಂದಂತಹ ಹಾದಿಯನ್ನು ಮರೆಯದೆ, ನಶಿಸಿ ಹೋಗುತ್ತಿರುವುದನ್ನು ಬೆಳಕಿನೆಡೆಗೆ ನಡೆಸಿಕೊಂಡು ಹೋಗುವಂತಾಗಬೇಕು ಎಂಬುದು ಕಾರ್ಯಕ್ರಮದ ಉದ್ದೇಶವಾಗಿದೆ ಎಂದು ಮಹೇಶ್ ನಾಚಯ್ಯ ಅವರು ಅಭಿಪ್ರಾಯ ವ್ಯಕ್ತಪಡಿಸಿದರು. ಯೂಕೋ ಸಂಘಟನೆಯ ಕೊಕ್ಕಲೆಮಾಡ ಮಂಜು ಚಿಣ್ಣಪ್ಪ ಮಾತನಾಡಿ, ಕೊಡವ ಭಾಷೆಗೆ ಅದರದೆ ಆದ ಪ್ರಾಮುಖ್ಯತೆ ಇದೆ. ಕೊಡವ ಭಾಷೆಗೆ ತನ್ನದೇ ಆದ ಇತಿಹಾಸವಿದ್ದು, 1838 ರ ನಂತರ ರಾಬರ್ಟ್ ಎಂಬವರು 18 ವರ್ಷಗಳ ಕಾಲ ಭಾಷೆಯ ಬಗ್ಗೆ ಅಧ್ಯಯನ ಮಾಡಿ ಕೊಡವ ಭಾಷೆ ಸೇರಿದಂತೆ ಇತರೆ ಭಾಷೆಗಳಲ್ಲೂ ಪುಸ್ತಕ ಪ್ರಕಟಿಸಿದ್ದಾರೆ ಎಂದರು. ಕೊಡವ ಭಾಷೆ ದ್ರಾವಿಡ ಭಾಷೆಯಲ್ಲಿ ಅತ್ಯಂತ ಹಳೆಯದಾಗಿದೆ. ಆ ದಿಸೆಯಲ್ಲಿ ಕೊಡವ ಸಾಹಿತ್ಯ ಅಕಾಡೆಮಿ ವತಿಯಿಂದ ಕೊಡವ ಭಾಷೆಗೆ ಸಂಬಂಧಿಸಿದಂತೆ ಹಲವು ಉಪಯುಕ್ತ ಪುಸ್ತಕಗಳನ್ನು ಭಾಷಾಂತರ ಮಾಡಬೇಕು ಎಂದು ಮಂಜು ಚಿಣ್ಣಪ್ಪ ಕೋರಿದರು.  ಕೊಡವ ಭಾಷಿಕರ ಅಸ್ತಿತ್ವವನ್ನು ಉಳಿಸಿಕೊಂಡು ಹೋಗಬೇಕು. ಸಾಮಾಜಿಕ ಶೈಕ್ಷಣಿಕ ಗಣತಿ ಸಂದರ್ಭದಲ್ಲಿ ಎಚ್ಚರವಹಿಸಿ ಧರ್ಮ, ಜಾತಿ, ಉಪಜಾತಿ ಬರೆಸಬೇಕು. ಕೊಡವಾಮೆ ಎಂದರೆ ಇಲ್ಲಿನ ಮಣ್ಣು, ಭಾಷೆ, ಸಂಸ್ಕೃತಿ ಇದನ್ನು ಉಳಿಸಿ ಬೆಳೆಸಿಕೊಂಡು ಹೋಗಬೇಕು ಎಂದರು. ವಿಚಾರ ಮಂಡಿಸಿದ ಪಾಲೆಂಗಡ ಅಮಿತ್ ಭೀಮಯ್ಯ ಮಾತನಾಡಿ ‘ಕರಿಮರತ್ತ್ ಬೋಜ’ ಈ ಮರವನ್ನು ಬೆಳಕಿರದಂತಹ ಜಾಗದಲ್ಲಿ ಬೆಳೆಯಲಾಗುತ್ತದೆ. ಈ ಮರವು 20 ರಿಂದ 28 ಮೀಟರ್ ಉದ್ದ ಬೆಳೆಯುತ್ತದೆ. ಇದರ ಬೀಜವನ್ನು ಚರ್ಮ ರೋಗಕ್ಕೆ ಬಳಸಲಾಗುತ್ತದೆ ಎಂದರು.  ಇದಕ್ಕೆ ಕೊಡಗಿನಲ್ಲಿ ಉತ್ತಮ ಸ್ಥಾನವಿದ್ದು, ಈ ಮರಕ್ಕೆ ಸಿಡಿಲು ಬಡಿಯುವುದಿಲ್ಲ. ಯಾವುದೇ ನಕರಾತ್ಮಕ ಶಕ್ತಿ, ಜೊತೆಗೆ ಕ್ರಿಮಿಕೀಟಗಳು ಮುಟ್ಟುವುದಿಲ್ಲ. ಇದಕ್ಕೆ ಕೊಡವರು ದೇವರ ಸ್ಥಾನವನ್ನು ನೀಡಿ ಪೂಜಿಸುತ್ತಾರೆ. ಕರಿಮರದ ಗಿಡವನ್ನು ನಾವು ಬೆಳೆಸಿ ಮುಂದಿನ ಪೀಳಿಗೆಗೆ ಉಳಿಸುವಂತಾಗಬೇಕು ಎಂದು ಹೇಳಿದರು. ಅಕಾಡೆಮಿ ಸದಸ್ಯರಾದ ಕೊಂಡಿಜಮ್ಮನ ಬಾಲಕೃಷ್ಣ ಅವರು ಪ್ರಾಸ್ತಾವಿಕವಾಗಿ ಮಾತನಾಡಿ ಪ್ರಸಕ್ತ ಆಡಳಿತ ಮಂಡಳಿಯಿಂದ 12 ವಿವಿಧ ರೀತಿಯ ಕಾರ್ಯಕ್ರಮಗಳನ್ನು ನಡೆಸಿಕೊಂಡು ಬರಲಾಗಿದೆ ಎಂದು ತಿಳಿಸಿದರು. ಪುದಿಯೊಕ್ಕಡ ಕಾಶಿ ಕರುಂಬಯ್ಯ, ಗೌರಮ್ಮ ಮಾದಮ್ಮಯ್ಯ, ಪಳಂಗಂಡ ಮೇದಪ್ಪ, ಪೊನ್ನಚ್ಚಿರ ಎಸ್.ಮನೋಜ್, ಮಡೆಯಂಡ ಪೊನ್ನಪ್ಪ, ಪಳಂಗಡ ರೇಖಾ, ಅಕಾಡೆಮಿ ಸದಸ್ಯರಾದ ಚೊಟ್ಟೆಯಂಡ ಸಂಜು ಕಾವೇರಪ್ಪ, ಮೊಳ್ಳೆಕುಟ್ಟಂಡ ದಿನು ಬೋಜಪ್ಪ, ನಾಯಂದಿರ ಆರ್.ಶಿವಾಜಿ, ಪುತ್ತರಿರ ಪಪ್ಪು ತಿಮ್ಮಯ್ಯ, ಕಂಬೆಯಂಡ ಡೀನಾ ಬೋಜಣ್ಣ, ಪೊನ್ನಿರ ಗಗನ್, ಕುಡಿಯರ ಕಾವೇರಪ್ಪ, ಚೆಪ್ಪುಡಿರ ಉತ್ತಪ್ಪ, ನಾಪಂಡ ಸಿ.ಗಣೇಶ್, ನಾಯಕಂಡ ಬೇಬಿ ಚಿಣ್ಣಪ್ಪ ಇತರರು ಇದ್ದರು. ಮೂರ್ನಾಡು ಕೊಡವ ಸಮಾಜದ ಭೂಮಿಕಾ, ರಮ್ಯ, ಕೌಶಿ ಪ್ರಾರ್ಥಿಸಿದರು. ಪೊಮ್ಮಕ್ಕಡ ಕೂಟದವರು ಸ್ವಾಗತ ನೃತ್ಯ ಪ್ರದರ್ಶಿಸಿದರು. ಹಾಗೆಯೇ ಚೆಯ್ಯಂಡ ಬನಿತ್ ಬೋಜಣ್ಣ ನಿರೂಪಿಸಿದರು, ಚೆಂಗಂಡ ಸೂರಜ್ ತಮ್ಮಯ್ಯ ಸ್ವಾಗತಿಸಿದರು. ಬಾಲಕೃಷ್ಣ ವಂದಿಸಿದರು.   ನೆರವಂಡ ಅನೂಪ್ ಉತ್ತಯ್ಯ ಹಾಗೂ ಅವರೆಮಾದಂಡ ಸುಗು ಸುಬ್ಬಯ್ಯ ಅವರನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಲಾಯಿತು.

 

Share. Facebook Twitter Pinterest LinkedIn Tumblr Email WhatsApp
Previous Article*‘ವಿದ್ಯಾರ್ಥಿಗಳಿಗೆ ನಾಯಕತ್ವದ ಗುಣಲಕ್ಷಣಗಳು’ ವಿಚಾರ ಸಂಕಿರಣ : ದೇಶಭಕ್ತಿ, ದೇಶ ರಕ್ಷಣೆಗೆ ಪರೀಕ್ಷಾಂಗ ಕುಲ ಸಚಿವ ಎಂ.ಸುರೇಶ್ ಕರೆ*
Next Article *ಅರೆಕಾಲಿಕ ಕಾನೂನು ಸ್ವಯಂ ಸೇವಕರ ಹುದ್ದೆಗೆ ಅರ್ಜಿ ಆಹ್ವಾನ*

Related Posts

*ಪ್ರತಿಭಾ ಕಾರಂಜಿ :ರಾಜ್ಯಮಟ್ಟದಲ್ಲಿ ನಾಲ್ಕನೇ ಸ್ಥಾನ ಗಳಿಸಿದ ಕಾವೇರಿ ಶಾಲೆ ವಿದ್ಯಾರ್ಥಿಗಳು*

February 12, 2026

ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?

February 11, 2026

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?

February 11, 2026

ಬೆಂಗಳೂರು: ಕಳೆದ ಮೂರ್ನಾಲ್ಕು ದಿನಗಳಿಂದ ಸತತವಾಗಿ ಏರಿಕೆ ಕಂಡು ಆಭರಣ ಪ್ರಿಯರಲ್ಲಿ ಆತಂಕ ಮೂಡಿಸಿದ್ದ ಚಿನ್ನದ ದರದಲ್ಲಿ ಇಂದು ಕೊಂಚ…

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!

February 11, 2026

*ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*

February 11, 2026

*ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*

February 11, 2026

*ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*

February 11, 2026

*ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*

February 11, 2026

*ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*

February 11, 2026

*ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*

February 11, 2026

*ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*

February 11, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.