
ಮಡಿಕೇರಿ ಸೆ.26 NEWS DESK : ಬೆಂಗಳೂರಿನ ವಸಂತನಗರದಲ್ಲಿ ಮಾನ್ಯ ಅಲ್ಪಸಂಖ್ಯಾತ ಕಲ್ಯಾಣ ಹಾಗೂ ವಸತಿ ಸಚಿವರಾದ ಜಮೀರ್ ಅಹ್ಮದ್ ಖಾನ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ, ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಕ್ರಿಶ್ಚಿಯನ್ ಸಮುದಾಯದ ವಿವಿಧ ಅಭಿವೃದ್ಧಿ ಕೆಲಸಗಳಿಗೆ ಹೆಚ್ಚಿನ ಅನುದಾನವನ್ನು ಬಿಡುಗಡೆ ಮಾಡಿದ ವಸತಿ ಸಚಿವರನ್ನು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್.ಪೊನ್ನಣ್ಣ ಕೃತಜ್ಞತಾಪೂರ್ವಕವಾಗಿ ಸನ್ಮಾನಿಸಿದರು. ಸನ್ಮಾನವನ್ನು ಸ್ವೀಕರಿಸಿ ಮಾತನಾಡಿದ ವಸತಿ ಸಚಿವರು ಎ.ಎಸ್ ಪೊನ್ನಣ್ಣ ಅವರ ಕಾರ್ಯ ವೈಕರಿಯನ್ನು ಮುಕ್ತ ಕಂಠದಿಂದ ಹೊಗಳಿದರಲ್ಲದೆ, ಶಾಸಕರನ್ನು ಸನ್ಮಾನಿಸಿ ಗೌರವಿಸಿದರು. ಕರ್ನಾಟಕ ಕ್ರಿಶ್ಚಿಯನ್ ಕಮ್ಯೂನಿಟಿ ಡೆವಲಪ್ಮೆಂಟ್ ಕಾರ್ಪೊರೇಷನ್ ಲಿಮಿಟೆಡ್ ಅಧ್ಯಕ್ಷ ಡಾ.ಎಸ್ ಜಾಫೆಟ್ ಕರ್ನಾಟಕ ಕ್ರಿಶ್ಚಿಯನ್ ಕಮ್ಯೂನಿಟಿ ಡೆವಲಪ್ಮೆಂಟ್ ಕಾರ್ಪೊರೇಷನ್ ಲಿಮಿಟೆಡ್ ವ್ಯವಸ್ಥಾಪಕ ನಿರ್ದೇಶಕರಾದ ಆಂಟೋನಿ ಮಾರಿಯ ಇಮ್ಯಾನ್ಯುಎಲ್, ವಿರಾಜಪೇಟೆ ತಾಲೂಕಿನ ಧರ್ಮ ಗುರುಗಳು, ಕಾಂಗ್ರೆಸ್ ಮುಖಂಡರುಗಳಾದ ಜೋಕಿಮ್, ಜಾನ್ಸನ್, ಬಾಬು, ರೋಬಿನ್, ಅಂಟೋನಿ, ರಫೀಕ್ ಹಾಗೂ ಪ್ರಮುಖರು ಉಪಸ್ಥಿತರಿದ್ದರು.









