Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ವಿರಾಜಪೇಟೆ : ಪ್ರಕೃತಿಯ ಜೊತೆಗೆ ಪ್ರತಿಯೊಬ್ಬರೂ ಭಾವನಾತ್ಮಕ ಸಂಬಂಧವನ್ನು ಹೊಂದಿರಬೇಕು : ಸಂಕೇತ್ ಪೂವಯ್ಯ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ವಿರಾಜಪೇಟೆ : ಪ್ರಕೃತಿಯ ಜೊತೆಗೆ ಪ್ರತಿಯೊಬ್ಬರೂ ಭಾವನಾತ್ಮಕ ಸಂಬಂಧವನ್ನು ಹೊಂದಿರಬೇಕು : ಸಂಕೇತ್ ಪೂವಯ್ಯ*

ಸೆಪ್ಟೆಂಬರ್ 27, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ವಿರಾಜಪೇಟೆ ಸೆ.27 NEWS DESK : ಪ್ರತಿಯೊಬ್ಬರೂ ಕೂಡ ಪ್ರಕೃತಿಯ ಜೊತೆಗೆ ಭಾವನಾತ್ಮಕ ಸಂಬಂಧವನ್ನು ಹೊಂದಿರಬೇಕು ಎಂದು ರಾಜ್ಯ ವನ್ಯಜೀವಿ ಮಂಡಳಿಯ ಸದಸ್ಯರಾದ ಮೇರಿಯಂಡ ಸಂಕೇತ್ ಪೂವಯ್ಯ ಅಭಿಪ್ರಾಯಪಟ್ಟರು. ವಿರಾಜಪೇಟೆ ಪಟ್ಟಣದ ಸೆಂಟ್ ಆನ್ಸ್ ಪದವಿ ಕಾಲೇಜಿನಲ್ಲಿ ಕಾಲೇಜಿನ ನೇಚರ್ ಕ್ಲಬ್ ಘಟಕದ ವತಿಯಿಂದ ಆಯೋಜಿಸಲಾಗಿದ್ದ ಉಪನ್ಯಾಸ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಪ್ರಕೃತಿಯು ಮಾನವನಿಗೆ ಒಂದು ವರವಾಗಿದ್ದು ಭಾವನಾತ್ಮಕವಾಗಿಯೂ, ಆರೋಗ್ಯದ ದೃಷ್ಟಿಯಿಂದಲೂ ತನ್ನದೇ ಆದ ಕೊಡುಗೆಯನ್ನು ನೀಡುತ್ತಿದೆ. ಪರಿಸರ ಅಧ್ಯಯನವನ್ನು ನಾವು ಪ್ರಾಯೋಗಿಕವಾಗಿ ಅಧ್ಯಯನ ಮಾಡಬೇಕು. ಪರಿಸರದಲ್ಲಿ ನಾವು ಕಲಿಯುವ ಪಾಠವು ಆರೋಗ್ಯವನ್ನು ಉತ್ತಮಪಡಿಸುವುದಲ್ಲದೆ ಸುಂದರ ಸಮಾಜದ ಸೃಷ್ಟಿಗೂ ಕಾರಣವಾಗುತ್ತದೆ. ಆದುದರಿಂದ ವಿದ್ಯಾರ್ಥಿಗಳು ಪರಿಸರದ ಸಂರಕ್ಷಣೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಮೌಲ್ಯಯುತವಾದ ಶಿಕ್ಷಣವನ್ನು ಪಡೆಯಿರಿ ಎಂದು ಕಿವಿಮಾತು ಹೇಳಿದರು. ಸತ್ಯ, ಪ್ರಾಮಾಣಿಕತೆ, ನ್ಯಾಯಪರವಾದ ಚಿಂತನೆಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ ಎಂದರು. ಮುಖ್ಯ ಅತಿಥಿಗಳಾಗಿ ಆಗಮಿಸಿ ಉಪನ್ಯಾಸವನ್ನು ನೀಡಿದ ಪತ್ರಕರ್ತರು ಹಾಗೂ ಬರಹಗಾರರಾದ ಉಷಾ ಪ್ರೀತಂ ಮಾತನಾಡಿ, ಕೊಡಗು ಪ್ರಕೃತಿ ಸೌಂದರ್ಯದ ನಾಡು. ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ನಮ್ಮಲ್ಲಿ ಆಗಮಿಸುತ್ತಾರೆ. ನಮ್ಮಲ್ಲಿರುವಂತಹ ಸಸ್ಯ ಪ್ರಭೇದ, ಜೀವ ಜಂತುಗಳು ನಮ್ಮ ನಾಡನ್ನು ಶ್ರೀಮಂತ ಗೊಳಿಸಿವೆ. ಹಳೆಯ ಕಾಲದಲ್ಲಿ ಇದ್ದಂತಹ ಕೃಷಿ ಪದ್ಧತಿಗಳು, ಅರಣ್ಯ ಸಂಪತ್ತು ಕ್ಷೀಣಿಸಿವೆ. ಭತ್ತದ ಗದ್ದೆಗಳು ಇಂದು ವಾಣಿಜ್ಯೀಕರಣ ಆಗುತ್ತಿದೆ. ಹಚ್ಚ ಹಸಿರಾಗಿದ್ದ ಪರಿಸರ ಲೇಔಟ್ ಆಗಿ ಪರಿವರ್ತನೆಯಾಗಿದೆ. ಕಾಡು ಪ್ರಾಣಿಗಳು ನಾಡಿಗೆ ಲಗ್ಗೆ ಇಡಲು ಆರಂಭಿಸಿವೆ. ಪರಿಸರ ನಾಶದಿಂದ ಮನುಷ್ಯನು ಪ್ರಾಣಿಗಳ ಜೊತೆ ಸಂಘರ್ಷ ಮಾಡುವ ಹಂತಕ್ಕೆ ನಾವಿಂದು ತಲುಪಿದ್ದೇವೆ. ನೈಸರ್ಗಿಕ ಸಂಪನ್ಮೂಲಗಳು ಬರಿದಾಗಲು ನಾವೇ ಕಾರಣವಾಗುತ್ತಿದ್ದೇವೆ. ಸ್ವಚ್ಛ ಪರಿಸರ ನಿರ್ಮಾಣಕ್ಕೆ ಎಲ್ಲರೂ ಪಣತೊಡಬೇಕಾಗಿದೆ. ನಮ್ಮ ಪ್ರಕೃತಿ ನಮ್ಮ ಪರಿಸರ ಎಂಬ ಭಾವನೆ ಎಲ್ಲರಲ್ಲೂ ಬರಬೇಕಾಗಿದೆ. ಅವಾಗ ಮಾತ್ರ ಸ್ವಚ್ಛಂದ ಆರೋಗ್ಯಯುಕ್ತ ಪರಿಸರ ನಿರ್ಮಾಣ ಸಾಧ್ಯ ಎಂದರು. ಪದವಿ ಕಾಲೇಜಿನ ಐಕ್ಯೂಎಸಿ ಘಟಕದ ಸಂಚಾಲಕಿ ಹೇಮ ರವರು ಮಾತನಾಡಿ ವಿದ್ಯಾರ್ಥಿಗಳು ಪರಿಸರದ ಸಂರಕ್ಷಣೆಗೆ ಮುಂದಾಗಬೇಕು. ನಮ್ಮ ಬಾಲ್ಯದಲ್ಲಿ ಇದ್ದಂತಹ ಪರಿಸರ ಇಂದು ಇಲ್ಲವಾಗಿದೆ. ಮಾಲಿನ್ಯ ಮುಕ್ತ ಪರಿಸರವನ್ನು ನಿರ್ಮಿಸೋಣ ಎಂದು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದಂತಹ ಕಾಲೇಜಿನ ಪ್ರಾಂಶುಪಾಲರಾದ ತೃಪ್ತಿ ಬೋಪಣ್ಣ ರವರು ಮಾತನಾಡಿ ಇಂದಿನ ಡಿಜಿಟಲ್ ಯುಗದಲ್ಲಿ ನಾವು ಹಲವಾರು ಕ್ಷೇತ್ರಗಳಲ್ಲಿ ಸಾಧನೆಯನ್ನು ಮಾಡುತ್ತಿದ್ದೇವೆ. ಹೊಸ ಹೊಸ ಆವಿಷ್ಕಾರಗಳನ್ನು ಮಾಡುತ್ತಿದ್ದೇವೆ. ಆದರೆ ನಮ್ಮ ಜೀವನಕ್ಕೆ ಮುಖ್ಯವಾದ ಪರಿಸರವನ್ನು ಸಂರಕ್ಷಿಸುವಲ್ಲಿ ವಿಫಲವಾಗಿದ್ದೇವೆ. ತಂತ್ರಜ್ಞಾನ ಎಷ್ಟೇ ಮುಂದುವರೆದರು ಪ್ರಕೃತಿಯನ್ನು ಉಳಿಸದಿದ್ದಲ್ಲಿ ಮಾನವನು ಜೀವಿಸಲು ಸಾಧ್ಯವಿಲ್ಲ ಎಂದು ಹೇಳಿದರು. ವೇದಿಕೆಯಲ್ಲಿ ಕಾಲೇಜಿನ ನೇಚರ್ ಕ್ಲಬ್ ಘಟಕದ ಸಂಚಾಲಕಿ ಸೌಮ್ಯ ರವರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಕಾಲೇಜಿನ ಉಪನ್ಯಾಸಕರು, ನೇಚರ್ ಕ್ಲಬ್ ಘಟಕದ ವಿದ್ಯಾರ್ಥಿಗಳು ಹಾಜರಿದ್ದರು. ವಿದ್ಯಾರ್ಥಿ ನಿಶಿ ಸ್ವಾಗತಿಸಿ, ನಿರೂಪಿಸಿದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.