
ನಾಪೋಕ್ಲು ಸೆ.27 NEWS DESK : ಸ್ಕ್ಯಾಡ್ಸ್ ಮಂಗಳೂರು (SKADS) ವತಿಯಿಂದ ನೀಡಲಾಗುವ ಪ್ರಥಮ ಪ್ರಶಸ್ತಿ ಗೆ ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಭಾಜನವಾಗಿದೆ. ಸ್ಕ್ಯಾಡ್ಸ್ ಮಂಗಳೂರು (SKADS) ಸಂಸ್ಥೆಯೊಂದಿಗೆ ಕೊಡಗು ಜಿಲ್ಲೆಯಲ್ಲಿ ಅತಿ ಹೆಚ್ಚು ವ್ಯವಹಾರ ನಡೆಸಿದ ಸಹಕಾರ ಸಂಘಕ್ಕೆ ಕೊಡ ಮಾಡುವ ಪ್ರಶಸ್ತಿಯನ್ನು ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಸಂಸ್ಥೆಯ ಅಧ್ಯಕ್ಷರಾದ ರವೀಂದ್ರ ಕಂಬಳಿಯವರು ಹಾಗೂ ಸಂಸ್ಥೆಯ ನಿರ್ದೇಶಕರುಗಳು ಪ್ರಶಸ್ತಿ ನೀಡಿ ಗೌರವಿಸಿದರು. ಸಂಸ್ಥೆಯ ಅಧ್ಯಕ್ಷರಾದ ನಾಗೇಶ್ ಕುಂದಲ್ಪಾಡಿ ಅವರ ಪರವಾಗಿ ನಿರ್ದೇಶಕರಾದ ಪ್ರಮೀಳಾ ಬಂಗಾರಕೋಡಿ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಲೋಕೇಶ್ ಹೊದ್ದೆಟ್ಟಿ ಪ್ರಶಸ್ತಿ ಸ್ವೀಕರಿಸಿದರು.
ವರದಿ : ದುಗ್ಗಳ ಸದಾನಂದ.









