ಮಡಿಕೇರಿ ಸೆ.27 NEWS DESK : ಮಡಿಕೇರಿ ಮತ್ತು ಗೋಣಿಕೊಪ್ಪ ದಸರಾ ವೇದಿಕೆಯಲ್ಲಿ ಕೊಡಗು ಪೊಲೀಸ್ ಸಾಂಸ್ಕೃತಿಕ ವೇದಿಕೆಯಿಂದ ಸಾಂಸ್ಕೃತಿಕ ಕಾರ್ಯಕ್ರಮದ ಮೂಲಕ ಜಾಗೃತಿ ಮೂಡಿಸಲಾಯಿತು. ಸಾಂಸ್ಕೃತಿಕ ವೈವಿಧ್ಯದಲ್ಲಿ ಮಾದಕ ವಸ್ತುಗಳ ದುಷ್ಪರಿಣಾಮ, ಬಾಲ್ಯ ವಿವಾಹ ತಡೆಗಟ್ಟುವಿಕೆ, ಮಹಿಳಾ ಪೊಲೀಸರು ನವಶಕ್ತಿ ವೈಭವ ನೃತ್ಯ, ಸಮೂಹ ಗೀತೆ ಮುಂತಾದ ಕಾರ್ಯಕ್ರಮಗಳು ಕಿಕ್ಕಿರಿದ ಜನರನ್ನು ಮುದಗೊಳಿಸುವಲ್ಲಿ ಯಶಸ್ವಿಯಾಯಿತು.











