
ನಾಪೋಕ್ಲು ಸೆ.27 NEWS DESK : ನಾಲ್ಕುನಾಡು ಆಟೋ ಚಾಲಕರ ಮತ್ತು ಮಾಲೀಕರ ಸಂಘ ಹಾಗೂ ವಾಹನ ಚಾಲಕರ ಸಂಘದ ವತಿಯಿಂದ 33ನೇ ವರ್ಷದ ಅದ್ದೂರಿ ಆಯುಧ ಪೂಜೆ ಸಮಾರಂಭವನ್ನು ಅ.1 ರಂದು ನಾಪೋಕ್ಲು ಮಾರುಕಟ್ಟೆ ಆವರಣದಲ್ಲಿ ಆಯೋಜಿಸಲಾಗಿದೆ ಎಂದು ನಾಲ್ಕುನಾಡು ಆಟೋ ಚಾಲಕರ ಮತ್ತು ಮಾಲೀಕರ ಸಂಘದ ಅಧ್ಯಕ್ಷ ಟಿ.ಪಿ.ಸುಕುಮಾರ್ ಹೇಳಿದರು. ನಾಪೋಕ್ಲು ಪಟ್ಟಣದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಆಯುಧಾ ಪೂಜೆ ಅಂಗವಾಗಿ ಬುಧವಾರ ಮಧ್ಯಾಹ್ನ 2 ಗಂಟೆಗೆ ಹಳೆ ತಾಲೂಕಿನಿಂದ ಅಲಂಕೃತ ವಾಹನಗಳ ಮೆರವಣಿಗೆ ನಡೆಯಲಿದೆ. 4 ಗಂಟೆಗೆ ಮಾರುಕಟ್ಟೆ ಆವರಣದಲ್ಲಿ ವಾಹನಗಳ ಸಾಮೂಹಿಕ ಆಯುಧ ಪೂಜೆ ನಡೆಯಲಿದೆ ಎಂದರು. ಸೈಕಲ್, ದ್ವಿಚಕ್ರ, ತ್ರಿಚಕ್ರ, ನಾಲ್ಕು ಚಕ್ರ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಸ್ಪರ್ಧೆ ಆಯೋಜಿಸಲಾಗಿದ್ದು, ಪ್ರಥಮ, ದ್ವಿತೀಯ ಹಾಗೂ ತೃತೀಯ ಬಹುಮಾನವನ್ನು ಸಂಘದ ವತಿಯಿಂದ ವಿತರಿಸಲಾಗುವುದು ಎಂದರು. ಸಂಜೆ 6 ಗಂಟೆಗೆ ನಾಲ್ಕು ನಾಡು ಆಟೋ ಚಾಲಕರ ಮತ್ತು ಮಾಲೀಕರ ಸಂಘದ ಅಧ್ಯಕ್ಷ ಟಿ.ಪಿ.ಸುಕುಮಾರ್ ಅಧ್ಯಕ್ಷತೆಯಲ್ಲಿ ಸಭಾ ಕಾರ್ಯಕ್ರಮ ನಡೆಯಲಿದ್ದು, ಮುಖ್ಯ ಅತಿಥಿಗಳಾಗಿ ಶಾಸಕ ಎ.ಎಸ್.ಪೊನ್ನಣ್ಣ, ಗ್ರಾ.ಪಂ ಅಧ್ಯಕ್ಷೆ ವನಜಾಕ್ಷಿ ರೇಣುಕೇಶ್, ಪೆÇಲೀಸ್ ಠಾಣೆಯ ಠಾಣಾಧಿಕಾರಿ ರಾಘವೇಂದ್ರ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಇಸ್ಮಾಯಿಲ್, ಹೊದ್ದೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಹಂಸ, ಪಾರಾಣೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಪಾಡಿಯಂಡ ಕಟ್ಟಿ ಕುಶಾಲಪ್ಪ, ಗ್ಯಾರಂಟಿ ಅನುಷ್ಠಾನ ಯೋಜನೆಯ ಉಪಾಧ್ಯಕ್ಷ ಬೊಳ್ಳಂಡ ಗಿರೀಶ್, ಸೆಂಟ್ ಮೇರಿಸ್ ಚರ್ಚಿನ ಧರ್ಮಗುರು ಜ್ಞಾನಪ್ರಕಾಶ್, ಮಾಜಿ ತಾಲೂಕು ಪಂಚಾಯತಿ ಸದಸ್ಯೆ ಉಮಾ ಪ್ರಭು, ಕಾಫಿ ಬೆಳಗಾರ ರಮೇಶ್ ಮುದ್ದಯ್ಯ, ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ಶಿವಚಾಳಿಯಂಡ ಅಂಬಿಕಾರಿಯಪ್ಪ, ಕಾಫಿ ಬೆಳೆಗಾರ ಅರೆಯಡ ರತ್ನ ಪೆಮ್ಮಯ್ಯ ಪಾಲ್ಗೊಳ್ಳಲಿರುವರು ಎಂದರು. ನಾಪೋಕ್ಲು ಕೊಡವ ಸಮಾಜದ ಅಧ್ಯಕ್ಷ ಮುಂಡಂಡ ಸಿ.ನಾಣಯ್ಯ, ಬಿಲ್ಲವ ಸಮಾಜದ ಅಧ್ಯಕ್ಷ ಬಿ.ಎಂ ಪ್ರದೀಪ, ಹಿಂದು ಮಲಯಾಳಿ ಸಮಾಜದ ಅಧ್ಯಕ್ಷ ಅನಿಲ್ ಕೆ.ಕೆ, ಜಯ ಕಾಫಿ ಕ್ಯೂರಿಂಗ್ ವಕ್ರ್ಸ್ ನ ಮಾಲೀಕ ಮಂಡಿರ ಕಿಶೋರ್ ತಮ್ಮಯ್ಯ, ಉದ್ಯಮಿ ಕಂಗಣ್ಣ ಅರುಣ್ ಮಂದಣ್ಣ, ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಮನ್ಸೂರ್ ಆಲಿ, ಗ್ರಾಮ ಪಂಚಾಯಿತಿ ಚೀಯಕಪೂವಂಡ ಸತೀಶ್ ದೇವಯ್ಯ, ವಾಹನ ಚಾಲಕರ ಸಂಘದ ಮಾಜಿ ಅಧ್ಯಕ್ಷರಾದ ಬಿದ್ದಾಟಂಡ ರೋಜಿ ಚಿಣ್ಣಪ್ಪ, ಬಿ.ಆರ್ ವಸಂತ, ಅಬ್ದುಲ್ ರಜಾಕ್ ,ನಾಲ್ಕು ನಾಡು ಆಟೋ ಚಾಲಕರ ಮತ್ತು ಮಾಲೀಕರ ಸಂಘದ ಗೌರವಾಧ್ಯಕ್ಷ ಕಾಳೆಯಂಡ ಸಾಬಾ ತಿಮ್ಮಯ್ಯ, ಗ್ರಾಮ ಪಂಚಾಯಿತಿ ಸದಸ್ಯ ಮಹಮ್ಮದ್ ಕುರೈಸಿ,ಕಾಫಿ ಬೆಳೆಗಾರ ಕರವಂಡ ಸುರೇಶ್ ,ಕರವಂಡ ಲವ ನಾಣಯ್ಯ,ಕೆ ಡಿ ಪಿ ಸದಸ್ಯ ಕಲಿಯಂಡ ಕೌಶಿ ಉಪಸ್ಥಿತರಿರುವರು ಎಂದರು. ಸಭಾ ಕಾರ್ಯಕ್ರಮದ ಬಳಿಕ ಭದ್ರಾವತಿ ಬ್ರದರ್ಸ್ ಸೌಂಡ್ಸ್ ಲೈಟಿಂಗ್ಸ್ ಅಂಡ್ ಇವೆಂಟ್ಸ್ ವತಿಯಿಂದ ಮನೋರಂಜನಾ ಕಾರ್ಯಕ್ರಮ ಹಾಗೂ ಉತ್ತಮ ಸೇವೆ ಸಲ್ಲಿಸಿದ ಆಟೋ ಚಾಲಕರಿಗೆ ಸನ್ಮಾನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದರು. ಸುದ್ದಿಗೋಷ್ಠಿಯಲ್ಲಿ ಸಂಘದ ಕಾರ್ಯದರ್ಶಿ ಸತೀಶ್, ಖಜಾಂಚಿ ಚೇತನ್, ಗೌರವ ಅಧ್ಯಕ್ಷ ರಜಾಕ್ ಸದಸ್ಯರಾದ ಮಿಥುನ್, ದೀಪು, ಸೋಮಣ್ಣ ಉಪಸ್ಥಿತರಿದ್ದರು.
ವರದಿ : ದುಗ್ಗಳ ಸದಾನಂದ










