ಮಡಿಕೇರಿ NEWS DESK ಸೆ.27 : ಗೋಣಿಕೊಪ್ಪದ ಶ್ರೀ ಕಾವೇರಿ ದಸರಾ ಸಮಿತಿ ವತಿಯಿಂದ ಇಂದು ನಡೆದ ಮಹಿಳಾ ದಸರಾ ಕಾರ್ಯಕ್ರಮದ ಛದ್ಮವೇಷ ಸ್ಪರ್ಧೆಯಲ್ಲಿ ಆಶಿಕಾ ಸುಂದರೇಶ್ ದ್ವಿತೀಯ ಸ್ಥಾನ ಪಡೆದಿದ್ದಾರೆ. ದೇವಿಯ ವೇಷಧಾರಿಯಾಗಿ ಅವರು ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರರಾದರು. ಆಶಿಕಾ ಅವರು ಪೊನ್ನಂಪೇಟೆ ಸಮೀಪದ ಬೇಗೂರು ಶ್ರೀ ಪೂಳೆಮಾಡು ಈಶ್ವರ ದೇವಸ್ಥಾನದ ಅರ್ಚಕರಾದ ಸುಂದರೇಶ ಅವರ ಪತ್ನಿ.








