Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*
  • *ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*
  • *ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*
  • *16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*
  • *ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*
  • *ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*
  • *ಸಂಭ್ರಮದಿಂದ ಜರುಗಿದ ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ನ ವಾರ್ಷಿಕ ಮಹೋತ್ಸವ. ಮೈಸೂರು ಧರ್ಮಾಧ್ಯಕ್ಷರಾದ ಬಿಷಪ್ ಫ್ರಾನ್ಸಿಸ್ ಸೆರಾವೋ ರವರ ನೇತೃತ್ವದಲ್ಲಿ ಜರುಗಿದ ದಿವ್ಯ ಬಲಿಪೂಜೆ*
  • *ಫೆ.15 ರಂದು ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ*
  • *ಬೆಂಗಳೂರಿನ ಪ್ರತಿಷ್ಠಿತ ಕೊಡಗು ಗೌಡ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ*
  • *ನಂದಿಬೆಟ್ಟದ ಗೇಟ್ ಬಂದ್! ಫೆಬ್ರವರಿ 14 ರಂದು ಪ್ರೇಮಿಗಳ ಪ್ರವೇಶಕ್ಕೆ ನಿರ್ಬಂಧ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಅರೆಭಾಷೆ ಗೌಡರು ಜಾತಿಯ ಕಾಲಂನಲ್ಲಿ GOWDA (ಗೌಡ) ಎಂದು ನಮೂದಿಸುವಂತೆ ಮರಂದೋಡ ಯವಕಪಾಡಿ ನಾಲಡಿ ಗೌಡ ಸಮಾಜ ಮನವಿ*
ಇತ್ತೀಚಿನ ಸುದ್ದಿಗಳು

*ಅರೆಭಾಷೆ ಗೌಡರು ಜಾತಿಯ ಕಾಲಂನಲ್ಲಿ GOWDA (ಗೌಡ) ಎಂದು ನಮೂದಿಸುವಂತೆ ಮರಂದೋಡ ಯವಕಪಾಡಿ ನಾಲಡಿ ಗೌಡ ಸಮಾಜ ಮನವಿ*

September 28, 20252 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ NEWS DESK ಸೆ.28 : ಪ್ರಸ್ತುತ ರಾಜ್ಯ ಸರಕಾರ ನಡೆಸುತ್ತಿರುವ ಮತ್ತು ಮುಂದೆ ಕೇಂದ್ರ ಸರಕಾರ ನಡೆಸಲಿರುವ ಜಾತಿ ಜನಗಣತಿಯಲ್ಲಿ ಕೊಡಗಿನ ಅರೆಭಾಷೆ ಗೌಡರು ಕಡ್ಡಾಯವಾಗಿ ಜಾತಿಯ ಕಾಲಂನಲ್ಲಿ GOWDA (ಗೌಡ) ಎಂದು ನಮೂದಿಸುವಂತೆ ಮರಂದೋಡ ಯವಕಪಾಡಿ ನಾಲಡಿ ಗೌಡ ಸಮಾಜದ ಕಾರ್ಯದರ್ಶಿ ಚಂಡೀರ ರೋಷನ್ ಅವರು ಮನವಿ ಮಾಡಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಜಾತಿ ಜನಗಣತಿಯ ಸಂದರ್ಭ ಕೊಡಗಿನ ಅರೆಭಾಷೆ ಗೌಡರು ಜಾತಿಯ ಕಾಲಂನಲ್ಲಿ GOWDA (ಗೌಡ), ಉಪಜಾತಿಯ ಕಾಲಂನಲ್ಲಿ ಅರೆಭಾಷೆ ಗೌಡ ಮತ್ತು ಮಾತೃಭಾಷೆ ಕಾಲಂನಲ್ಲಿ ಅರೆಭಾಷೆ ಎಂದು ನಮೂದಿಸುವಂತೆ ಕೋರಿದ್ದಾರೆ. ರಾಜ್ಯ ಸರಕಾರ ಈಗಾಗಲೇ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಮತ್ತು ಜಾತಿ ಜನಗಣತಿಯ ಸಮೀಕ್ಷೆಯನ್ನು ಆರಂಭಿಸಿದೆ. ಮುಂದಿನ ವರ್ಷ ಕೇಂದ್ರ ಸರಕಾರ ಕೂಡ ಗಣತಿ ನಡೆಸಲಿದೆ. ಉಪಜಾತಿಯಲ್ಲಿ ಅರೆಭಾಷೆ ಗೌಡ ಎಂಬುವುದನ್ನು ಪ್ರತ್ಯೇಕ ಕಾಲಂನಲ್ಲಿ ಸೇರಿಸಬೇಕೆಂದು ಕೊಡಗು ಗೌಡ ಸಮಾಜಗಳ ಒಕ್ಕೂಟ ಸಲ್ಲಿಸಿದ ಮನವಿಗೆ ಸರಕಾರ ಸ್ಪಂದಿಸಿದೆ. ಸಮುದಾಯ ಬಾಂಧವರು ಎಲ್ಲಾ ವಿವರಗಳನ್ನು ಗಮನದಲ್ಲಿರಿಸಿಕೊಂಡು ಉಪಜಾತಿ ಎನ್ನುವ ಕಾಲಂನಲ್ಲಿ ‘ಅರೆಭಾಷೆ ಗೌಡ’ ಎಂದು ನಮೂದಿಸಬೇಕು ಮತ್ತು ಕಡ್ಡಾಯವಾಗಿ ಎರಡೂ ಗಣತಿಯಲ್ಲಿ ಪಾಲ್ಗೊಳ್ಳಬೇಕು. ಎಲ್ಲಾ ಮೂಲ ದಾಖಲೆಗಳನ್ನು ಒಕ್ಕಲಿಗ ಎಂದು ಹೊಂದಿರುವ ಅರೆಭಾಷೆ ಗೌಡ ಸಮುದಾಯದವರು ಇದ್ದರೆ, ಜಾತಿ ಒಕ್ಕಲಿಗ, ಉಪಜಾತಿ ಅರೆಭಾಷೆ ಗೌಡ, ಅರೆಭಾಷೆ ಒಕ್ಕಲಿಗ ಮತ್ತು ಮಾತೃಭಾಷೆ ಅರೆಭಾಷೆ ಎಂದು ನಮೂದಿಸಲು ಯಾವುದೇ ಅಭ್ಯಂತರವಿರುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಮೂಲತಃ ಅರೆಭಾಷೆ ಗೌಡರು ಒಕ್ಕಲಿಗ ಸಮುದಾಯದ ಭಾಗವಾಗಿದ್ದಾರೆ, ಆದರೆ ಅರೆಭಾಷೆ ಗೌಡರ ಶೈಕ್ಷಣಿಕ, ಕಂದಾಯ ಸೇರಿದಂತೆ ಎಲ್ಲಾ ಮೂಲ ದಾಖಲೆಗಳಲ್ಲಿ ‘ಗೌಡ’ ಎಂದೇ ನಮೂದಿಸಲಾಗಿದೆ. ಈಗ ಬದಲಾಯಿಸಿ ಮಾಹಿತಿ ನೀಡಿದರೆ ಮುಂದಿನ ದಿನಗಳಲ್ಲಿ ತೊಂದರೆ ಅನುಭವಿಸುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಕೊಡಗು ಗೌಡ ಸಮಾಜಗಳ ಒಕ್ಕೂಟ ಅರೆಭಾಷೆ ಗೌಡ ಸಮುದಾಯದ ಸಭೆಗಳನ್ನು ನಡೆಸಿ, ಕೊಡಗಿನ ಎಲ್ಲಾ ಗೌಡ ಸಮಾಜಗಳೊಂದಿಗೆ ಸಮಾಲೋಚಿಸಿ ಗೌಡ ಎಂದು ನಮೂದಿಸಲು ನಿರ್ಣಯ ಕೈಗೊಂಡಿದ್ದು, ಇದಕ್ಕೆ ಮರಂದೋಡ ಯವಕಪಾಡಿ ನಾಲಡಿ ಗೌಡ ಸಮಾಜದ ಬೆಂಬಲವಿದೆ ಎಂದು ಚಂಡೀರ ರೋಷನ್ ತಿಳಿಸಿದ್ದಾರೆ. ಗಣತಿಯಲ್ಲಿ ತಮ್ಮ ಜಾತಿಗೆ ಇರುವ ಇನ್ನೊಂದು ಹೆಸರು ಎಂಬ ಕಾಲಂ ಕೂಡ ಇದ್ದು, ಇದರಲ್ಲಿ ಒಕ್ಕಲಿಗ, ಕೊಡಗು ಗೌಡ, ಅರೆಭಾಷೆ ಒಕ್ಕಲಿಗ ಎಂದು ನಮೂದಿಸಲು ಸಲಹೆ ನೀಡಿದ್ದಾರೆ.

Share. Facebook Twitter Pinterest LinkedIn Tumblr Email WhatsApp
Previous Article*ಇತರರನ್ನು ಕೊಡವ ಗುಂಪುಗಳನ್ನಾಗಿ ಪರಿವರ್ತಿಸಲು ಅಥವಾ ಮತಾಂತರಿಸಲು ಅಥವಾ ಧರ್ಮದೀಕ್ಷೆ ನೀಡಲು ‘ಕೊಡವಯಿಸಂ’ ಒಂದು ಮಿಷನರಿ ಧರ್ಮವಲ್ಲ*
Next Article *ಕಳೆದ 25 ವರ್ಷಗಳಿಂದ ಸರ್ವಋತು ರಸ್ತೆ ನಿರ್ಮಿಸಲಾಗದವರು ಈಗ ಪ್ರತಿಭಟನೆ ಮಾಡುತ್ತಿದ್ದಾರೆ*

Website design development company services in Mangalore

Forex Trading Teacher in India

Related Posts

*ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*

February 13, 2026

*ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*

February 13, 2026

*ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*

February 13, 2026

*ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*

February 13, 2026

ಮಡಿಕೇರಿ, NEWS DESK ಫೆ.13:-ತಾಲ್ಲೂಕಿನ ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ ಸುಮಾರು 100 ಕೋಟಿ ರೂ. ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಮುಖ್ಯಮಂತ್ರಿ…

*ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*

February 13, 2026

*16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*

February 13, 2026

*ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*

February 13, 2026

*ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*

February 13, 2026

*ಸಂಭ್ರಮದಿಂದ ಜರುಗಿದ ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ನ ವಾರ್ಷಿಕ ಮಹೋತ್ಸವ. ಮೈಸೂರು ಧರ್ಮಾಧ್ಯಕ್ಷರಾದ ಬಿಷಪ್ ಫ್ರಾನ್ಸಿಸ್ ಸೆರಾವೋ ರವರ ನೇತೃತ್ವದಲ್ಲಿ ಜರುಗಿದ ದಿವ್ಯ ಬಲಿಪೂಜೆ*

February 13, 2026

*ಫೆ.15 ರಂದು ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ*

February 13, 2026

*ಬೆಂಗಳೂರಿನ ಪ್ರತಿಷ್ಠಿತ ಕೊಡಗು ಗೌಡ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ*

February 13, 2026

*ನಂದಿಬೆಟ್ಟದ ಗೇಟ್ ಬಂದ್! ಫೆಬ್ರವರಿ 14 ರಂದು ಪ್ರೇಮಿಗಳ ಪ್ರವೇಶಕ್ಕೆ ನಿರ್ಬಂಧ*

February 13, 2026

*ಮಾರ್ಚ್ 6ಕ್ಕೆ ರಾಜ್ಯ ಬಜೆಟ್ ಮಂಡನೆ: ಗ್ಯಾರಂಟಿ ಯೋಜನೆಗಳ ಕಥೆಯೇನು? ಸಂಪುಟ ಸಭೆಯ ಈ 5 ಪ್ರಮುಖ ನಿರ್ಧಾರಗಳನ್ನು ಮಿಸ್ ಮಾಡ್ಬೇಡಿ!*

February 13, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.