Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಭಾರತದ ಆರ್ಥಿಕತೆಗೆ ಯುದ್ಧದ ‘ಶಾಕ್’:ರೂಪಾಯಿ ಮೌಲ್ಯ ಪಾತಾಳಕ್ಕೆ,ಸಾರಿಗೆ ವೆಚ್ಚ ದುಬಾರಿ!*
  • *ಕೆ.ನಿಡುಗಣೆ ಗ್ರಾ.ಪಂ.ಕಚೇರಿ ಕಟ್ಟಡ ನಿರ್ಮಾಣಕ್ಕೆ ಕ್ರಮವಹಿಸಲು ಶಾಸಕರ ಸೂಚನೆ*
  • *ಯುದ್ಧ ಪರಿಸ್ಥಿತಿ : HELPLINE ಸಂಖ್ಯೆಗಳು ಇಲ್ಲಿವೆ*
  • *ಮಾ.03 ರಂದು ಖಗ್ರಾಸ ಚಂದ್ರ ಗ್ರಹಣದ ಪ್ರಯುಕ್ತ ದೇವಾಲಯಗಳಲ್ಲಿ ಸೇವೆಗಳಲ್ಲಿ ವ್ಯತ್ಯಾಸ*
  • *ಮಾ.06 ರಂದು ಮಿನಿ ಉದ್ಯೋಗ ಮೇಳ*
  • *ಚೆನ್ನಯ್ಯನಕೋಟೆ ಮತ್ತು ಕಣ್ಣಂಗಾಲದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗೆ ಚಾಲನೆ*
  • *ಮಡಿಕೇರಿಯಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಡಾ.ಮಂತರ್ ಗೌಡ ಚಾಲನೆ*
  • *ಭಾರತಕ್ಕೆ ಮುಟ್ಟಿದ ಯುದ್ಧದ ಬಿಸಿ: ಒಮನ್ ದಾಳಿಯಲ್ಲಿ ಕನ್ನಡಿಗರು ಇದ್ದಾರೆಯೇ? ಮೃತ ಭಾರತೀಯನ ಗುರುತು ಪತ್ತೆಗೆ ವಿದೇಶಾಂಗ ಇಲಾಖೆ ಕಾರ್ಯತತ್ಪರ*
  • *ಮಿತ್ರ ರಾಷ್ಟ್ರದ ಮೇಲೆ ಮಿತ್ರನಿಂದಲೇ ಅಟ್ಯಾಕ್: ಅಮೆರಿಕದ 3 ಫೈಟರ್ ಜೆಟ್‌ಗಳನ್ನು ಹೊಡೆದುರುಳಿಸಿದ ಕುವೈತ್; ಪೈಲಟ್‌ಗಳು ಪ್ರಾಣಾಪಾಯದಿಂದ ಪಾರು!*
  • *ಕಾವೇರಿ ನದಿ ಅಳಿದರೆ ಸಂಸ್ಕೃತಿಯೇ ಅಳಿದಂತೆ; ಕಣಿವೆ ಆರತಿ ಕಾರ್ಯಕ್ರಮದಲ್ಲಿ ಶರಣ ಸಾಹಿತ್ಯ ಪರಿಷತ್ತು ಅಧ್ಯಕ್ಷ ಕೆ.ಎಸ್.ಮೂರ್ತಿ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಜಾತಿಯ ಕಾಲಂನಲ್ಲಿ GOWDA (ಗೌಡ) ಎಂದು ನಮೂದಿಸಲು ಬೆಂಗಳೂರು ಕೊಡಗು ಗೌಡ ಯುವ ವೇದಿಕೆ ಮನವಿ*
ಇತ್ತೀಚಿನ ಸುದ್ದಿಗಳು

*ಜಾತಿಯ ಕಾಲಂನಲ್ಲಿ GOWDA (ಗೌಡ) ಎಂದು ನಮೂದಿಸಲು ಬೆಂಗಳೂರು ಕೊಡಗು ಗೌಡ ಯುವ ವೇದಿಕೆ ಮನವಿ*

ಸೆಪ್ಟೆಂಬರ್ 30, 20252 Mins Read
Facebook WhatsApp Twitter Telegram Copy Link Threads Email LinkedIn Pinterest
Follow us on Google News
Google News
Facebook Twitter WhatsApp Email Telegram Copy Link

ಮಡಿಕೇರಿ NEWS DESK ಸೆ.30 : ಕರ್ನಾಟಕ ರಾಜ್ಯ ಸರ್ಕಾರದಿಂದ ಪ್ರಸ್ತುತ ನಡೆಯುತ್ತಿರುವ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆ ಮತ್ತು ಜಾತಿ ಜನಗಣತಿಯಲ್ಲಿ ಹಾಗೂ ಮುಂದೆ ಕೇಂದ್ರ ಸರ್ಕಾರ ನಡೆಸುವ ಗಣತಿಯ ಸಂದರ್ಭ ಜಾತಿಯ ಕಾಲಂನಲ್ಲಿ ಸರ್ವ ಅರೆಭಾಷೆ ಗೌಡರು GOWDA (ಗೌಡ) ಎಂದು, ಉಪಜಾತಿ ಅರೆಭಾಷೆ ಗೌಡ, ಮಾತೃ ಭಾಷೆ ಅರೆಭಾಷೆ ಎಂದು ನಮೂದಿಸುವಂತೆ ಬೆಂಗಳೂರು ಕೊಡಗು ಗೌಡ ಯುವ ವೇದಿಕೆಯ ಅಧ್ಯಕ್ಷರಾದ ನಂಗಾರು ಮಮತಾ ಅವರು ಮನವಿ ಮಾಡಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಪ್ರಸ್ತುತ ರಾಜ್ಯ ಸರ್ಕಾರ ನಡೆಸುತ್ತಿರುವ ಮತ್ತು ಮುಂದೆ ಕೇಂದ್ರ ಸರಕಾರ ನಡೆಸಲಿರುವ ಜಾತಿ ಜನಗಣತಿಯಲ್ಲಿ ಕೊಡಗಿನ ಅರೆಭಾಷೆ ಗೌಡರು ಕಡ್ಡಾಯವಾಗಿ ಜಾತಿಯ ಕಾಲಂನಲ್ಲಿ GOWDA (ಗೌಡ) ಎಂದು ನಮೂದಿಸಬೇಕು. ಗಣತಿಯಲ್ಲಿ ತಮ್ಮ ಜಾತಿಗೆ ಇರುವ ಇನ್ನೊಂದು ಹೆಸರು ಎಂಬ ಕಾಲಂ ಕೂಡ ಇದ್ದು, ಇದರಲ್ಲಿ ಒಕ್ಕಲಿಗ, ಕೊಡಗು ಗೌಡ, ಅರೆಭಾಷೆ ಒಕ್ಕಲಿಗ ಎಂದು ನಮೂದಿಸಲು ಸಲಹೆ ನೀಡಿದ್ದಾರೆ. ರಾಜ್ಯ ಸರಕಾರವು ಈಗಾಗಲೇ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಮತ್ತು ಜಾತಿ ಜನಗಣತಿಯ ಸಮೀಕ್ಷೆಯನ್ನು ಆರಂಭಿಸಿದೆ. ಮುಂದಿನ ವರ್ಷ ಕೇಂದ್ರ ಸರಕಾರ ಕೂಡ ಗಣತಿ ಆರಂಭಿಸಲಿದೆ. ಉಪಜಾತಿಯಲ್ಲಿ ಅರೆಭಾಷೆ ಗೌಡ ಎಂಬುವುದನ್ನು ಪ್ರತ್ಯೇಕ ಕಾಲಂನಲ್ಲಿ ಸೇರಿಸಬೇಕೆಂದು ಕೊಡಗು ಗೌಡ ಸಮಾಜಗಳ ಒಕ್ಕೂಟ ಸಲ್ಲಿಸಿದ ಮನವಿಗೆ ಸರಕಾರ ಸ್ಪಂದಿಸಿದೆ. ಸಮುದಾಯ ಬಾಂಧವರು ಎಲ್ಲಾ ವಿವರಗಳನ್ನು ಗಮನದಲ್ಲಿರಿಸಿಕೊಂಡು ಉಪಜಾತಿ ಎನ್ನುವ ಕಾಲಂನಲ್ಲಿ ‘ಅರೆಭಾಷೆ ಗೌಡ’ ಎಂದು ನಮೂದಿಸಬೇಕು ಮತ್ತು ಕಡ್ಡಾಯವಾಗಿ ಎರಡೂ ಗಣತಿಯಲ್ಲಿ ಪಾಲ್ಗೊಳ್ಳಬೇಕು ಎಂದು ತಿಳಿಸಿದ್ದಾರೆ. ಮೂಲತಃ ಅರೆಭಾಷೆ ಗೌಡರು ಒಕ್ಕಲಿಗ ಸಮುದಾಯದ ಭಾಗವಾಗಿದ್ದಾರೆ, ಆದರೆ ಅರೆಭಾಷೆ ಗೌಡರ ಶೈಕ್ಷಣಿಕ, ಕಂದಾಯ ಸೇರಿದಂತೆ ಎಲ್ಲಾ ಮೂಲ ದಾಖಲೆಗಳಲ್ಲಿ ‘ಗೌಡ’ ಎಂದೇ ನಮೂದಿಸಲಾಗಿದೆ. ಈಗ ಬದಲಾಯಿಸಿ ಮಾಹಿತಿ ನೀಡಿದರೆ ಮುಂದಿನ ದಿನಗಳಲ್ಲಿ ತೊಂದರೆ ಅನುಭವಿಸುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಕೊಡಗು ಗೌಡ ಸಮಾಜಗಳ ಒಕ್ಕೂಟ ಅರೆಭಾಷೆ ಗೌಡ ಸಮುದಾಯದ ಸಭೆಗಳನ್ನು ನಡೆಸಿ, ಕೊಡಗಿನ ಎಲ್ಲಾ ಗೌಡ ಸಮಾಜಗಳೊಂದಿಗೆ ಸಮಾಲೋಚಿಸಿ ಉಔWಆಂ GOWDA (ಗೌಡ) ಎಂದು ನಮೂದಿಸಲು ನಿರ್ಣಯ ಕೈಗೊಂಡಿದ್ದು, ಇದಕ್ಕೆ ಬೆಂಗಳೂರು ಕೊಡಗು ಗೌಡ ಯುವ ವೇದಿಕೆ ಸಂಪೂರ್ಣ ಬೆಂಬಲ ಸೂಚಿಸುತ್ತದೆ ಎಂದು ತಿಳಿಸಿದ್ದಾರೆ. ಎಲ್ಲಾ ಮೂಲ ದಾಖಲೆಗಳನ್ನು ಒಕ್ಕಲಿಗ ಎಂದು ಹೊಂದಿರುವ ಅರೆಭಾಷೆ ಗೌಡ ಸಮುದಾಯದವರು ಇದ್ದರೆ, ಜಾತಿ ಒಕ್ಕಲಿಗ, ಉಪಜಾತಿ ಅರೆಭಾಷೆ ಗೌಡ, ಅರೆಭಾಷೆ ಒಕ್ಕಲಿಗ ಮತ್ತು ಮಾತೃಭಾಷೆ ಅರೆಭಾಷೆ ಎಂದು ನಮೂದಿಸಲು ಯಾವುದೇ ಅಭ್ಯಂತರವಿರುವುದಿಲ್ಲ ಎಂದು ನಂಗಾರು ಮಮತಾ ಸ್ಪಷ್ಟಪಡಿಸಿದ್ದಾರೆ.

Follow us on Google News
Share. Facebook Twitter Pinterest LinkedIn Tumblr Email WhatsApp
Previous Article*ಎನ್.ಡಿ.ಗಾನವಿ ರಾಜ್ಯಮಟ್ಟಕ್ಕೆ ಆಯ್ಕೆ*
Next Article *ಪೆರಾಜೆ ಗ್ರಾಮದಲ್ಲಿ ಬಿ.ಎಸ್.ಎನ್.ಎಲ್ ಟವರ್ ಕಾಮಗಾರಿ ಬಹುತೇಕ ಪೂರ್ಣ*

*ಕೆ.ನಿಡುಗಣೆ ಗ್ರಾ.ಪಂ.ಕಚೇರಿ ಕಟ್ಟಡ ನಿರ್ಮಾಣಕ್ಕೆ ಕ್ರಮವಹಿಸಲು ಶಾಸಕರ ಸೂಚನೆ*

ಮಾರ್ಚ್ 2, 2026

ಮಡಿಕೇರಿ, NEWS DESK ಮಾ.2:-ಮಡಿಕೇರಿ ತಾಲೂಕಿನ ಕೆ.ನಿಡುಗಣೆಯಲ್ಲಿ ನೂತನ ಗ್ರಾಮ ಪಂಚಾಯತ್ ಕಚೇರಿ ನಿರ್ಮಾಣಕ್ಕೆ ಮಡಿಕೇರಿ ವಿಧಾನ ಸಭಾ ಕ್ಷೇತ್ರದ…

*ಯುದ್ಧ ಪರಿಸ್ಥಿತಿ : HELPLINE ಸಂಖ್ಯೆಗಳು ಇಲ್ಲಿವೆ*

ಮಾರ್ಚ್ 2, 2026

*ಮಾ.03 ರಂದು ಖಗ್ರಾಸ ಚಂದ್ರ ಗ್ರಹಣದ ಪ್ರಯುಕ್ತ ದೇವಾಲಯಗಳಲ್ಲಿ ಸೇವೆಗಳಲ್ಲಿ ವ್ಯತ್ಯಾಸ*

ಮಾರ್ಚ್ 2, 2026

*ಮಾ.06 ರಂದು ಮಿನಿ ಉದ್ಯೋಗ ಮೇಳ*

ಮಾರ್ಚ್ 2, 2026

*ಚೆನ್ನಯ್ಯನಕೋಟೆ ಮತ್ತು ಕಣ್ಣಂಗಾಲದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗೆ ಚಾಲನೆ*

ಮಾರ್ಚ್ 2, 2026

*ಮಡಿಕೇರಿಯಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಡಾ.ಮಂತರ್ ಗೌಡ ಚಾಲನೆ*

ಮಾರ್ಚ್ 2, 2026

*ಭಾರತಕ್ಕೆ ಮುಟ್ಟಿದ ಯುದ್ಧದ ಬಿಸಿ: ಒಮನ್ ದಾಳಿಯಲ್ಲಿ ಕನ್ನಡಿಗರು ಇದ್ದಾರೆಯೇ? ಮೃತ ಭಾರತೀಯನ ಗುರುತು ಪತ್ತೆಗೆ ವಿದೇಶಾಂಗ ಇಲಾಖೆ ಕಾರ್ಯತತ್ಪರ*

ಮಾರ್ಚ್ 2, 2026

*ಮಿತ್ರ ರಾಷ್ಟ್ರದ ಮೇಲೆ ಮಿತ್ರನಿಂದಲೇ ಅಟ್ಯಾಕ್: ಅಮೆರಿಕದ 3 ಫೈಟರ್ ಜೆಟ್‌ಗಳನ್ನು ಹೊಡೆದುರುಳಿಸಿದ ಕುವೈತ್; ಪೈಲಟ್‌ಗಳು ಪ್ರಾಣಾಪಾಯದಿಂದ ಪಾರು!*

ಮಾರ್ಚ್ 2, 2026

*ಕಾವೇರಿ ನದಿ ಅಳಿದರೆ ಸಂಸ್ಕೃತಿಯೇ ಅಳಿದಂತೆ; ಕಣಿವೆ ಆರತಿ ಕಾರ್ಯಕ್ರಮದಲ್ಲಿ ಶರಣ ಸಾಹಿತ್ಯ ಪರಿಷತ್ತು ಅಧ್ಯಕ್ಷ ಕೆ.ಎಸ್.ಮೂರ್ತಿ*

ಮಾರ್ಚ್ 2, 2026

*”ಕಲೆಯ ಮೂಲಕ ಕಲಿಕೆ” ರೋಟರಿ ಮಡಿಕೇರಿ ವುಡ್ಸ್ ನಿಂದ ವಿಶಿಷ್ಟ ಕಾರ್ಯಕ್ರಮ : ಭಾಷೆ, ಬರಹ ಮತ್ತು ಭಾವನೆಗಳ ಸಮ್ಮಿಲನವೇ ಶಿಕ್ಷಣ : ಯು.ಆರ್.ನಾಗೇಶ್ ಕುಮಾರ್*

ಮಾರ್ಚ್ 2, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.