
ನಾಪೋಕ್ಲು ಸೆ.30 NEWS DESK : ಮೂರ್ನಾಡು ಬಿಜೆಪಿ ಶಕ್ತಿ ಕೇಂದ್ರದಲ್ಲಿ ಮಡಿಕೇರಿ ಬಿಜೆಪಿ ಗ್ರಾಮಾಂತರ ಮಂಡಲ ವತಿಯಿಂದ “ಸೇವಾಪಾಕ್ಷಿಕ” ಕಾರ್ಯಕ್ರಮ ನಡೆಯಿತು. ಜಿಲ್ಲಾ ಬಿಜೆಪಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ ಕಾರ್ಯಕ್ರಮ ಉದ್ಘಾಟಿಸಿದರು. ಈ ಸಂದರ್ಭ ರಕ್ತ ದಾನ ಶಿಬಿರ, ಜನ ಸಂಘದ ಸ್ಥಾಪಕರಾದ ಶ್ರೀ ದೀನ್ ದಯಾಳ್ ಉಪಾಧ್ಯಾಯರ ಅವರ ಜನ್ಮ ದಿನದ ಆಚರಣೆ ಮತ್ತು ಮೂರ್ನಾಡು ಆಸ್ಪತ್ರೆ ಆವರಣದಲ್ಲಿ ಗಿಡ ನೆಡುವ ಕಾರ್ಯಕ್ರಮ ನೆರವೇರಿತು. ಮೂರ್ನಾಡು ಶಕ್ತಿ ಕೇಂದ್ರದ ಅಧ್ಯಕ್ಷ ರವಿ ಅವರು ಅಧ್ಯಕ್ಷತೆಯನ್ನು ವಹಿಸಿದ್ದ ಕಾರ್ಯಕ್ರಮದಲ್ಲಿ ಮಾಜಿ ಶಾಸಕರಾದ ಕೆ.ಜಿ.ಬೋಪಯ್ಯ, ಅಪ್ಪಚ್ಚು ರಂಜನ್, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಅಶ್ವಿ ಸತೀಶ್, ಯುವ ಮೋರ್ಚಾ ಅಧ್ಯಕ್ಷ ಚೇತನ್ ಬಂಗೇರ, ಮಹಿಳಾ ಮೋರ್ಚಾ ಅಧ್ಯಕ್ಷ ಕುಮುದ ಮತ್ತು ಬಿಜೆಪಿ ಕಾರ್ಯಕರ್ತರು ಶಕ್ತಿ ಕೇಂದ್ರದ ಪ್ರಮುಖ್ ಸಹ ಪ್ರಮುಖ್ ಮತ್ತು ಚುನಾಯಿತ ಪ್ರತಿನಿಧಿಗಳು ಭಾಗವಹಿಸಿದರು. ಕಾರ್ಯಕ್ರಮದಲ್ಲಿ ಮಡಿಕೇರಿ ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷ ನಾಗೇಶ್ ಕುಂದಲ್ಪಾಡಿ ಸ್ವಾಗತಿಸಿ ವಂದಿಸಿದರು.
ವರದಿ : ದುಗ್ಗಳ ಸದಾನಂದ.









