Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಡಿಕೇರಿಯಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ 156 ನೇ ಮತ್ತು ಮಾಜಿ ಪ್ರಧಾನಿ  ಲಾಲ್ ಬಹದ್ದೂರ್ ಶಾಸ್ತ್ರಿ ಅವರ 121 ನೇ ಜನ್ಮ ವರ್ಷಾಚರಣೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಡಿಕೇರಿಯಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ 156 ನೇ ಮತ್ತು ಮಾಜಿ ಪ್ರಧಾನಿ  ಲಾಲ್ ಬಹದ್ದೂರ್ ಶಾಸ್ತ್ರಿ ಅವರ 121 ನೇ ಜನ್ಮ ವರ್ಷಾಚರಣೆ*

ಅಕ್ಟೋಬರ್ 3, 20253 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಅ.3 : ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರು ಸತ್ಯ ಹಾಗೂ ಅಹಿಂಸೆಯ ಮೂಲಕ ಇಡೀ ವಿಶ್ವಕ್ಕೆ ಬೆಳಕು ತೊರಿಸಿದ  ಮಾಹಾನ್ ಚೇತನ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಅವರು ಪ್ರತಿಪಾದಿಸಿದ್ದಾರೆ.  ಸತ್ಯ ಹಾಗೂ ಅಹಿಂಸೆ ಎಂಬ ಅಸ್ತ್ರಗಳಿಂದ ಬ್ರಿಟೀಷರ ವಿರುದ್ದ ಹೋರಾಡಿದ ಮಹಾತ್ಮ ಗಾಂಧೀಜಿ, ಈ ಎರಡೂ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಂಡಿದ್ದರು. ಇವರ ಹಾದಿಯಲ್ಲೇ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರೀಯವರು ನಡೆದರು. ನೈತಿಕತೆಗೆ ಗಾಂಧೀಜಿ ಹಾಗೂ ಶಾಸ್ತ್ರೀಜಿಯವರು ಮಾದರಿಯಾಗಿದ್ದರು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಅವರು ನುಡಿದರು. ಜಿಲ್ಲಾಡಳಿತ, ಜಿ.ಪಂ. ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ, ಕನ್ನಡ ಮತ್ತು ಸಂಸ್ಕೃತಿ, ಶಾಲಾ ಶಿಕ್ಷಣ, ಪದವಿ ಪೂರ್ವ ಶಿಕ್ಷಣ, ಕಾಲೇಜು ಶಿಕ್ಷಣ, ನಗರಸಭೆ, ಕನ್ನಡ ಸಾಹಿತ್ಯ ಪರಿಷತ್ತು, ಸರ್ವೋದಯ ಸಮಿತಿ, ಸ್ಕೌಟ್ಸ್ ಮತ್ತು ಗೈಡ್ಸ್  ಹಾಗೂ ಜಾನಪದ ಪರಿಷತ್ತು ಇವರ ಸಹಕಾರದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ 156 ನೇ ಮತ್ತು ಮಾಜಿ ಪ್ರಧಾನಿ  ಲಾಲ್ ಬಹದ್ದೂರ್ ಶಾಸ್ತ್ರಿ ಅವರ 121 ನೇ ಜನ್ಮ ವರ್ಷಾಚರಣೆ ಕಾರ್ಯಕ್ರಮವು ನಗರದ ಗಾಂಧಿ ಭವನದಲ್ಲಿ ಗುರುವಾರ ನಡೆದ  ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಭಗವಾನ್ ಬುದ್ದ ಅವರು ಇಡೀ ಮನುಕುಲಕ್ಕೆ ಸತ್ಯ ಹೇಳಿದರು, ಅದೇ ರೀತಿ ಗಾಂಧೀಜಿ ಅವರು ಶಾಂತಿ ಮತ್ತು ಅಹಿಂಸೆಯನ್ನು ಪ್ರತಿಪಾದಿಸಿದರು ಎಂದರು. ವಿಶ್ವದ ಎಲ್ಲಾ ರಾಷ್ಟ್ರಗಳಲ್ಲಿ ಮಹಾತ್ಮ ಗಾಂಧಿಯವರ ಪ್ರತಿಮೆ ಇರುವುದನ್ನು ಕಾಣುತ್ತೇವೆ. ಗಾಂಧೀಜಿ ಅವರ ಸಂದೇಶಗಳು ಇಡೀ ಜಗತ್ತಿಗೆ ಅನುಕರಣೀಯವಾಗಿದೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಅವರು ತಿಳಿಸಿದರು. ವಿವಿಧೆತೆಯಲ್ಲಿ ಏಕತೆ ಹೊಂದಿರುವ ರಾಷ್ಟ್ರದಲ್ಲಿ ಸಂಸ್ಕೃತಿ ಮತ್ತು ಸಂಸ್ಕಾರವನ್ನು ಉಳಿಸಿಕೊಂಡು   ಹೋಗಬೇಕು. ಗಾಂಧೀಜಿ ಅವರು ಕರ್ಮ ಸಿದ್ಧಾಂತ ನಂಬಿ ಬದುಕಿದವರು. ಇವರೊಬ್ವ ಮನ್ವಂತರ ಯುಗ ಪುರುಷ, ಆ ನಿಟ್ಟಿನಲ್ಲಿ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ತತ್ವ ಮತ್ತು ಸಂದೇಶಗಳನ್ನು ರೂಢಿಸಿಕೊಳ್ಳಬೇಕು ಎಂದರು. ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಸರಳತೆ, ರಾಷ್ಟ್ರದ ಬಗ್ಗೆ ಇದ್ದ ಗೌರವ ಮತ್ತು ಭಕ್ತಿ ಮಾದರಿ ಎಂದು ಆರ್.ಐಶ್ವರ್ಯ ಅವರು ತಿಳಿಸಿದರು. ವಿರಾಜಪೇಟೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕರಾದ ಪ್ರೊ.ಕೆ.ಸಿ.ದಯಾನಂದ ಅವರು ಮಾತನಾಡಿ ಮಹಾತ್ಮ ಗಾಂಧೀಜಿ ಅವರು ಸತ್ಯ ಮತ್ತು ಅಹಿಂಸೆಯನ್ನು ಇಡೀ ವಿಶ್ವಕ್ಕೆ ಸಾರಿದ್ದಾರೆ. ಮಹಾತ್ಮ ಗಾಂಧೀಜಿ ಅವರ ಭವ್ಯ ಭಾರತ ನಿರ್ಮಾಣಕ್ಕೆ ಹಲವು ಚಳವಳಿಯಲ್ಲಿ ಪಾಲ್ಗೊಂಡು ಉಪವಾಸ ಸತ್ಯಾಗ್ರಹ ಮಾಡಿದ್ದಾರೆ. ಹಾಗೆಯೇ ಯಂಗ್ ಇಂಡಿಯಾ ಸೇರಿದಂತೆ ಹಲವು ಪತ್ರಿಕೆಗಳ ಮೂಲಕ ಜಾಗೃತಿ ಮೂಡಿಸಿದ್ದಾರೆ ಎಂದರು. ತತ್ವ ರಹಿತ ರಾಜಕೀಯ, ದುಡಿಮೆ ಇಲ್ಲದ ಸಂಪತ್ತು, ಆತ್ಮ‌ಸಾಕ್ಷಿ ಇಲ್ಲದ ಕಾರ್ಯಗಳು, ತ್ಯಾಗ ಇಲ್ಲದ ಪೂಜೆ ಈ ಸಪ್ತ ಸೂತ್ರಗಳು ರಾಷ್ಟ್ರದ ದುಸ್ಥಿಗೆ ಕಾರಣ ಆಗಿದೆ ಎಂದು ಕೆ.ಸಿ.ದಯಾನಂದ ಅವರು ಹೇಳಿದರು. ರಾಮರಾಜ್ಯ ಮತ್ತು ಗ್ರಾಮ ಸ್ವರಾಜ್ಯದ ಪರಿಕಲ್ಪನೆಯನ್ನು ಗಾಂಧೀಜಿ ಅವರು ಕಂಡಿದ್ದರು. ಸರ್ವೋದಯ ಹಾಗೂ ವಿಕೇಂದ್ರೀಕರಣಕ್ಕೆ ಒತ್ತು ನೀಡಿದ್ದರು. ಖಾದಿ ಗ್ರಾಮೋದ್ಯೋಗ ಹಾಗೂ ಮಹಿಳಾ ಸಬಲೀಕರಣ ಪ್ರತಿಪಾದಿಸಿದ್ದರು ಎಂದರು. ಲಾಲ್ ಬಹದ್ದೂರ್ ಶಾಸ್ತ್ರಿ ಅವರು ಅತ್ಯಂತ ಪಾರದರ್ಶಕ ವ್ಯಕ್ತಿತ್ವ ಹೊಂದಿದ್ದ ಮಹಾನ್ ಚೇತನ ಎಂದರು. ಜೈ ಜವಾನ್, ಜೈ ಕಿಸಾನ್ ಸಂದೇಶ ಸಾರಿದ್ದರು ಎಂದು ನುಡಿದರು. ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿ ತಾಲ್ಲೂಕು ಅಧ್ಯಕ್ಷರಾದ ಮಂದ್ರೀರ ಮೋಹನ್ ದಾಸ್ ಅವರು ಮಾತನಾಡಿ ಮಹಾತ್ಮ ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಸಂದೇಶ ಮತ್ತು ಆದರ್ಶಗಳನ್ನು ಪ್ರತಿಯೊಬ್ಬರೂ ಮೈಗೂಡಿಕೊಳ್ಳಬೇಕು ಎಂದರು. ಸ್ಕೌಟ್ಸ್ ಮತ್ತು ಗೈಡ್ಸ್ ನ ಪ್ರಧಾನ ಆಯುಕ್ತರಾದ ಬೇಬಿ ಮ್ಯಾಥ್ಯು ಅವರು ಮಾತನಾಡಿ ಗಾಂಧಿ ಸ್ಮಾರಕ ಉದ್ಯಾನವನ ಕಾಮಗಾರಿಯನ್ನು ಆದಷ್ಟು ಬೇಗ ಪೂರ್ಣಗೊಳಿಸಬೇಕು ಎಂದು ಒತ್ತಾಯಿಸಿದರು. ನಗರಸಭೆ ಅಧ್ಯಕ್ಷರಾದ ಪಿ.ಕಲಾವತಿ ಅವರು ಮಾತನಾಡಿ ಮಹಾತ್ಮ ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಸಂದೇಶಗಳು ಪ್ರತಿಯೊಬ್ಬರಿಗೂ ದಾರಿದೀಪ ಎಂದರು. ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ಅಧ್ಯಕ್ಷರಾದ ಕೇಶವ ಕಾಮತ್ ಅವರು ಮಾತನಾಡಿ ಮಹಾತ್ಮ ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಅವರು ರಾಷ್ಟ್ರದ ಹೆಮ್ಮೆ ಎಂದರು.       ಉಪ ವಿಭಾಗಾಧಿಕಾರಿ ನಿತಿನ್ ಚಕ್ಕಿ, ಸರ್ವೋದಯ ಸಮಿತಿ ಅಧ್ಯಕ್ಷರಾದ ಅಂಬೆಕಲ್ಲು ಕುಶಾಲಪ್ಪ, ಪೌರಾಯುಕ್ತರಾದ ರಮೇಶ್, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಚಿದಾನಂದ, ಸರ್ವೋದಯ ಸಮಿತಿ ಸದಸ್ಯರಾದ ಮುದ್ದಯ್ಯ, ಪ್ರೇಮ, ಸಿದ್ದರಾಜು ಬೆಳ್ಳಯ್ಯ, ಪಾರ್ವತಿ, ಶಾಲಾ ಶಿಕ್ಷಣ ಇಲಾಖೆ ಡಿವೈಪಿಸಿ ಕೃಷ್ಣಪ್ಪ ಇತರರು ಇದ್ದರು. ಪ್ರೌಢಶಾಲೆ, ಪದವಿ ಪೂರ್ವ ಹಾಗೂ ಪದವಿ/ ಸ್ನಾತಕೋತ್ತರ ಪದವಿ ವಿಭಾಗದಲ್ಲಿ ಮಹಾತ್ಮ‌ ಗಾಂಧೀಜಿ ಕುರಿತು ಏರ್ಪಡಿಸಲಾಗಿದ್ದ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಿಗೆ ನಗದು ಬಹುಮಾನ ನೀಡಲಾಯಿತು. ವಾರ್ತಾಧಿಕಾರಿ ಚಿನ್ನಸ್ವಾಮಿ ಸ್ವಾಗತಿಸಿದರು,   ಸರ್ವೋದಯ ಸಮಿತಿ ಪ್ರಧಾನ ಕಾರ್ಯದರ್ಶಿ ಮುನೀರ್ ಅಹಮದ್ ನಿರೂಪಿಸಿದರು, ಪ್ರೇಮ ರಾಘವಯ್ಯ, ರೇವತಿ ರಮೇಶ್ ಹಾಗೂ ಸುಶೀಲಾ ಅವರು ನಾಡಗೀತೆ ಹಾಡಿದರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಕುಮಾರ ವಂದಿಸಿದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.