
ಮಡಿಕೇರಿ NEWS DESK ಅ.3 : ಕರ್ನಾಟಕ ಕ್ರೀಡಾ ಪ್ರಾಧಿಕಾರದ ನೂತನ ಉಪಾಧ್ಯಕ್ಷರಾಗಿ ಇಂದು ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿರುವ ಅಧಿಕೃತ ಕಚೇರಿಯಲ್ಲಿ ಚೆಪ್ಪುಡೀರ ಅರುಣ್ ಮಾಚಯ್ಯ ಅವರು ಅಧಿಕಾರ ಸ್ವೀಕರಿಸಿದರು. ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್ ಭೋಸರಾಜು, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಶಾಸಕ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ, ಕಾಂಚನ್ ಪೊನ್ನಣ್ಣ, ಕಾಂಗ್ರೆಸ್ ಮುಖಂಡರು, ಕ್ರೀಡಾ ಇಲಾಖೆಯ ಅಧಿಕಾರಿ ವರ್ಗದವರು ಉಪಸ್ಥಿತರಿದ್ದರು.
ದೇವರಿಗೆ ಪೂಜೆ ಸಲ್ಲಿಸಿದ ಬಳಿಕ ಕಚೇರಿಗೆ ಪ್ರವೇಶಿಸಿದ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷರನ್ನು ಗಣ್ಯರು ಅಭಿನಂದಿಸಿದರು.









