
ಪುತ್ತೂರು NEWS DESK ಅ.3 : ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಇಬ್ಬರು ವಿದ್ಯಾರ್ಥಿಗಳು ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ಕಬಡ್ಡಿ ತಂಡಕ್ಕೆ ಆಯ್ಕೆಯಾಗಿದ್ದಾರೆ. ಕಾಲೇಜಿನ ದ್ವಿತೀಯ ವರ್ಷದ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳಾದ ಎಮ್.ವಿಜೇತ್ ಪೂಜಾರಿ ಹಾಗೂ ಗೌರವ್.ಎಸ್.ಜಿ ಇವರು ಆಯ್ಕೆ ಶಿಬಿರದಲ್ಲಿ ಅತ್ಯುತ್ತಮ ಸಾಧನೆಯನ್ನು ಮಾಡಿ ವಿಶ್ವವಿದ್ಯಾನಿಲಯ ತಂಡದಲ್ಲಿ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಅಕ್ಟೋಬರ್ 4 ರಿಂದ 7ರ ವರೆಗೆ ಬೆಳಗಾವಿಯ ರಾಣಿ ಚೆನ್ನಮ್ಮ ವಿಶ್ವವಿದ್ಯಾನಿಲಯದ ಆಶ್ರಯದಲ್ಲಿ ನಡೆಯುವ ದಕ್ಷಿಣ ವಲಯ ಅಂತರ್ ವಿಶ್ವವಿದ್ಯಾನಿಲಯ ಕಬಡ್ಡಿ ಕ್ರೀಡಾಕೂಟದಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ತಂಡವನ್ನು ಇವರು ಪ್ರತಿನಿಧಿಸಲಿದ್ದಾರೆ. ವಿಶ್ವವಿದ್ಯಾನಿಲಯ ತಂಡಕ್ಕೆ ಆಯ್ಕೆಗೊಂಡ ಇವರಿಗೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಬಾಲಚಂದ್ರ ಗೌಡ ಭಾರ್ತಿಕುಮೇರು ಮಾರ್ಗದರ್ಶನವನ್ನು ನೀಡಿದ್ದಾರೆ ಎಂದು ಪ್ರಾಂಶುಪಾಲ ಡಾ.ಮಹೇಶ್‌ಪ್ರಸನ್ನ.ಕೆ ತಿಳಿಸಿದ್ದಾರೆ.








