ಮಡಿಕೇರಿ NEWS DESK ಅ.3 : ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ವಿರಾಜಪೇಟೆ ತಾಲ್ಲೂಕಿನ ಕದನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಾಮಿಯಾಲ-ಅರಮೇರಿ ರಸ್ತೆ ರೂ.40 ಲಕ್ಷ ವೆಚ್ಚದಲ್ಲಿ ಅಭಿವೃದ್ಧಿ ಹೊಂದಿದೆ. ದಶಕಗಳಿಂದ ಅಭಿವೃದ್ಧಿ ಕಾಣದೆ ನೆನೆಗುದಿಗೆ ಬಿದ್ದಿದ್ದ ರಸ್ತೆಯಿಂದ ಸಾರ್ವಜನಿಕರಿಗೆ ಓಡಾಡಲು ತೊಂದರೆಯಾಗುತ್ತಿತ್ತು. ಈ ಹಿಂದೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಈ ಭಾಗಕ್ಕೆ ಭೇಟಿ ನೀಡಿದ ಸಂದರ್ಭ, ಸ್ಥಳೀಯ ನಾಯಕರು ಹಾಗೂ ಸಾರ್ವಜನಿಕರು ಈ ರಸ್ತೆಯ ಅಭಿವೃದ್ಧಿ ಬಗ್ಗೆ ಮನವಿ ಸಲ್ಲಿಸಿದ್ದರು. ರಸ್ತೆಯ ಅಭಿವೃದ್ಧಿಯ ಅವಶ್ಯಕತೆಯನ್ನು ಗಂಭೀರವಾಗಿ ಪರಿಗಣಿಸಿದ ಶಾಸಕರು, ತಮ್ಮ ನಿಧಿಯಿಂದ ರೂ.40 ಲಕ್ಷ ಅನುದಾನ ಒದಗಿಸಿದ್ದರು. ಇದೀಗ ರಸ್ತೆ ಕಾಮಗಾರಿ ಪೂರ್ಣಗೊಂಡಿದ್ದು, ಉದ್ಘಾಟನೆಗಾಗಿ ಶಾಸಕರ ಆಗಮನವನ್ನು ಎದುರು ನೋಡುತ್ತಿದ್ದಾರೆ. ಈ ರಸ್ತೆ ನಿರ್ಮಿಸಲು ಹಾಗೂ ಅನುದಾನ ಒದಗಿಸಲು ಸಹಕರಿಸಿದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತಿತೀರಾ ಧರ್ಮಜ ಉತ್ತಪ್ಪ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಟ್ಟಡ ರಂಜಿ ಪೂಣಚ್ಚ, ವಲಯ ಅಧ್ಯಕ್ಷ ಕಾಳಮಾಂಡ ಬೇಬಿ, ಪ್ರಮುಖರಾದ ಕುಂಡಚ್ಚಿರ ಮಂಜು ದೇವಯ್ಯ, ಪಂಚಾಯಿತಿ ಸದಸ್ಯರಾದ ಅಶ್ವಕ್, ಸ್ಥಳೀಯ ಪ್ರಮುಖರು ಹಾಗೂ ಇದಕ್ಕಾಗಿ ಶ್ರಮಿಸಿದ ಎಲ್ಲರಿಗೂ ಸ್ಥಳೀಯ ಗ್ರಾಮಸ್ಥರು ಧನ್ಯವಾದ ಅರ್ಪಿಸಿದ್ದಾರೆ.











