Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮಡಿಕೇರಿಯಲ್ಲಿ 132ನೇ ವರ್ಷದ ಶ್ರೀ ರಾಮೋತ್ಸವ ಸಾಂಸ್ಕೃತಿಕ ಕಾರ್ಯಕ್ರಮಗಳು ಮಾ.19 ರಿಂದ ಆರಂಭ*
  • *’ರತ್ನ ಶ್ರೀ’ ರಾಜ್ಯಮಟ್ಟದ ಪ್ರಶಸ್ತಿಗೆ ಕೂರ್ಗ್ ಬ್ಲಡ್ ಫೌಂಡೇಶನ್ ಕರ್ನಾಟಕ (ರಿ) ಸಂಸ್ಥೆಯ ಸ್ಥಾಪಕ ಅಧ್ಯಕ್ಷ ಸಮೀರ್ ಆಯ್ಕೆ*
  • *ಕಾರ್ಯವೈಖರಿಗೆ ಮೆಚ್ಚುಗೆ : ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಿಂದ ಕುಶಾಲನಗರ ಚೇಂಬರ್ ಆಫ್ ಕಾಮರ್ಸ್ ಗೆ ಕೊಡುಗೆ*
  • *ಮರಾಠ, ಮರಾಟಿ ಸಮಾಜ ಸೇವಾ ಸಂಘ, ಅಂಬಾಭವಾನಿ ಯುವಕ-ಯುವತಿ ಕ್ರೀಡಾ ಸಂಘದಿಂದ ಮಾ.21 ಮತ್ತು 22 ರಂದು ಕ್ರೀಡಾಕೂಟ*
  • *45 ನೇ ರಾಷ್ಟ್ರ ಮಟ್ಟದ ಕ್ರೀಡಾಕೂಟದಲ್ಲಿ ಕೊಡಗು ಜಿಲ್ಲೆಯ ಕ್ರೀಡಾಪಟುಗಳ ಸಾಧನೆ*
  • *ಗ್ರಾಮೀಣ ಪ್ರತಿಭೆಗಳಿಗೆ ಕೆಇಎ ನೀಡಲಿದೆ ‘ನೀಟ್’ ಬಲ: ಸರ್ಕಾರಿ ಕಾಲೇಜುಗಳಲ್ಲೇ ಉಚಿತ ತರಬೇತಿ; ಸಚಿವರಿಂದ ಮಹತ್ವದ ಘೋಷಣೆ!*
  • *ಅಧಿವೇಶನದಲ್ಲಿ ಡಿಸಿಎಂ ಜೊತೆ ಶಾಸಕ ಎ.ಎಸ್.ಪೊನ್ನಣ್ಣ ಸಮಾಲೋಚನೆ*
  • *ರಾಜ್ಯದಲ್ಲಿ ಬದಲಾದ ಹವಾಮಾನ: ಹಲವೆಡೆ ಬಿರುಗಾಳಿ ಸಹಿತ ಆಲಿಕಲ್ಲು ಮಳೆ; ಬೀದರ್‌ನಲ್ಲಿ ಸಿಡಿಲಿಗೆ ರೈತ ಬಲಿ!*
  • *ಆದಿವಾಸಿಗಳ ಹಕ್ಕಿಗಾಗಿ ಆಗ್ರಹಿಸಿ ಪ್ರತಿಭಟನೆ : ಲೈನ್ ಮನೆಗಳಿಂದ ಮುಕ್ತಗೊಳಿಸಲು ಒತ್ತಾಯ*
  • *ಚಿನ್ನಾಭರಣ ಪ್ರಿಯರಿಗೆ ಸುವರ್ಣಾವಕಾಶ : ಕುಶಾಲನಗರದ ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್‌ ನಲ್ಲಿ ಯುಗಾದಿ ಹಬ್ಬದ ಪ್ರಯುಕ್ತ ವಿಶೇಷ ಕೊಡುಗೆಗಳು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗಿನಲ್ಲಿ ಅಂತರರಾಷ್ಟ್ರೀಯ ಕಾಫಿ ದಿನ ಆಚರಣೆ : 2047ಕ್ಕೆ 7 ಲಕ್ಷ ಟನ್ ಉತ್ಪಾದನೆಗೆ ಸಂಕಲ್ಪ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡಗಿನಲ್ಲಿ ಅಂತರರಾಷ್ಟ್ರೀಯ ಕಾಫಿ ದಿನ ಆಚರಣೆ : 2047ಕ್ಕೆ 7 ಲಕ್ಷ ಟನ್ ಉತ್ಪಾದನೆಗೆ ಸಂಕಲ್ಪ*

ಅಕ್ಟೋಬರ್ 4, 20253 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK  ಅ.4 : ಕೊಡಗು ಮಹಿಳಾ ಕಾಫಿ ಜಾಗೃತಿ ಸಂಸ್ಥೆ (Coorg Women Coffee Awareness Body – CWCAB) ವತಿಯಿಂದ ಅಂತರರಾಷ್ಟ್ರೀಯ ಕಾಫಿ ದಿನವನ್ನು (ಅಕ್ಟೋಬರ್ 1) ಮಡಿಕೇರಿಯಲ್ಲಿರುವ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (KOIMS)ಯ ಬೋಧಕ ಆಸ್ಪತ್ರೆಯ ಸಭಾಂಗಣದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಯಿತು. ಈ ಸಂದರ್ಭದಲ್ಲಿ, ಕಾಫಿ ಉತ್ಪಾದನೆಯನ್ನು ಹೆಚ್ಚಿಸುವ ಗುರಿ ಹಾಗೂ ಆರೋಗ್ಯದ ದೃಷ್ಟಿಯಿಂದ ಕಾಫಿ ಸೇವನೆಯ ಮಹತ್ವದ ಬಗ್ಗೆ ಗಣ್ಯರು ಮಾತನಾಡಿದರು. *2047ಕ್ಕೆ 7 ಲಕ್ಷ  ಟನ್ ಉತ್ಪಾದನೆಗೆ ಸಂಕಲ್ಪ* ಕಾರ್ಯಕ್ರಮದಲ್ಲಿ ಮುಖ್ಯ ಭಾಷಣ ಮಾಡಿದ ಕೂರ್ಗ್ ಪ್ಲಾಂಟರ್ಸ್ ಅಸೋಸಿಯೇಷನ್ (CPA)‌ನ ಮಾಜಿ ಅಧ್ಯಕ್ಷ ಎನ್.ಎ. ಅಪ್ಪಯ್ಯ ಅವರು, ಭಾರತೀಯ ಕಾಫಿಯನ್ನು ಜಾಗತಿಕ ಮಟ್ಟದಲ್ಲಿ ಪ್ರಚಾರ ಪಡಿಸುವಲ್ಲಿ ಕಾಫಿ ಡೇ ಸಂಸ್ಥಾಪಕ ದಿ. ಸಿದ್ಧಾರ್ಥ್ ಅವರ ಕೊಡುಗೆಯನ್ನು ಸ್ಮರಿಸಿದರು. ಭಾರತಕ್ಕೆ ಕಾಫಿ ಪರಿಚಯವಾಗಿ 400 ವರ್ಷಗಳು ಸಂದಿವೆ ಎಂಬ ಅಂಶವನ್ನು ಉಲ್ಲೇಖಿಸಿದರು. ಅವರು ಮಾತನಾಡಿ,ಭಾರತೀಯ ಕಾಫಿ ಮಂಡಳಿ ಅಧ್ಯಕ್ಷರಾದ ದಿನೇಶ್ ದೇವವೃಂದರವರು  “2047ರ ವೇಳೆಗೆ ಭಾರತವು 7 ಲಕ್ಷ  ಟನ್‌ಗಳಷ್ಟು ಕಾಫಿಯನ್ನು ಉತ್ಪಾದಿಸುವ ಗುರಿ ಹೊಂದಿದೆ ಎಂದು ಮಡಿಕೇರಿಯಲ್ಲಿ ಸೆಪ್ಟಂಬರ್‌ 24ರಂದು ನಡೆದ ಕಾಫಿ ದಸರಾ ಕಾರ್ಯಕ್ರಮದಲ್ಲಿ ತಿಳಿಸಿದ್ದಾರೆ. ಈ ನಿಟ್ಟಿನಲ್ಲಿ ಎಲ್ಲ ಕಾಫಿ ಬೆಳೆಗಾರರು ಶ್ರಮಿಸಬೇಕು. ಹಾಗೆಯೇ, ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ FPO (ರೈತ ಉತ್ಪಾದಕ ಸಂಸ್ಥೆ) ಗಳನ್ನು ಸ್ಥಾಪಿಸಿ ಗುಣಮಟ್ಟದ ಕಾಫಿ ಉತ್ಪಾದನೆ ಮತ್ತು ನೇರ ಮಾರುಕಟ್ಟೆ ಮಾಡಿದಲ್ಲಿ ಉತ್ತಮ ಮತ್ತು ಸ್ಥಿರ ಬೆಲೆ ನಿರೀಕ್ಷಿಸಬಹುದು” ಎಂದು ಸಲಹೆ ನೀಡಿದರು. ಅಲ್ಲದೆ, ಕೊಡಗಿನ ಕಾಫಿಯನ್ನು ವಿಶ್ವಮಟ್ಟದಲ್ಲಿ ಪ್ರಚುರಪಡಿಸುತ್ತಿರುವ CWCAB ಯ ಕಾರ್ಯವನ್ನು ಶ್ಲಾಘಿಸಿದರು. *ಆರೋಗ್ಯಕ್ಕೆ ಉತ್ತಮ ಪೇಯ ಕಾಫಿ* ಕರ್ನಾಟಕ ಪ್ಲಾಂಟರ್ಸ್ ಅಸೋಸಿಯೇಷನ್ (KPA)‌ನ ಉಪಾಧ್ಯಕ್ಷ ಎಂ.ಸಿ. ಕಾರ್ಯಪ್ಪ ಅವರು, ಆರೋಗ್ಯ ದೃಷ್ಟಿಯಿಂದ ಕಾಫಿ ಸೇವನೆಯ ಉಪಯುಕ್ತತೆಗಳನ್ನು ವಿವರಿಸಿದರು. “ವಿದ್ಯಾರ್ಥಿಗಳು ಮತ್ತು ಯುವಜನತೆ ಉತ್ತಮ ಪಾನೀಯವಾಗಿ ಡಾರ್ಕ್ ರೋಸ್ಟೆಡ್ ಕಾಫಿಯನ್ನು ಸೇವಿಸುವುದನ್ನು ರೂಢಿಸಿಕೊಳ್ಳಬೇಕು. ವೈದ್ಯಕೀಯ ವಿದ್ಯಾರ್ಥಿಗಳು ಇದರ ಕುರಿತು ಆಳವಾದ ಅಧ್ಯಯನ ನಡೆಸಬೇಕು” ಎಂದು ಕಿವಿಮಾತು ಹೇಳಿದರು. *KOIMS ಆಸ್ಪತ್ರೆಯ ಮುಖ್ಯಸ್ಥರು ಮತ್ತು ವೈದ್ಯರಿಂದ ಬೆಂಬಲ* ಕೊಐಎಂಎಸ್‌ನ ಡೀನ್ ಮತ್ತು ನಿರ್ದೇಶಕರಾದ ಡಾ. ಲೋಕೇಶ್ ಅವರು, ಉತ್ತಮ ಗುಣಮಟ್ಟದ ಕಾಫಿ ಸೇವನೆಯು ಆರೋಗ್ಯಕ್ಕೆ ಮತ್ತು ಜನರೊಂದಿಗೆ ಸಂವಹನಕ್ಕೆ ಉತ್ತೇಜಕವಾಗಿದೆ ಎಂದು ಅಭಿಪ್ರಾಯಪಟ್ಟರು. ತುರ್ತು ಚಿಕಿತ್ಸಾ ಘಟಕದ ಮುಖ್ಯಸ್ಥರಾದ ಡಾ. ಮೋಹನ್ ಅಪ್ಪಾಜಿ ಅವರು, “ಕಾಫಿ ಸೇವನೆಯಿಂದ ಹಲವು ಆರೋಗ್ಯ ಸಮಸ್ಯೆಗಳು ಗುಣಮುಖವಾಗಿರುವುದನ್ನು ಕಂಡಿದ್ದೇವೆ. ನಮ್ಮ ಕಾಫಿಯನ್ನು ಉತ್ತಮ ಗುಣಮಟ್ಟದೊಂದಿಗೆ ಉತ್ಪಾದಿಸಿ ಪ್ರಚಾರ ಮಾಡಬೇಕು” ಎಂದರು. ಬಾಲ್ಯದಲ್ಲಿ ತಮ್ಮ ತಾಯಿ ಬೆಲ್ಲದೊಂದಿಗೆ ನೀಡುತ್ತಿದ್ದ ಬ್ಲಾಕ್ ಕಾಫಿಯ ಆಹ್ಲಾದಕರ ಅನುಭವವನ್ನು ಸ್ಮರಿಸಿದ ಅವರು, ಕೊಡಗು ಕಾಫಿ ಉತ್ಪಾದನೆಯಲ್ಲಿ ಮೊದಲ ಸ್ಥಾನದಲ್ಲಿರುವ ಕಾರಣ, ಅಂತರರಾಷ್ಟ್ರೀಯ ಕಾಫಿ ದಿನದ ಮಾದರಿಯಲ್ಲೇ ರಾಷ್ಟ್ರೀಯ ಕಾಫಿ ದಿನವನ್ನು ಆಚರಿಸುವಂತಾಗಬೇಕು ಎಂದು ಕರೆ ನೀಡಿದರು. ಪಿಡಿಯಾಟ್ಟರಿಕ್ ವಿಭಾಗದ HOD ಆದ ಡಾ. ಪುರುಸೋತಮ್‌ ಮಾತನಾಡಿ ಕಾಪೀ ಸೇವನೆ ಆರೋಗ್ಯ ದೃಷ್ಠಿಯಿಂದ ಉತ್ತಮವಾಗಿದೆ ಎಂದು ತಿಳಿಸಿದರು. *ಜಾಗತಿಕ ಮತ್ತು ಕೊಡಗಿನ ಸ್ಥಾನಮಾನ* ಕಾಫಿ ಮಂಡಳಿಯ ಉಪ ನಿರ್ದೇಶಕರಾದ ಡಾ. ವಿ. ಚಂದ್ರಶೇಖರ್ ಅವರು, “ಭಾರತವು ವಿಶ್ವದಲ್ಲಿ 7ನೇ ಅತಿ ದೊಡ್ಡ ಕಾಫಿ ಉತ್ಪಾದಕ ದೇಶವಾಗಿದ್ದು, 5ನೇ ಅತಿ ದೊಡ್ಡ ಕಾಫಿ ರಫ್ತು ದೇಶವಾಗಿದೆ. ಈ ನಿಟ್ಟಿನಲ್ಲಿ ಕಾಫಿ ಮಂಡಳಿಯು ಯಾವಾಗಲೂ ಬೆಳೆಗಾರರಿಗೆ ಬೆಂಬಲವಾಗಿ ನಿಲ್ಲುತ್ತದೆ” ಎಂದು ಭರವಸೆ ನೀಡಿದರು. ಕೂಗ್ ಪ್ಲಾಂಟರ್ಸ್ ಅಸೋಸಿಯೇಷನ್ (CPA)‌ನ ಅಧ್ಯಕ್ಷರಾದ ನಂದಾ ಬೇಳ್ಯಪ್ಪ ಅವರು, ಕಾಫಿಯ ಬಗ್ಗೆ ಒಲವು ಮೂಡಿಸಿ, ಅದನ್ನು ದಿನನಿತ್ಯದ ಅಭ್ಯಾಸಗಳಲ್ಲಿ ಒಂದಾಗಿಸಲು ಸ್ವಯಂ ಪ್ರತಿಜ್ಞೆ ಸ್ವೀಕರಿಸುವಂತೆ ಜನರನ್ನು ಒತ್ತಾಯಿಸಿದರು. ಅವರು, “ಭಾರತದ ಒಟ್ಟು ಕಾಫಿ ಉತ್ಪಾದನೆಯಲ್ಲಿ ಕೊಡಗು ಶೇ. 40ರಷ್ಟು ಕೊಡುಗೆ ನೀಡುತ್ತದೆ. ಕಾಫಿ ಕೊಡಗಿನ ಕೇವಲ ಪಾನೀಯವಲ್ಲ, ಅದೊಂದು ಸಂಸ್ಕೃತಿಯಾಗಿದೆ” ಎಂದು ಪ್ರತಿಪಾದಿಸಿದರು. ಕಾಫಿ ಮಂಡಳಿ ನಿರ್ದೇಶಕರಾದ ತಲೂರು ಕಿಶೋರ್ ಕುಮಾರ್ ಅವರು ಕೇಂದ್ರ ಸರ್ಕಾರದ ಉತ್ತೇಜಕ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು. *CWCAB: ಜಾಗೃತಿ ಮತ್ತು ಸಬಲೀಕರಣದ ಕೇಂದ್ರ* ಕೊಡಗು ಮಹಿಳಾ ಕಾಫಿ ಜಾಗೃತಿ ಸಂಸ್ಥೆಯ (CWCAB) ಖಜಾಂಚಿಗಳಾದ ಕುಟ್ಟೇಟಿರ ಕುಮಾರಿ ಕುಂಞಪ್ಪ ಅವರು ಸಂಸ್ಥೆಯ ಕಾರ್ಯಚಟುವಟಿಕೆಗಳನ್ನು ವಿವರಿಸಿದರು. ಸಂಸ್ಥೆಯು 450 ರಿಂದ 500 ಸದಸ್ಯರನ್ನು ಹೊಂದಿದ್ದು, ಕಾಫಿ ಕುರಿತು ಜಾಗೃತಿ ಕಾರ್ಯಕ್ರಮಗಳ ಜೊತೆಗೆ, ರೈತರಿಗೆ ಜೇನು ಸಾಕಾಣಿಕೆ, ಹೈನುಗಾರಿಕೆ ಮತ್ತು ಮೀನುಗಾರಿಕೆ ಮುಂತಾದ ಕೃಷಿ ಸಂಬಂಧಿತ ಕಾರ್ಯಾಗಾರಗಳನ್ನು ನಡೆಸುತ್ತಾ ಬಂದಿದೆ ಎಂದು ತಿಳಿಸಿದರು. ಕಾರ್ಯಕ್ರಮದ ಆರಂಭದಲ್ಲಿ ಭವ್ಯ ದಿನೇಶ್ ಪ್ರಾರ್ಥನೆ ಸಲ್ಲಿಸಿದರೆ, CWCABಯ ಪ್ರಧಾನ ಕಾರ್ಯದರ್ಶಿ ಶ್ರೀಮತಿ ಅಪ್ಪನೆರವಂಡ ಅನಿತಾ ನಂದ ಅವರು ಸ್ವಾಗತ ಭಾಷಣ ಮಾಡಿ ಪ್ರಾಸ್ತಾವಿಕ ನುಡಿಗಳನ್ನಾಡಿದರು. ನಿಶಾ ಮೋಹನ್ ವಂದನಾರ್ಪಣೆ ಸಲ್ಲಿಸಿದರು. ಕಾರ್ಯಕ್ರಮದಲ್ಲಿ CWCAB,CPA, KPA ಪದಾಧಿಕಾರಿಗಳು, ಸದಸ್ಯರು, ಕೆಐಎಂಎಸ್ ವಿದ್ಯಾರ್ಥಿಗಳು ಹಾಗೂ ಆಸ್ಪತ್ರೆಯ ಸಿಬ್ಬಂದಿಗಳು ಹಾಜರಿದ್ದರು. ಕಾರ್ಯಕ್ರಮದ ಕೊನೆಯಲ್ಲಿ, ನೆರೆದಿದ್ದ ಎಲ್ಲರಿಗೂ ಲಘು ಉಪಹಾರ, ಕಾಫಿ ಕೇಕ್ ಮತ್ತು ಉತ್ತಮವಾದ ಬಿಸಿ ಬಿಸಿ ಕಾಫಿಯನ್ನು ವಿತರಿಸಲಾಯಿತು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮಡಿಕೇರಿಯಲ್ಲಿ 132ನೇ ವರ್ಷದ ಶ್ರೀ ರಾಮೋತ್ಸವ ಸಾಂಸ್ಕೃತಿಕ ಕಾರ್ಯಕ್ರಮಗಳು ಮಾ.19 ರಿಂದ ಆರಂಭ*

ಮಾರ್ಚ್ 17, 2026

*’ರತ್ನ ಶ್ರೀ’ ರಾಜ್ಯಮಟ್ಟದ ಪ್ರಶಸ್ತಿಗೆ ಕೂರ್ಗ್ ಬ್ಲಡ್ ಫೌಂಡೇಶನ್ ಕರ್ನಾಟಕ (ರಿ) ಸಂಸ್ಥೆಯ ಸ್ಥಾಪಕ ಅಧ್ಯಕ್ಷ ಸಮೀರ್ ಆಯ್ಕೆ*

ಮಾರ್ಚ್ 17, 2026

*ಕಾರ್ಯವೈಖರಿಗೆ ಮೆಚ್ಚುಗೆ : ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಿಂದ ಕುಶಾಲನಗರ ಚೇಂಬರ್ ಆಫ್ ಕಾಮರ್ಸ್ ಗೆ ಕೊಡುಗೆ*

ಮಾರ್ಚ್ 17, 2026

*’ರತ್ನ ಶ್ರೀ’ ರಾಜ್ಯಮಟ್ಟದ ಪ್ರಶಸ್ತಿಗೆ ಕೂರ್ಗ್ ಬ್ಲಡ್ ಫೌಂಡೇಶನ್ ಕರ್ನಾಟಕ (ರಿ) ಸಂಸ್ಥೆಯ ಸ್ಥಾಪಕ ಅಧ್ಯಕ್ಷ ಸಮೀರ್ ಆಯ್ಕೆ*

ಮಾರ್ಚ್ 17, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಮಾ.17 : ಕಾವ್ಯಶ್ರೀ ಚಾರಿಟೇಬಲ್ ಟ್ರಸ್ಟ್ (ರಿ) ಜಾನಪದ ಸಂಭ್ರಮ-2026 ‘ರತ್ನ ಶ್ರೀ’ ರಾಜ್ಯಮಟ್ಟದ ಪ್ರಶಸ್ತಿಗೆ…

*ಕಾರ್ಯವೈಖರಿಗೆ ಮೆಚ್ಚುಗೆ : ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಿಂದ ಕುಶಾಲನಗರ ಚೇಂಬರ್ ಆಫ್ ಕಾಮರ್ಸ್ ಗೆ ಕೊಡುಗೆ*

ಮಾರ್ಚ್ 17, 2026

*ಮರಾಠ, ಮರಾಟಿ ಸಮಾಜ ಸೇವಾ ಸಂಘ, ಅಂಬಾಭವಾನಿ ಯುವಕ-ಯುವತಿ ಕ್ರೀಡಾ ಸಂಘದಿಂದ ಮಾ.21 ಮತ್ತು 22 ರಂದು ಕ್ರೀಡಾಕೂಟ*

ಮಾರ್ಚ್ 17, 2026

*45 ನೇ ರಾಷ್ಟ್ರ ಮಟ್ಟದ ಕ್ರೀಡಾಕೂಟದಲ್ಲಿ ಕೊಡಗು ಜಿಲ್ಲೆಯ ಕ್ರೀಡಾಪಟುಗಳ ಸಾಧನೆ*

ಮಾರ್ಚ್ 17, 2026

*ಗ್ರಾಮೀಣ ಪ್ರತಿಭೆಗಳಿಗೆ ಕೆಇಎ ನೀಡಲಿದೆ ‘ನೀಟ್’ ಬಲ: ಸರ್ಕಾರಿ ಕಾಲೇಜುಗಳಲ್ಲೇ ಉಚಿತ ತರಬೇತಿ; ಸಚಿವರಿಂದ ಮಹತ್ವದ ಘೋಷಣೆ!*

ಮಾರ್ಚ್ 17, 2026

*ಅಧಿವೇಶನದಲ್ಲಿ ಡಿಸಿಎಂ ಜೊತೆ ಶಾಸಕ ಎ.ಎಸ್.ಪೊನ್ನಣ್ಣ ಸಮಾಲೋಚನೆ*

ಮಾರ್ಚ್ 17, 2026

*ರಾಜ್ಯದಲ್ಲಿ ಬದಲಾದ ಹವಾಮಾನ: ಹಲವೆಡೆ ಬಿರುಗಾಳಿ ಸಹಿತ ಆಲಿಕಲ್ಲು ಮಳೆ; ಬೀದರ್‌ನಲ್ಲಿ ಸಿಡಿಲಿಗೆ ರೈತ ಬಲಿ!*

ಮಾರ್ಚ್ 17, 2026

*ಆದಿವಾಸಿಗಳ ಹಕ್ಕಿಗಾಗಿ ಆಗ್ರಹಿಸಿ ಪ್ರತಿಭಟನೆ : ಲೈನ್ ಮನೆಗಳಿಂದ ಮುಕ್ತಗೊಳಿಸಲು ಒತ್ತಾಯ*

ಮಾರ್ಚ್ 17, 2026

*ಚಿನ್ನಾಭರಣ ಪ್ರಿಯರಿಗೆ ಸುವರ್ಣಾವಕಾಶ : ಕುಶಾಲನಗರದ ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್‌ ನಲ್ಲಿ ಯುಗಾದಿ ಹಬ್ಬದ ಪ್ರಯುಕ್ತ ವಿಶೇಷ ಕೊಡುಗೆಗಳು*

ಮಾರ್ಚ್ 17, 2026

*ಪಾಕ್-ಅಫ್ಘಾನ್ ಯುದ್ಧ ಭೀಕರ: ಕಾಬೂಲ್ ಆಸ್ಪತ್ರೆ ಮೇಲೆ ಪಾಕಿಸ್ತಾನ ವಾಯುದಾಳಿ; 400 ಮಂದಿ ಸಾವು, 250ಕ್ಕೂ ಹೆಚ್ಚು ಜನರಿಗೆ ಗಾಯ!*

ಮಾರ್ಚ್ 17, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.