
ವಿರಾಜಪೇಟೆ ಅ.6 NEWS DESK : ವಿರಾಜಪೇಟೆಯ ಸೆಂಟ್ ಆನ್ಸ್ ಪದವಿ ಕಾಲೇಜಿನ ಎನ್ ಎಸ್ ಎಸ್ ಘಟಕದ ಸ್ವಯಂ ಸಾಮಾಜಿಕ ಹಾಗೂ ಶೈಕ್ಷಣಿಕ ಗಣತಿಯ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದರು. ವಿರಾಜಪೇಟೆಯ ಪುರಸಭಾ ವ್ಯಾಪ್ತಿಯ ಚರ್ಚ್ ಸ್ಟ್ರೀಟ್, ಜನರಲ್ ತಿಮ್ಮಯ್ಯ ಬಡಾವಣೆ ಹಾಗೂ ಅಪ್ಪಯ್ಯ ಸ್ವಾಮಿ ರಸ್ತೆಯ ಮನೆಗಳಿಗೆ ತೆರಳಿ ವಿದ್ಯಾರ್ಥಿಗಳು ಸಾರ್ವಜನಿಕರಲ್ಲಿ ಗಣತಿಯ ಕುರಿತು ಜಾಗೃತಿಯನ್ನು ಮೂಡಿಸಿದರು. ಎನ್ಎಸ್ಎಸ್ ಸ್ವಯಂ ಸೇವಕರು ವಿವಿಧ ಗುಂಪುಗಳಾಗಿ ವಿಂಗಡಿಸಿ ಪ್ರತ್ಯೇಕವಾಗಿ ಮನೆಮನೆಗಳಿಗೆ ತೆರಳಿ ಜಾಗೃತಿಯನ್ನು ಮೂಡಿಸುವ ಪ್ರಯತ್ನವನ್ನು ಮಾಡಿದರು. ಅಧಿಕಾರಿಗಳು ಗಣತಿಗೆ ಬರುವಂತಹ ಸಂದರ್ಭದಲ್ಲಿ ಇರಬೇಕಾದಂತಹ ದಾಖಲೆಗಳು, ಕೇಳುವ ಮಾಹಿತಿಗಳ ಕುರಿತು ವಿವರಿಸಿದರು. ಈ ಸಂದರ್ಭ ಕಾಲೇಜಿನ ಎನ್ಎಸ್ಎಸ್ ಘಟಕದ ನಾಯಕರುಗಳು ಹಾಗೂ ಸ್ವಯಂ ಸೇವಕರು ಉಪಸ್ಥಿತರಿದ್ದರು.









