
ಸಿದ್ದಾಪುರ ಅ.6 NEWS DESK : ಶ್ರೀ ನಾರಾಯಣ ಗುರು ಧರ್ಮ ಪರಿಪಾಲನಾ ಯೋಗಂ (ಎಸ್.ಎನ್.ಡಿ.ಪಿ) ಹೆಗ್ಗಳ ಶಾಖೆಯ ವತಿಯಿಂದ ಶ್ರೀ ನಾರಾಯಣ ಗುರುಗಳ ಜಯಂತಿಯನ್ನು ಆಚರಿಸಲಾಯಿತು. ಕಾರ್ಯಕ್ರಮವನ್ನು ಎಸ್.ಎನ್.ಡಿ.ಪಿ ಕೊಡಗು ಯೂನಿಯನ್ ಅಧ್ಯಕ್ಷರಾದ ವಿ.ಕೆ.ಲೊಕೇಶ್ ಉದ್ಘಾಟಿಸಿ ಮಾತನಾಡಿ ಸಂಘಟನೆಯಿಂದ ಶಕ್ತರಾಗಲು ಹಾಗೂ ವಿಧ್ಯೆಯಿಂದ ಸ್ವತಂತ್ರ್ಯರಾಗುವಂತೆ ಗುರುಗಳು ಕರೆ ನೀಡಿದ್ದರು. ಪೋಷಕರು ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ಒದಗಿಸಬೇಕು. ಗುರುಗಳ ತತ್ವ ಸಿದ್ಧಾಂತವನ್ನು ಜೀವನದಲ್ಲಿ ಅಳವಡಿಸುವಂತೆ ಸಲಹೆ ನೀಡಿದರು. ಜಿಲ್ಲೆಯಲ್ಲಿ ಸುಮಾರು 50ಕ್ಕೂ ಹೆಚ್ಚು ಎಸ್.ಎನ್.ಡಿ.ಪಿ ಶಾಖೆಗಳಿದ್ದು, ಸಂಘಟನೆಯು ಜಿಲ್ಲಾಧ್ಯಂತ ಉತ್ತಮ ಕೆಲಸಗಳನ್ನು ಮಾಡುತ್ತಿದೆ ಎಂದರು. ಜಿ.ಪಂ ಮಾಜಿ ಸದಸ್ಯರಾದ ಮಹೇಶ್ ಗಣಪತಿ ಮಾತನಾಡಿ, ಕೇರಳದ ಜಾತಿ ವ್ಯವಸ್ಥೆಯ ವಿರುದ್ಧ ನಿಂತು, ಕೆಳ ವರ್ಗದ ಜನರಿಗೆ ದೇವಾಲಯವನ್ನು ನಿರ್ಮಿಸಿ, ಪೂಜೆಗೆ ಅನುವು ಮಾಡಿಕೊಟ್ಟಿದ್ದರು. ಗುರುಗಳ ಆದರ್ಶ ಅನುಕರಣೀಯ ಎಂದರು. ಎಸ್.ಎನ್.ಡಿ.ಪಿ ಹೆಗ್ಗಳ ಶಾಖೆಯ ಅಧ್ಯಕ್ಷರಾದ ರಮೇಶ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಎಸ್.ಎನ್.ಡಿ.ಪಿ ಯೂನಿಯನ್ ಕೌನ್ಸಿಲರ್ ಪಾಪಾಯ್ಯ ಹಾಜರಿದ್ದರು. ಕಾರ್ಯಕ್ರಮದಲ್ಲಿ ಎಸ್.ಎಸ್.ಎಲ್.ಸಿ ಹಾಗೂ ಪಿ.ಯು.ಸಿ ಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು. ಇದೇ ಸಂದರ್ಭ ಮಹಿಳೆಯರಿಗೆ, ಪುರುಷರಿಗೆ ಹಗ್ಗಜಗ್ಗಾಟ, ವಿವಿಧ ಸ್ಪರ್ಧೆಗಳು ನಡೆದು ವಿಜೇತರಿಗೆ ಬಹುಮಾನ ವಿತರಿಸಲಾಯಿತು.








