ನಾಪೋಕ್ಲು ಅ.6 NEWS DESK : ಗೋಣಿಕೊಪ್ಪಲು ಕಾವೇರಿ ಕಾಲೇಜು ಹಿಂದಿ ವಿಭಾಗದ ವತಿಯಿಂದ ಹಿಂದಿ ದಿವಸ್ ಆಚರಿಸಲಾಯಿತು. ಕಾಲೇಜು ಪ್ರಾಂಶುಪಾಲರಾದ ಡಾ. ಎಂ.ಬಿ.ಕಾವೇರಿಯಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮವನ್ನು ಪೊನ್ನಂಪೇಟೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬ್ರ್ಯಾಂಚ್ ಮ್ಯಾನೇಜರ್ ಶ್ರೀಕಾಂತ್ ಸಾಹು ಅವರು ಮುಖ್ಯ ಅಥಿತಿಯಾಗಿ ಭಾಗವಹಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ, ದಿನದ ಮಹತ್ವದ ಬಗ್ಗೆ ಮಾತನಾಡಿದರು. ಈ ಸಂದರ್ಭ ಕಾಲೇಜು ಉಪಪ್ರಾಂಶುಪಾಲರಾದ ಪ್ರೊ. ಎಂ.ಎಸ್.ಭಾರತಿ, ಹಿಂದಿ ವಿಭಾಗ ಮುಖ್ಯಸ್ಥರಾದ ಡಾ. ಪಿ.ಪಿ.ಸವಿತಾ, ಉಪನ್ಯಾಸಕರಾದ ಲೆಫ್ಟಿ ನೆಂಟ್. ಐ.ಡಿ.ಲೇಪಾಕ್ಷಿ ಇನ್ನಿತರರು ಉಪಸ್ಥಿತರಿದ್ದರು.
ವರದಿ : ದುಗ್ಗಳ ಸದಾನಂದ.











