ಮಡಿಕೇರಿ, ಅ.6 NEWS DESK : ಭಾರತ ಸ್ಕೌಟ್ ಮತ್ತು ಗೈಡ್ಸ್ ಸಂಸ್ಥೆಯಲ್ಲಿ ಉತ್ತಮ ಸೇವೆಯನ್ನು ಸಲ್ಲಿಸಿದ ಹಾಗೂ ಅತ್ಯುತ್ತಮ ಸೇವೆಗಾಗಿ ಭಾರತ ಸ್ಕೌಟ್ ಮತ್ತು ಗೈಡ್ಸ್ ವತಿಯಿಂದ ಬೆಂಗಳೂರಿನಲ್ಲಿ ಸಂಸ್ಥೆಯ ಜಿಲ್ಲಾ ಪ್ರಧಾನ ಆಯುಕ್ತರಾದ ಕೆ.ಟಿ.ಬೇಬಿ ಮ್ಯಾಥ್ಯೂ ಸೇರಿದಂತೆ ಐವರು
ಸನ್ಮಾನ ಸ್ವೀಕರಿಸಿದರು. ಬೆಂಗಳೂರಿನ ರಾಜ್ಯಭವನದಲ್ಲಿ ನಡೆದ ಸನ್ಮಾನ ಸಮಾರಂಭದಲ್ಲಿ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು
ರಾಜ್ಯದ ಸ್ಕೌಟ್ಸ್, ಗೈಡ್ಸ್ ಸಂಸ್ಥೆಯ ಜಿಲ್ಲಾ ಘಟಕಗಳ ಪ್ರಧಾನ ಆಯುಕ್ತರು, ಜಿಲ್ಲಾ ಕಾರ್ಯದರ್ಶಿ ಸೇರಿದಂತೆ ತಲಾ ಮೂವರು ಲೀಡರ್ ಟ್ರೈನರ್ಸ್ಗ್ ಗಳಿಗೆ ಸನ್ಮಾನಿಸಿ ಸನ್ಮಾನ ಪತ್ರ ವಿತರಿಸಿದರು. ಸ್ಕೌಟ್ಸ್, ಗೈಡ್ಸ್ ನ ರಾಜ್ಯ ಸಂಸ್ಥೆಯ ಮುಖ್ಯ ಆಯುಕ್ತ ಪಿ.ಜಿ.ಆರ್.ಸಿಂಧ್ಯ ಅವರು ನೆನಪಿನ ಕಾಣಿಕೆ ನೀಡಿದರು. ಜಿಲ್ಲೆಯ ಸ್ಕೌಟ್ಸ್, ಗೈಡ್ಸ್ ನ ಕೊಡಗು ಜಿಲ್ಲಾ ಸಂಸ್ಥೆಯ ಪ್ರಧಾನ ಆಯುಕ್ತ ಕೆ.ಟಿ.ಬೇಬಿಮ್ಯಾಥ್ಯೂ ಹಾಗೂ ಕಾರ್ಯದರ್ಶಿ ಎಂ.ಎಂ.ವಸಂತಿ ಸೇರಿದಂತೆ ಲೀಡರ್ ಟ್ರೈನರ್ಸ್ ಗಳಾದ ಜಿಲ್ಲಾ ಸ್ಕೌಟ್ಸ್ ಆಯುಕ್ತರಾದ ಜಿಮ್ಮಿ ಸಿಕ್ವೇರಾ, ತರಬೇತುದಾರರಾದ ಮೈಥಿಲಿ ರಾವ್ ಹಾಗೂ ಆಲಿಮಾ ಅವರಿಗೆ ರಾಜ್ಯಪಾಲರು ಬೆಂಗಳೂರಿನ ರಾಜಭವನದ ಗಾಜಿನ ಮನೆಯಲ್ಲಿ ಸನ್ಮಾನಿಸಿ, ಗೌರವಿಸಿದರು. ರಾಜ್ಯದ ಎಲ್ಲಾ ಜಿಲ್ಲೆಗಳ ಸ್ಕೌಟ್ಸ್, ಗೈಡ್ಸ್ ಸಂಸ್ಥೆಯ ಮುಖ್ಯ ಆಯುಕ್ತರು, ಜಿಲ್ಲಾ ಕಾರ್ಯದರ್ಶಿ ಹಾಗೂ ಲೀಡರ್ ಟ್ರೈನರ್ಸ್ ಗಳಿಗೆ ಈ ಸಂದರ್ಭದಲ್ಲಿ ಸನ್ಮಾನ ಮಾಡಲಾಯಿತು.











