
ಮಡಿಕೇರಿ, ಅ.8 NEWS DESK : 2025-26 ನೇ ಸಾಲಿನ ಎನ್.ಎಂ.ಎಂ.ಎಸ್.( ನ್ಯಾಷನಲ್ ಮೀನ್ಸ್ ಕಂ ಮೆರಿಟ್ ) ವಿದ್ಯಾರ್ಥಿ ವೇತನ ಪರೀಕ್ಷೆಗೆ ಹೆಸರು ನೋಂದಾಯಿಸಲು ಅ.15 ರ ವರೆಗೆ ದಿನಾಂಕವನ್ನು ವಿಸ್ತರಿಸಲಾಗಿದೆ. ಸರ್ಕಾರಿ ಮತ್ತು ಅನುದಾನಿತ ಪ್ರೌಢಶಾಲೆಗಳಲ್ಲಿ ಹಾಗೂ ಸ್ಥಳೀಯ ಸಂಸ್ಥೆಗಳಲ್ಲಿ ಪ್ರಸ್ತುತ ಎಂಟನೇ ತರಗತಿಯಲ್ಲಿ ಅಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳು ಎನ್.ಎಂ.ಎಂ.ಎಸ್ .ಪರೀಕ್ಷೆ ತೆಗೆದುಕೊಳ್ಳಲು ಅರ್ಹತೆ ಪಡೆದಿದ್ದು, ಶಾಲೆಯ ಮೂಲಕ ಆನ್ ಲೈನ್ ( oಟಿ ಟiಟಿe ) ಮೂಲಕ ಸೂಕ್ತ ಮಾಹಿತಿಯೊಂದಿಗೆ ಅರ್ಜಿ ಸಲ್ಲಿಸಬೇಕು. ಪರೀಕ್ಷೆ ತೆಗೆದುಕೊಳ್ಳುವ ವಿದ್ಯಾರ್ಥಿ- ಪೋಷಕರ ವಾರ್ಷಿಕ ಆದಾಯವು ಗರಿಷ್ಠ ರೂ.3.5 ಲಕ್ಷ ಇರಬೇಕು. ಅಂತಹ ವಿದ್ಯಾರ್ಥಿಗಳು ಮಾತ್ರ ವಿದ್ಯಾರ್ಥಿ ವೇತನಕ್ಕೆ ಅರ್ಹರಾಗಿರುತ್ತಾರೆ. ಜಿಲ್ಲೆಯಿಂದ ಹೆಚ್ಚಿನ ಮಕ್ಕಳು ಈ ಪರೀಕ್ಷೆಯನ್ನು ತೆಗೆದುಕೊಂಡು ವಿದ್ಯಾರ್ಥಿ ವೇತನದ ಸೌಲಭ್ಯ ಪಡೆದುಕೊಳ್ಳಲು ಶಾಲಾ ಶಿಕ್ಷಕರು ಹಾಗೂ ಪೋಷಕರು ವಿದ್ಯಾರ್ಥಿಗಳ ನೋಂದಣಿ ಮಾಡಿಸಬೇಕು ಎಂದು ಕೂಡಿಗೆಯ ಜಿಲ್ಲಾ ಶಿಕ್ಷಣ ಮತ್ತು ಸಂಸ್ಥೆ ( ಡಯಟ್ ) ಯ ಉಪ ನಿರ್ದೇಶಕ( ಅಭಿವೃದ್ಧಿ ) ರೂ ಆದ ಪ್ರಾಂಶುಪಾಲ ಡಿ.ಉದಯ್ ಕುಮಾರ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ. ಕಳೆದ ಸಾಲಿನಲ್ಲಿ 7 ನೇ ತರಗತಿಯಲ್ಲಿ ಶೇ.55 ಕ್ಕಿಂತ ಹೆಚ್ಚು ಅಂಕ ಪಡೆದ ಸಾಮಾನ್ಯ ಮತ್ತು ಹಿಂದುಳಿದ ವರ್ಗ( ಓ.ಬಿ.ಸಿ. ) ದ ವಿದ್ಯಾರ್ಥಿಗಳು ಹಾಗೂ ಶೇ.50 ಕ್ಕಿಂತ ಹೆಚ್ಚು ಅಂಕ ಪಡೆದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು ಈ ವಿದ್ಯಾರ್ಥಿ ವೇತನ ಪಡೆಯಲು ಅರ್ಹತೆ ಪಡೆದಿರುತ್ತಾರೆ ಎಂದು ತಿಳಿಸಲಾಗಿದೆ. ಎನ್.ಎಂ.ಎಂ.ಎಸ್.ಪರೀಕ್ಷೆಯು ಡಿಸೆಂಬರ್ ಮಾಲೆಯಲ್ಲಿ ನಡೆಯಲಿದೆ. ಈ ಪರೀಕ್ಷೆಯಲ್ಲಿ ಅರ್ಹತೆ ಪಡೆದ ವಿದ್ಯಾರ್ಥಿಗಳಿಗೆ 9 ನೇ ತರಗತಿಯಿಂದ 12 ನೇ ತರಗತಿಯವರೆಗೆ ಪ್ರತಿ ತಿಂಗಳು 1 ಸಾವಿರ ರೂಪಾಯಿ ವಿದ್ಯಾರ್ಥಿ ವೇತನ ನೀಡಲಾಗುವುದು ಎಂದು ಡಯಟ್ ಪ್ರಾಂಶುಪಾಲರು ಪ್ರಕಟನೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ ಸಂಪರ್ಕ ಸಂಖ್ಯೆಗಳು: ಹೆಚ್ಚಿನ ಮಾಹಿತಿಗಾಗಿ ಕೂಡಿಗೆ ಡಯಟ್ ಸಂಸ್ಥೆ ಹಾಗೂ ಎನ್.ಎಂ.ಎಂ. ಎಸ್.ಪರೀಕ್ಷೆಯ ಜಿಲ್ಲಾ ನೋಡಲ್ ಅಧಿಕಾರಿ : ಕೆ.ಎಸ್.ನಳಿನಾಕ್ಷಿ ( ಮೊ: 81399 56802 ) ಹಾಗೂ ತಾಲ್ಲೂಕು ನೋಡಲ್ ಅಧಿಕಾರಿಗಳಾದ ಜೆನೆಟ್ , ಮಡಿಕೇರಿ ( ಮೊ: 99863 67001), ಎಸ್.ಎಸ್.ಶಿವಕುಮಾರ್, ಸೋಮವಾರಪೇಟೆ ( ಮೊ: 94807 68886 ) ಹಾಗೂ ವಿಶಾಲಾಕ್ಷಿ, ವಿರಾಜಪೇಟೆ ( ಮೊ: 8197199941 ) ಅವರನ್ನು ಸಂಪರ್ಕಿಸಲು ತಿಳಿಸಿದೆ.







