
ನಾಪೋಕ್ಲು ಅ.8 NEWS DESK : ಮಂಗಳೂರು ವಿದ್ಯುತ್ ಸರಬರಾಜು ನಿಗಮದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಅವರನ್ನು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ ಅಕಾಡೆಮಿ ಪರವಾಗಿ ಸನ್ಮಾನಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ಕರ್ನಾಟಕ ಕಾರ್ಮಿಕರ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಟಿ.ಎಂ.ಶಹೀದ್, ಸುಳ್ಯ ನಗರ ಯೋಜನಾ ಪ್ರಾಧಿಕಾರ (ಸೂಡ) ಅಧ್ಯಕ್ಷ ಕೆ.ಎಂ.ಮುಸ್ತಫ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಅಧ್ಯಕ್ಷರೊಂದಿಗೆ ಸುಳ್ಯದ ಗ್ರಾಮೀಣ ಭಾಗದ ವಿದ್ಯುತ್ ಸಮಸ್ಯೆ ಮತ್ತು 110 ಕೆವಿ ವಿದ್ಯುತ್ ಕಾಮಗಾರಿಯ ಬಗ್ಗೆ ಚರ್ಚಿಸಲಾಯಿತು. ಇದಕ್ಕೆ ಸ್ಪಂದಿಸಿದ ಅಧ್ಯಕ್ಷರಾದ ಹರೀಶ್ ಕುಮಾರ್ ಶೀಘ್ರ ದಲ್ಲಿಯೇ ಸುಳ್ಯಕ್ಕೆ ಭೇಟಿ ನೀಡಿ ಸಭೆ ನಡೆಸುವುದಾಗಿ ತಿಳಿಸಿದರು.
ವರದಿ : ದುಗ್ಗಳ ಸದಾನಂದ.









