ಮಡಿಕೇರಿ ಅ.8 NEWS DESK : ಕೊಡಗು ಜಿಲ್ಲಾ ಪೊಲೀಸ್ ಘಟಕದ ವಿವಿಧ ಠಾಣೆಗಳಲ್ಲಿ ಸುದೀರ್ಘ ಸೇವೆ ಸಲ್ಲಿಸಿ ವಯೋ ನಿವೃತ್ತಿ ಹೊಂದಿದ ಸಹಾಯಕ ಪೊಲೀಸ್ ಉಪ ನಿರೀಕ್ಷಕ ಕೆ.ಇ.ಉತ್ತಯ್ಯ ಅವರನ್ನು ಜಿಲ್ಲಾ ಪೊಲೀಸ್ ಘಟಕದ ಪರವಾಗಿ ಆತ್ಮೀಯವಾಗಿ ಸನ್ಮಾನಿಸಿ ಬೀಳ್ಕೊಡಲಾಯಿತು. ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ನಿವೃತ್ತರನ್ನು ಸನ್ಮಾನಿಸಿ ನಿವೃತ್ತ ಜೀವನ ಶುಭಪ್ರದವಾಗಿರಲೆಂದು ಹಾರೈಸಿದರು.











