ಮುಂಬೈ ಅ.8 NEWS DESK : ಪ್ರಧಾನಿ ನರೇಂದ್ರ ಮೋದಿ 19,650 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ನವಿ ಮುಂಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಮೊದಲ ಹಂತವನ್ನು ಉದ್ಘಾಟಿಸಿದರು. 1,160 ಹೆಕ್ಟೇರ್ ಪ್ರದೇಶದಲ್ಲಿ ಹರಡಿರುವ ಈ ಹೊಸ ವಿಮಾನ ನಿಲ್ದಾಣವು ಭಾರತದ ವಾಯುಯಾನ ಸಾಮರ್ಥ್ಯವನ್ನು ಗಮನಾರ್ಹವಾಗಿ ಹೆಚ್ಚಿಸಲು ಮತ್ತು ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲಿನ ಭಾರೀ ಸಂಚಾರ ಹೊರೆಯನ್ನು ಕಡಿಮೆ ಮಾಡಲು ಸಜ್ಜಾಗಿದೆ. ಪ್ರಧಾನಿ ಮೋದಿ ಅವರು ನವಿ ಮುಂಬೈ ವಿಮಾನ ನಿಲ್ದಾಣ ಉದ್ಘಾಟನೆಗೆ ಮುನ್ನ, ವಿಮಾನ ನಿಲ್ದಾಣದ ಒಳಗೆ ಒಂದು ಸುತ್ತು ಓಡಾಡಿ, ಅತ್ಯಾಧುನಿಕ ಸೌಲಭ್ಯಗಳನ್ನು ಪರಿಶೀಲಿಸಿದರು. ಈ ವೇಳೆ ಕೇಂದ್ರ ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು, ಕೇಂದ್ರ ಸಚಿವ ಮುರಳೀಧರ್ ಮೊಹೋಲ್, ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್, ರಾಜ್ಯಪಾಲ ಆಚಾರ್ಯ ದೇವವ್ರತ್, ಉಪಮುಖ್ಯಮಂತ್ರಿಗಳಾದ ಏಕನಾಥ್ ಶಿಂಧೆ ಮತ್ತು ಅಜಿತ್ ಪವಾರ್ ಉಪಸ್ಥಿತರಿದ್ದರು.











