Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಕಾರ್ಕಳ : ಕ್ರಿಯೇಟಿವ್ ಕಾಲೇಜಿನ ಎನ್.ಎಸ್.ಎಸ್ ಘಟಕದ ವತಿಯಿಂದ ಪ್ರೇಕ್ಷಣೀಯ ಸ್ಥಳಗಳ ಸ್ವಚ್ಛತಾ ಕಾರ್ಯಕ್ರಮ
ಇತ್ತೀಚಿನ ಸುದ್ದಿಗಳು ಕರ್ನಾಟಕ

ಕಾರ್ಕಳ : ಕ್ರಿಯೇಟಿವ್ ಕಾಲೇಜಿನ ಎನ್.ಎಸ್.ಎಸ್ ಘಟಕದ ವತಿಯಿಂದ ಪ್ರೇಕ್ಷಣೀಯ ಸ್ಥಳಗಳ ಸ್ವಚ್ಛತಾ ಕಾರ್ಯಕ್ರಮ

ಅಕ್ಟೋಬರ್ 9, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
default
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಕಾರ್ಕಳ ಅ.9 NEWS DESK : ಕಾರ್ಕಳದ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನ ಎನ್.ಎಸ್.ಎಸ್ ಘಟಕದ ವಿದ್ಯಾರ್ಥಿಗಳು ಹಾಗೂ ಸ್ವಯಂ ಸೇವಕರು ಪರಿಸರ ಸಂರಕ್ಷಣೆ ಮತ್ತು ಸಾರ್ವಜನಿಕ ಸ್ಥಳಗಳ ಸ್ವಚ್ಛತೆಯ ಸಂದೇಶವನ್ನು ಸಾರುವ ಉದ್ದೇಶದಿಂದ ಕಾರ್ಕಳದ ಆಸುಪಾಸಿನಲ್ಲಿರುವ ಅನೇಕ ಪ್ರೇಕ್ಷಣೀಯ ಸ್ಥಳಗಳಲ್ಲಿ ಸ್ವಚ್ಛತಾ ಕಾರ್ಯಕ್ರಮವನ್ನು ನಡೆಸಿದರು. ಪ್ಲಾಸ್ಟಿಕ್ ಕಸದ ಸಂಗ್ರಹ, ಕಸ ವಿಂಗಡಣೆ ಹಾಗೂ ಪರಿಸರ ಶುದ್ಧೀಕರಣದ ಜೊತೆಗೆ ಸ್ಥಳೀಯ ಜನರಿಗೆ ಸ್ವಚ್ಛತೆಯ ಮಹತ್ವವನ್ನು ಬೋಧಿಸುವ ಜಾಗೃತಿ ಅಭಿಯಾನವೂ ನಡೆಯಿತು. ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿದ ಸ್ವಚ್ಛ ಕಾರ್ಕಳ ನಗರದ ಸ್ವಚ್ಛತಾ ರಾಯಭಾರಿಯಾಗಿರುವ ಫೆಲಿಕ್ಸ್ ಜೋಸೆಫ್ ವಾಜ್ ರವರು ಶುಭ ಹಾರೈಸಿದರು. ಕಾರ್ಕಳ ಪುರಸಭಾ ಅಧ್ಯಕ್ಷರಾದ ಯೋಗೀಶ್ ದೇವಾಡಿಗ ಮಾತನಾಡಿ, ಸ್ವಚ್ಛತೆ ಎನ್ನುವುದು ಕೇವಲ ದೈಹಿಕ ಶುದ್ಧತೆಗೆ ಸೀಮಿತವಲ್ಲ. ನಮ್ಮ ಮನಸ್ಸಿನ, ಸಮಾಜದ ಮತ್ತು ಸಂಸ್ಕೃತಿಯ ಶುದ್ಧತೆಯ ಪ್ರತೀಕವೂ ಹೌದು. ಯುವಕರು ಇಂತಹ ಚಟುವಟಿಕೆಗಳ ಮೂಲಕ ಸಾಮಾಜಿಕ ಬದಲಾವಣೆಗೆ ಪ್ರೇರಣೆಯಾಗುತ್ತಾರೆ ಎಂದು ಹೇಳಿದರು. ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಸಹ ಸಂಸ್ಥಾಪಕರಾದ ಡಾ. ಬಿ. ಗಣನಾಥ ಶೆಟ್ಟಿ ರವರು ಮಾತನಾಡಿ ಸ್ವಚ್ಛತೆಯು ಕೇವಲ ಕಾರ್ಯವಲ್ಲ. ಅದು ಜೀವನಶೈಲಿ ಆಗಬೇಕು. ಯುವಕರು ಇಂತಹ ಸಾಮಾಜಿಕ ಜವಾಬ್ದಾರಿಗಳಲ್ಲಿ ತೊಡಗಿದಾಗ ಸಮಾಜದ ಬೆಳವಣಿಗೆ ಖಚಿತ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಸಂಸ್ಥೆಯ ಸಂಸ್ಥಾಪಕರಲ್ಲಿ ಓರ್ವರಾದ ಅಶ್ವತ್ ಎಸ್.ಎಲ್, ಎನ್.ಎಸ್.ಎಸ್ ಶಿಬಿರಾಧಿಕಾರಿ ಉಮೇಶ್, ಉಪನ್ಯಾಸಕ – ಉಪನ್ಯಾಸಕೇತರ ವರ್ಗದವರು, ಸುಮಾರು 150ಕ್ಕಿಂತಲೂ ಹೆಚ್ಚು ವಿದ್ಯಾರ್ಥಿ – ವಿದ್ಯಾರ್ಥಿನಿಯರು ಪಾಲ್ಗೊಂಡು, ಸಾರ್ವಜನಿಕರಲ್ಲಿ ಸ್ವಚ್ಛತೆ ಮತ್ತು ಪರಿಸರ ಸಂರಕ್ಷಣೆಯ ಜಾಗೃತಿಯನ್ನು ಮೂಡಿಸಿದರು. ಈ ಸ್ವಚ್ಛತಾ ಆಂದೋಲನಕ್ಕೆ ಕಾರ್ಕಳ ಪುರಸಭೆಯ ಸಂಪೂರ್ಣ ಸಹಕಾರ ದೊರಕಿತು. ಸಭಾ ಕಾರ್ಯಕ್ರಮವನ್ನು ಜೀವಶಾಸ್ತ್ರ ಉಪನ್ಯಾಸಕರಾದ ಲೋಹಿತ್ ಎಸ್.ಕೆ ರವರು ನಿರೂಪಿಸಿ ವಂದಿಸಿದರು. ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿದ್ದು, ಭಾಗವಹಿಸಿದ ಎಲ್ಲರನ್ನು ಕಾಲೇಜು ಆಡಳಿತ ಮಂಡಳಿ ಅಭಿನಂದಿಸಿದೆ.

default

Follow us Follow us
Share. WhatsApp Facebook Twitter Email Telegram Copy Link

Related Posts

ಕಡಗದಾಳಿನಲ್ಲಿ ಎನ್‌ಎಸ್‌ಎಸ್ ಶಿಬಿರದ ಸಮಾರೋಪ : ಸಮಾಜದ ಅಭಿವೃದ್ಧಿಗೆ ವಿದ್ಯಾರ್ಥಿಗಳು ಕೊಡುಗೆ ನೀಡಲಿ : ಮೇಜರ್ ಪ್ರೊ. ರಾಘವ ಬಿ.

ಅಕ್ಟೋಬರ್ 15, 2026

ಅ.17 ರಂದು ಉಸ್ತುವಾರಿ ಸಚಿವ ಪಿ.ಎಂ.ನರೇಂದ್ರ ಸ್ವಾಮಿ ಕೊಡಗಿಗೆ ಭೇಟಿ

ಅಕ್ಟೋಬರ್ 15, 2026

ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5860 ಪ್ರಕರಣಗಳು ಇತ್ಯರ್ಥ

ಅಕ್ಟೋಬರ್ 15, 2026

ಅ.17 ರಂದು ಉಸ್ತುವಾರಿ ಸಚಿವ ಪಿ.ಎಂ.ನರೇಂದ್ರ ಸ್ವಾಮಿ ಕೊಡಗಿಗೆ ಭೇಟಿ

ಅಕ್ಟೋಬರ್ 15, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಅ.15 NEWS DESK  : ಕೃಷಿ ಹಾಗೂ ಉಸ್ತುವಾರಿ ಸಚಿವರಾದ ಪಿ.ಎಂ.ನರೇಂದ್ರ ಸ್ವಾಮಿ ಅವರು ಅಕ್ಟೋಬರ್, 17 ರಂದು…

ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5860 ಪ್ರಕರಣಗಳು ಇತ್ಯರ್ಥ

ಅಕ್ಟೋಬರ್ 15, 2026

ಅ.16 ರಂದು ಮಕ್ಕಳ ದಸರಾ ಸಂಭ್ರಮ: ಮಕ್ಕಳಿಂದ ವೈವಿದ್ಯಮಯ ಸ್ಪರ್ಧೆಗಳು

ಅಕ್ಟೋಬರ್ 15, 2026

ಗೋಣಿಕೊಪ್ಪಲು : ಅ.16 ರಂದು ವಿದ್ಯುತ್ ವ್ಯತ್ಯಯ

ಅಕ್ಟೋಬರ್ 15, 2026

ಮಡಿಕೇರಿ ನಗರ ದಸರಾ ಬಹುಭಾಷಾ ಕವಿಗೋಷ್ಠಿ : ಭಾವನೆ ಕಟ್ಟಿಕೊಡುವಲ್ಲಿ ಕಥೆ, ಕವನ, ಕವಿತೆ ಸಹಕಾರಿ : ಡಾ.ಎನ್.ಕೆ.ಲೋಲಾಕ್ಷಿ

ಅಕ್ಟೋಬರ್ 15, 2026

ಕುಶಾಲನಗರದಲ್ಲಿ ಮಾಜಿ ಸೈನಿಕರ 84ನೇ ಇಎಂಇ ಕಾರ್ಪ್ಸ್ ದಿನಾಚರಣೆ ಸಂಭ್ರಮ

ಅಕ್ಟೋಬರ್ 15, 2026

ಕೊಡವಲ್ಯಾಂಡ್ ಸ್ವಾಯತ್ತತೆಗಾಗಿ 100 ವರ್ಷಗಳಾದರೂ ಹೋರಾಟ ನಿಲ್ಲದು: ಎನ್.ಯು. ನಾಚಪ್ಪ

ಅಕ್ಟೋಬರ್ 15, 2026

ಗೋಣಿಕೊಪ್ಪಲು ದಸರಾ ಜನೋತ್ಸವದಲ್ಲಿ ಅ.16ರಂದು ರಾಜ್ಯಮಟ್ಟದ ಬಹುಭಾಷಾ ಕವಿಗೋಷ್ಠಿ; 118 ಕವಿಗಳಿಂದ ಕವನ ವಾಚನ; ಜೆನ್ ಜಿ ಹಾಗೂ ಮಕ್ಕಳ ಕವಿಗೋಷ್ಠಿ ವಿಶೇಷ ಆಕರ್ಷಣೆ

ಅಕ್ಟೋಬರ್ 15, 2026

ಕೊಡಗಿನಲ್ಲಿ ಪ್ರತಿಭಟನೆಯ ಹೆಸರಿನಲ್ಲಿ ಅಶಾಂತಿಗೆ ಅವಕಾಶ ನೀಡಬಾರದು: ರಾಕೇಶ್ ದೇವಯ್ಯ ; ಎಸ್‌ಐಆರ್ ಪರಿಷ್ಕರಣೆ ವಿರುದ್ಧದ ಪ್ರತಿಭಟನೆಗೆ ಶಾಸಕರ ಬೆಂಬಲವಿದೆಯೇ ಎಂಬುದನ್ನು ಸ್ಪಷ್ಟಪಡಿಸಲು ಆಗ್ರಹ

ಅಕ್ಟೋಬರ್ 15, 2026

ಕಡಗದಾಳು ಎನ್‌ಎಸ್‌ಎಸ್ ಶಿಬಿರದ ಸಮಾರೋಪ ಸಮಾರಂಭ

ಅಕ್ಟೋಬರ್ 15, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.