
ಮೈಸೂರು ಅ.9 NEWS DESK : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಆಯುಕ್ತ ಪಿ.ಜಿ.ಆರ್.ಸಿಂಧಿಯಾ ಅವರ 77ನೇ ಹುಟ್ಟುಹಬ್ಬದ ಆಚರಣೆಯ ಅಂಗವಾಗಿ ಅ.11 ರಂದು ವಿವಿಧ ಕ್ಷೇತ್ರಗಳ ನಾಲ್ವರು ಸಾಧಕರಿಗೆ ‘ಧ್ವನಿ ಕೊಟ್ಟ ಧಣಿ’ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು. ಅಂದು ಬೆಳಿಗ್ಗೆ 10.45 ಕ್ಕೆ ನಗರದ ಉರ್ಸು ಜಾಗೃತಿ ಅಕಾಡೆಮಿ ಚಾರಿಟೇಬಲ್ ಟ್ರಸ್ಟ್ ಆಶ್ರಯದಲ್ಲಿ ಜೆಎಲ್‌ಬಿ ರಸ್ತೆಯಲ್ಲಿರುವ ಇನ್‌ಸ್ಟಿಟ್ಯೂಷನ್ ಆಫ್ ಎಂಜಿನಿಯರ್ಸ್‌ನಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಹಾಸನದ ಹೆಚ್ಚುವರಿ ಜಿಲ್ಲಾಧಿಕಾರಿ ವಿ.ಮಂಜುನಾಥ್, ಮೈಸೂರು ವಿಜಯ ಕರ್ನಾಟಕ ಐತಿಚಂಡ ಸಂಪಾದಕರಾದ ರಮೇಶ್ ಉತ್ತಪ್ಪ, ವೈದ್ಯವರ್ತ ಪ್ರಕಾಶನದ ನಿರ್ದೇಶಕ ಶ್ರೀನಿವಾಸ ಬಹದ್ದೂರ್, ಮಂಗಳೂರಿನ ಲಿಮೆರಿಕ್ಸ್ ಲೇಖಕಿ ಮತ್ತು ಸಾಹಿತಿ ಜಾಹ್ನವಿ ಸೀತಾಲಕ್ಷ್ಮಿ ವರ್ಮಾ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಸಾನ್ನಿಧ್ಯದಲ್ಲಿ ಎಂಎಲ್‍ಸಿ ಡಾ.ಡಿ.ತಿಮ್ಮಯ್ಯ ಉದ್ಘಾಟಿಸಲಿದ್ದು, ಶಾಸಕ ತನ್ವೀರ್ ಸೇಠ್ ಹಾಗೂ ಚುಟುಕು ಯುಗಾಚಾರ್ಯ ಡಾ.ಎಂ.ಜಿ.ಆರ್. ಉರ್ಸ್ ಅಭಿನಂದನಾ ಭಾಷಣ ಮಾಡಲಿದ್ದಾರೆ.








