Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕಾವೇರಿ ಶಾಲೆಯಲ್ಲಿ ಸಾಂಪ್ರದಾಯಿಕ ಉಡುಗೆಯಲ್ಲಿ ಪೋಷಕರ ಸಂಭ್ರಮ*
  • *ಪ್ರತಿಭಾ ಕಾರಂಜಿ :ರಾಜ್ಯಮಟ್ಟದಲ್ಲಿ ನಾಲ್ಕನೇ ಸ್ಥಾನ ಗಳಿಸಿದ ಕಾವೇರಿ ಶಾಲೆ ವಿದ್ಯಾರ್ಥಿಗಳು*
  • ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?
  • *ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*
  • ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!
  • *ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*
  • *ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*
  • *ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*
  • *ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*
  • *ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಮಡಿಕೇರಿ ರೋಟರಿ ವುಡ್ಸ್ ನಿಂದ ಪೌರಸಿಬ್ಬಂದಿಗಳಿಗೆ ಸನ್ಮಾನ :  ಸಿಬ್ಬಂದಿಗಳ ಕೊರತೆಯಲ್ಲಿಯೂ ನಗರ ಸ್ವಚ್ಚತೆಗೆ ಆದ್ಯತೆ : ಪೌರಾಯುಕ್ತ ಹೆಚ್.ಆರ್.ರಮೇಶ್*
ಇತ್ತೀಚಿನ ಸುದ್ದಿಗಳು

*ಮಡಿಕೇರಿ ರೋಟರಿ ವುಡ್ಸ್ ನಿಂದ ಪೌರಸಿಬ್ಬಂದಿಗಳಿಗೆ ಸನ್ಮಾನ :  ಸಿಬ್ಬಂದಿಗಳ ಕೊರತೆಯಲ್ಲಿಯೂ ನಗರ ಸ್ವಚ್ಚತೆಗೆ ಆದ್ಯತೆ : ಪೌರಾಯುಕ್ತ ಹೆಚ್.ಆರ್.ರಮೇಶ್*

October 9, 20252 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ಅ.9 NEWS DESK : ನಗರಸಭೆಯಲ್ಲಿ ಸಿಬ್ಬಂದಿಗಳ ತೀವ್ರ ಕೊರತೆಯ ನಡುವೇ ಪೌರಸಿಬ್ಬಂದಿಗಳ ಮೂಲಕ ನಗರ ಸ್ವಚ್ಚತೆಗೆ ಆದ್ಯತೆ ನೀಡಲಾಗಿದೆ ಎಂದು ಮಡಿಕೇರಿ ನಗರಸಭೆಯ ಪೌರಾಯುಕ್ತ ಹೆಚ್.ಆರ್.ರಮೇಶ್ ಹೇಳಿದ್ದಾರೆ. ಮಡಿಕೇರಿ ರೋಟರಿ ಸಭಾಂಗಣದಲ್ಲಿ ರೋಟರಿ ವುಡ್ಸ್ ವತಿಯಿಂದ ಆಯೋಜಿತ ಕಾಯ೯ಕ್ರಮದಲ್ಲಿ ಪೌರಸಿಬ್ಬಂದಿಗಳಾದ ಅಹಮ್ಮದ್ ಕಬೀರ್, ಎಚ್.ಆರ್.ಶಂಕರ್, ಈರಪ್ಪ ಶೆಟ್ಟಿ, ವಸಂತ ಕುಮಾರ್, ಬಿ.ಟಿ. ಜಗದೀಶ್ ಅವರನ್ನು ಸನ್ಮಾನಿಸಿ ಅವರು ಮಾತನಾಡಿದರು. ಕಳೆದ ಕೆಲವು ವಷ೯ಗಳಿಗೆ ಹೋಲಿಸಿದರೆ ಮಡಿಕೇರಿಯಲ್ಲಿ ಸ್ವಚ್ಚತೆ ಸಂಬಂಧಿತ ಜನರಲ್ಲಿ ಹೆಚ್ಚು ಅರಿವು ಮೂಡಿದೆ. ಪೌರಸಿಬ್ಬಂದಿಗಳು ನಗರದ ತ್ಯಾಜ್ಯ ವಿಲೇವಾರಿ ಮಾಡುವ ಪೌರಸಿಬ್ಬಂದಿಗಳ ಆರೋಗ್ಯದ ಬಗ್ಗೆಯೂ ನಗರಸಭೆ ಹೆಚ್ಚಿನ ಕಾಳಜಿ ವಹಿಸಿದೆ. ಪ್ರತೀ ವಷ೯ ಅತ್ಯುತ್ತಮ ರೀತಿಯಲ್ಲಿ ಪೌರಸಿಬ್ಬಂದಿಗಳ ಆರೋಗ್ಯ ತಪಾಸಣೆ ಕೈಗೊಳ್ಳಲಾಗುತ್ತಿದೆ. ಅಗತ್ಯವುಳ್ಳವರಿಗೆ ಉತ್ತಮ ಗುಣಮಟ್ಟದ ಚಿಕಿತ್ಸೆಯನ್ನೂ ನೀಡಲಾಗುತ್ತಿದೆ ಎಂದೂ ರಮೇಶ್ ನುಡಿದರು. ಈಗಾಗಲೇ ಮಡಿಕೇರಿಯ ರಾಜರಾಜೇಶ್ವರಿ ಬಡಾವಣೆಯಲ್ಲಿ ಪೌರಸಿಬ್ಬಂದಿಗಳಿಗೆ 12 ಮನೆಗಳನ್ನು ನಿಮಿ೯ಸಿ ಉಚಿತವಾಗಿ ವಿತರಿಸುವ ಕಾಯ೯ವೂ ಪ್ರಗತಿಯಲ್ಲಿದೆ ಎಂದೂ ರಮೇಶ್ ಹೇಳಿದರು.700 ಜನಸಂಖ್ಕೆಗೊಬ್ಬರಂತೆ ಓವ೯ ಪೌರಸಿಬ್ಬಂದಿಗಳಿರಬೇಕು. ಆದರೆ ಈ ಪ್ರಮಾಣವೂ ಮಡಿಕೇರಿಗೆ ಸಾಕಾಗುವುದಿಲ್ಲ ಎನ್ನುವಂತಾಗಿದ ಎಂದೂ ಅವರು ಹೇಳಿದರು. ರೋಟರಿ ಜಿಲ್ಲಾ ಪಬ್ಲಿಕ್ ಇಮೇಜ್ ಸಮಿತಿ ಉಪಾಧ್ಯಕ್ಷ ಅನಿಲ್ ಹೆಚ್.ಟಿ. ಮಾತನಾಡಿ, ದಸರಾ ಸಂದಭ೯ ಪೌರಸಿಬ್ಬಂದಿಗಳು ಮಡಿಕೇರಿಯನ್ನು ಮಡಿಯಾದ ಕೇರಿಯನ್ನಾಗಿಸುವಲ್ಲಿ ವಹಿಸಿದ ಶ್ರಮ ಶ್ಗಾಘನೀಯ, ಪೌರಸಿಬ್ಬಂದಿಗಳ ಅವಿರತ ಶ್ರಮದಿಂದಾಗಿಯೇ ಮಡಿಕೇರಿ ತನ್ನ ಸೌಂದಯ೯ ಕಾಪಾಡಿಕೊಳ್ಳಲು ಸಾಧ್ಯವಾಗಿದೆ ಎಂದು ಶ್ಲಾಘಿಸಿದರು. ಪೌರಸಿಬ್ಬಂದಿಗಳನ್ನು ಕಸ ತೆಗೆಯುವ ವ್ಯಕ್ತಿಗಳಾಗಿ ಪರಿಗಣಿಸದೇ ನಮ್ಮ ಮನೆ, ಅಂಗಡಿಗಳಲ್ಲಿರುವ ಕಸವನ್ನು ವಿಲೇವಾರಿ ಮಾಡಿ, ಸಮಾಜವನ್ನು ಸ್ವಚ್ಚವಾಗಿರಿಸುವ ಕಾಯಕಜೀವಿಗಳೆಂದು ಮಾನವೀಯತೆಯಿಂದ ಪರಿಗಣಿಸುವಂತೆಯೂ ಅನಿಲ್ ಕೋರಿದರು. ಪೌರಸಿಬ್ಬಂದಿಗಳಿಗೆ ಅಗತ್ಯವಾದ ನಿವೇಶನ, ವಸತಿ ನಿಮಾ೯ಣದತ್ತಲೂ ಸ್ಥಳೀಯ ಸಂಸ್ಥೆಗಳು ಕಾಯ೯ಪ್ರವೖತ್ತವಾಗಬೇಕೆಂದು ಹೇಳಿದ ಅನಿಲ್ ಹೆಚ್,ಟಿ. ಪೌರಸಿಬ್ಬಂದಿಗಳು, ಕುಟುಂಬ ವಗ೯ದವರಿಗೆ ರೋಟರಿ ಸಂಸ್ಥೆಯ ಮೂಲಕ ಆರೋಗ್ಯ ಶಿಬಿರ ಆಯೋಜಿತವಾಗಬೇಕೆಂದು ಸಲಹೆ ನೀಡಿದರು. ರೋಟರಿ ವುಡ್ಸ್ ಸಲಹೆಗಾರ ಬಿ.ಜಿ. ಅನಂತಶಯನ ಮಾತನಾಡಿ, ಭೂಮಿತಾಯಿಯ ಮಡಿಲಲ್ಲಿ ತ್ಯಾಜ್ಯ ಎಸೆಯುವ ಜನರು ಹೆಚ್ಚಾಗುತ್ತಿರುವ ಸಂದಭ೯ದಲ್ಲಿ ಅಂಥ ತ್ಯಾಜ್ಯಗಳನ್ನು ವಿಲೇವಾರಿ ಮಾಡುವ ಮೂಲಕ ನಿಸಗ೯ ಮಾತೆಯನ್ನು ಸ್ವಚ್ಚಗೊಳಿಸುವ ಅಮೂಲ್ಯ ಕಾಯಕದಲ್ಲಿ ಪೌರಸಿಬ್ಬಂದಿಗಳು ತೊಡಗಿಸಿಕೊಂಡಿದ್ದಾರೆ ಎಂದು ಹೆಮ್ಮೆ ವ್ಯಕ್ತಪಡಿಸಿದರು. ಎಲ್ಲಿ ಶುದ್ದ ಹಸ್ತಗಳಿರುತ್ತವೆಯೋ ಅಂಥ ಸಮಾಜ ಸುಂದರವಾಗಿರುತ್ತದೆ. ಆ ಶುದ್ದ ಹಸ್ತವನ್ನು ಪೌರಸಿಬ್ಬಂದಿಗಳಲ್ಲಿ ಕಾಣಬಹುದಾಗಿದ ಎಂದೂ ಅನಂತಶಯನ ಹೇಳಿದರು. ರೋಟರಿ ವುಡ್ಸ್ ಅಧ್ಯಕ್ಷ ಕಿರಣ್ ಕುಂದರ್, ಮಡಿಕೇರಿಯ ಪೌರಸೇವಾ ಸಿಬ್ಬಂದಿಗಳ ಕಾಯ೯ನಿಷ್ಟೆಯ ಬಗ್ಗೆ ಪ್ರಶಂಶಿಸಿದರು. ನಗರದ ಅನೇಕರು ಏಳುವ ಮೊದಲೇ ನಗರದ ಬೀದಿಗಳು, ಮನೆಯ ಮುಂದಿನ ಪರಿಸರ ಸ್ವಚ್ಚಗೊಳ್ಳುವಲ್ಲಿ ಪೌರಸಿಬ್ಬಂದಿಗಳ ಪಾತ್ರ ಸದಾ ಮಹತ್ವದ್ದಾಗಿದೆ ಎಂದೂ ಕಿರಣ್ ಶ್ಲಾಘಿಸಿದರು. ರೋಟರಿ ವಲಯ 6 ರ ಸಹಾಯಕ ಗವನ೯ರ್ ಧಿಲನ್ ಚಂಗಪ್ಪ ಮಾತನಾಡಿ, ತ್ಯಾಜ್ಯ ವಿಲೇವಾರಿ ಮಾಡುವ ಸಂಬಂಧ ವಿದ್ಯಾಥಿ೯ಗಳಲ್ಲಿ ಸೂಕ್ತ ಮಾಹಿತಿ ನೀಡುವ ಜಾಗ್ರತಿ ಕಾಯ೯ಕ್ರಮಗಳನ್ನು ಸಾಮಾಜಿಕ ಸಂಘಸಂಸ್ಥೆಗಳು ಹೆಚ್ಚು ಮಾಡಬೇಕೆಂದು ಕರೆ ನೀಡಿದರು. ವಿದ್ಯಾಥಿ೯ಗಳಲ್ಲಿ ಪರಿಸರ ಸ್ವಚ್ಚತೆಯ ಜಾಗ್ರತಿ ಹೆಚ್ಚಾದಲ್ಲಿ ದೊಡ್ಡವರೂ ಅದರಿದ ಪಾಠ ಕಲಿಯಬಹುದಾಗಿದೆ ಎಂದೂ ಧಿಲನ್ ಅಭಿಪ್ರಾಯಪಟ್ಟರು. ಮಡಿಕೇರಿ, ಗೋಣಿಕೊಪ್ಪ ದಸರಾದ ಯಶಸ್ವಿಗೆ ಮೂಲ ಕಾರಣಕತ೯ರೇ ಪೌರಸಿಬ್ಬಂದಿಗಳಾಗಿದ್ದಾರೆ ಎಂದೂ ಗೋಣಿಕೊಪ್ಪ ದಸರಾ ಸಾಂಸ್ಕೖತಿಕ ಸಮಿತಿ ಅಧ್ಯಕ್ಷ ಧಿಲನ್ ಚಂಗಪ್ಪ ಶ್ಲಾಘಿಸಿದರು. ವಲಯ ಸೇನಾನಿ ಕಾಯ೯ಪ್ಪ ಮಾತನಾಡಿ. ಸಕ್ರಿಯ ಸೇವೆಯ ಮೂಲಕ ಸಮಾಜದ ಸ್ವಚ್ಚತೆಗೆ ಕಾರಣರಾಗುತ್ತಿರುವ ಪೌರಸಿಬ್ಬಂದಿಗಳನ್ನು ಗುರುತಿಸಿ ಸನ್ಮಾನಿಸುವ ಕಾಯ೯ ಮೆಚ್ಚುಗೆ ಪಡೆಯವಂಥದ್ದು ಎಂದರು. ರೋಟರಿ ವುಡ್ಸ್ ಕಾಯ೯ದಶಿ೯ ಪ್ರಮೀಳಾ ಶೆಟ್ಟಿ ವಂದಿಸಿದ ಕಾಯ೯ಕ್ರಮದಲ್ಲಿ ವುಡ್ಸ್ ಸಂಸ್ಥೆಯ ಸಲಹೆಗಾರ ಮೋಹನ್ ಪ್ರಭು, ರೋಟರಿ ಮಿಸ್ಟಿ ಹಿಲ್ಸ್ ಅಧ್ಯಕ್ಷ ರತ್ನಾಕರ್ ರೈ, ಕಾಯ೯ದಶಿ೯ ಬಿ.ಕೆ ಕಾಯ೯ಪ್ಪ, ಹಾಜರಿದ್ದರು. ವಸಂತ್ ಕುಮಾರ್ ನಿರೂಪಿಸಿದರು.

Share. Facebook Twitter Pinterest LinkedIn Tumblr Email WhatsApp
Previous Article*ನಿಧನ ಸುದ್ದಿ*
Next Article *ಪುತ್ತೂರು ವಿವೇಕಾನಂದ ಎಂಜಿನಿಯರಿಂಗ್ ಕಾಲೇಜಿನಲ್ಲಿ ಹಾಕಥಾನ್ ಸ್ಪರ್ಧೆ ಕೋಡ್ ಮಂಥನ್-25 ಉದ್ಘಾಟನೆ : ವಿದ್ಯಾರ್ಥಿಗಳು ಕೇವಲ ಪಠ್ಯಕ್ರಮಕ್ಕಷ್ಟೇ ಸೀಮಿತವಾಗಬಾರದು : ಟಿ.ಎಸ್.ಸುಬ್ರಮಣ್ಯ ಭಟ್*

Related Posts

*ಕಾವೇರಿ ಶಾಲೆಯಲ್ಲಿ ಸಾಂಪ್ರದಾಯಿಕ ಉಡುಗೆಯಲ್ಲಿ ಪೋಷಕರ ಸಂಭ್ರಮ*

February 12, 2026

*ಪ್ರತಿಭಾ ಕಾರಂಜಿ :ರಾಜ್ಯಮಟ್ಟದಲ್ಲಿ ನಾಲ್ಕನೇ ಸ್ಥಾನ ಗಳಿಸಿದ ಕಾವೇರಿ ಶಾಲೆ ವಿದ್ಯಾರ್ಥಿಗಳು*

February 12, 2026

ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?

February 11, 2026

*ಪ್ರತಿಭಾ ಕಾರಂಜಿ :ರಾಜ್ಯಮಟ್ಟದಲ್ಲಿ ನಾಲ್ಕನೇ ಸ್ಥಾನ ಗಳಿಸಿದ ಕಾವೇರಿ ಶಾಲೆ ವಿದ್ಯಾರ್ಥಿಗಳು*

February 12, 2026

ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ನಡೆದ ರಾಜ್ಯ ಮಟ್ಟದ ಪ್ರತಿಭಾ ಕಾರಂಜಿ ಮತ್ತು k ಕಲೋತ್ಸವ…

ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?

February 11, 2026

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!

February 11, 2026

*ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*

February 11, 2026

*ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*

February 11, 2026

*ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*

February 11, 2026

*ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*

February 11, 2026

*ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*

February 11, 2026

*ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*

February 11, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.