Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗು : ನ.1 ರಂದು ಜಿಲ್ಲಾಡಳಿತದಿಂದ ಕನ್ನಡ ರಾಜ್ಯೋತ್ಸವ ಅರ್ಥಪೂರ್ಣ ಆಚರಣೆಗೆ ನಿರ್ಧಾರ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡಗು : ನ.1 ರಂದು ಜಿಲ್ಲಾಡಳಿತದಿಂದ ಕನ್ನಡ ರಾಜ್ಯೋತ್ಸವ ಅರ್ಥಪೂರ್ಣ ಆಚರಣೆಗೆ ನಿರ್ಧಾರ*

ಅಕ್ಟೋಬರ್ 9, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಅ.9 NEWS DESK : ಇದೇ ನ.1 ರಂದು ಕನ್ನಡ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲು ಕೊಡಗು ಜಿಲ್ಲಾಡಳಿತ ನಿರ್ಧರಿಸಿದೆ. ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು, ಕಳೆದ ಬಾರಿಯಂತೆ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ಆಯೋಜಿಸಲು ವಿವಿಧ ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಕನ್ನಡ ರಾಜ್ಯೋತ್ಸವ ನಡೆಯಲಿದ್ದು, ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣವನ್ನು ಸುಸ್ಥಿತಿಯಲ್ಲಿಡುವಂತೆ ಪೌರಾಯುಕ್ತರು ಹಾಗೂ ಕ್ರೀಡಾ ಇಲಾಖೆ ಅಧಿಕಾರಿಗೆ ಸೂಚಿಸಿದರು. ವಾಟರ್ ಪ್ರೋಫ್ ವೇದಿಕೆಯನ್ನು ನಿರ್ಮಾಣ ಮಾಡುವ ಸಂದರ್ಭದಲ್ಲಿ ಸ್ವಲ್ಪ ಎತ್ತರ ಮಾಡುವಂತಾಗಬೇಕು. ಗಣ್ಯರು, ಅತಿಥಿಗಳು, ಮಾಧ್ಯಮದವರು ಇತರರು ಕುಳಿತುಕೊಳ್ಳಲು ಸೂಕ್ತ ಚೇರ್‍ಗಳನ್ನು ಅಳವಡಿಸಿ ಪೆಂಡಾಲ್ ನಿರ್ಮಾಣ ಮಾಡುವಂತೆ ಜಿಲ್ಲಾಧಿಕಾರಿ ಅವರು ಸಂಬಂಧಪಟ್ಟ ಎಂಜಿನಿಯರ್‍ಗಳಿಗೆ ಸೂಚಿಸಿದರು. ಸಾಂಸ್ಕøತಿಕ ಕಾರ್ಯಕ್ರಮ ಸಂಬಂಧಿಸಿದಂತೆ ಬೇರೆ ಬೇರೆ ಶಾಲೆಗಳಿಗೆ ಅವಕಾಶ ಮಾಡಬೇಕು. ಕನ್ನಡ ರಾಜ್ಯೋತ್ಸವದಲ್ಲಿ ಕನ್ನಡ ಹಾಡುಗಳನ್ನು ಮಾತ್ರ ಒಳಗೊಂಡಿರಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು. ಸಾಂಸ್ಕøತಿಕ ಕಾಯಕ್ರಮ ಬಗ್ಗೆ ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರು ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳು ಪೂರ್ವ ತಯಾರಿಯನ್ನು ವೀಕ್ಷಿಸಿ ಸರಿಯಾದದ್ದನ್ನು ಆಯ್ಕೆ ಮಾಡಬೇಕು. ಕನ್ನಡ ರಾಜ್ಯೋತ್ಸವ ಸಂದರ್ಭಕ್ಕೆ ತಕ್ಕಂತೆ ಸಾಂಸ್ಕøತಿಕ ಕಾರ್ಯಕ್ರಮ ಏರ್ಪಡಿಸಬೇಕು ಎಂದು ಹೇಳಿದರು. ಸ್ವಾಗತ, ಸ್ತಬ್ಧಚಿತ್ರ, ಧ್ಜಜಾರೋಹಣ ಮತ್ತು ವೇದಿಕೆ, ಪಥ ಸಂಚಲನ, ಸಾಂಸ್ಕøತಿಕ, ಉಪಾಹಾರ, ಬಹುಮಾನ, ಸ್ವಚ್ಚತೆ ಹಾಗೂ ಕುಡಿಯುವ ನೀರು ಹೀಗೆ ವಿವಿಧ ಉಪ ಸಮಿತಿಗಳು ತಮ್ಮ ತಮ್ಮ ಹಂತದಲ್ಲಿ ಸಮಾಲೋಚನೆ ನಡೆಸಿ ಅ.24 ರೊಳಗೆ ಅಗತ್ಯ ಸಿದ್ಧತೆಗಳ ಬಗ್ಗೆ ಜಿಲ್ಲಾಡಳಿತಕ್ಕೆ ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಸ್ಪಷ್ಟ ನಿರ್ದೇಶನ ನೀಡಿದರು. ವಿವಿಧ ಕ್ಷೇತ್ರದಲ್ಲಿ ರಾಜ್ಯ, ರಾಷ್ಟ್ರ ಹಾಗೂ ಅಂತರ ರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿರುವವರನ್ನು ಗುರುತಿಸಿ ಗೌರವಿಸುವಂತಾಗಲು ಅಗತ್ಯ ಕ್ರಮವಹಿಸುವಂತೆ ಜಿಲ್ಲಾಧಿಕಾರಿ ತಿಳಿಸಿದರು. ಹೆಚ್ಚುವರಿ ಜಿಲ್ಲಾಧಿಕಾರಿ ಅವರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲಾಗುವುದು ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು. ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಮಾತನಾಡಿ, ಕಳೆದ ಬಾರಿಯಂತೆ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಆಯೋಜಿಸಲು ಎಲ್ಲರೂ ಶ್ರಮಿಸಬೇಕು. ಕನ್ನಡಮಯ ವಾತಾವರಣ ನಿರ್ಮಾಣ ಮಾಡಬೇಕು ಎಂದರು. ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ ಅವರು ಕನ್ನಡ ರಾಜ್ಯೋತ್ಸವ ಆಚರಣೆಗೆ ಅಧಿಕಾರಿಗಳು ಅಗತ್ಯ ಸಿದ್ದತೆ ಮಾಡಿಕೊಳ್ಳಬೇಕು ಎಂದು ನಿರ್ದೇಶನ ನೀಡಿದರು. ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಬಾರಿಕೆ ದಿನೇಶ್ ಕುಮಾರ್ ಅವರು ಮಾತನಾಡಿ ಪೊಲೀಸ್ ಇಲಾಖೆಯಿಂದ ಪಥ ಸಂಚಲನ ಸೇರಿದಂತೆ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗುವುದು ಎಂದು ಹೇಳಿದರು. ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಸದಾಶಿವ ಪಲ್ಲೆದ್ ಅವರು ಎಸ್‍ಎಸ್‍ಎಲ್‍ಸಿ ಪರೀಕ್ಷೆ ಕನ್ನಡ ಭಾಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಗುವುದು. ಸಾಂಸ್ಕøತಿಕ ಕಾರ್ಯಕ್ರಮ ಸಂಬಂಧಿಸಿದಂತೆ ಎಲ್ಲಾ ರೀತಿಯ ಪೂರ್ವ ತಯಾರಿ ನಡೆಸಿ ಅಂತಿಮಗೊಳಿಸಿ ಮಾಹಿತಿ ನೀಡಲಾಗುವುದು ಎಂದರು. ಜಿಲ್ಲಾ ಆರೋಗ್ಯ ಮತ್ತು ಕಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಕುಮಾರ್, ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಚಂದ್ರಶೇಖರ್, ಸೈನಿಕ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರಾದ ಬಿ.ಆರ್.ಶೆಟ್ಟಿ, ಪಶುಪಾಲನಾ ಇಲಾಖೆಯ ಉಪ ನಿದೇಶಕರಾದ ಲಿಂಗರಾಜ ದೊಡ್ಡಮನಿ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಜ್ಯೋತಿ, ನಗರಾಭಿವೃದ್ಧಿ ಯೋಜನಾ ಶಾಖೆಯ ಯೋಜನಾ ನಿರ್ದೇಶಕರಾದ ಬಿ.ಬಸಪ್ಪ, ಲೀಡ್ ಬ್ಯಾಂಕ್ ವ್ಯವಸ್ಥಾಪಕರಾದ ಗಂಗಾಧರ ನಾಯಕ್, ಪ್ರಾದೇಶಿಕ ಸಾರಿಗೆ ಅಧಿಕಾರಿ ಸತೀಶ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವ್ಯವಸ್ಥಾಪಕರಾದ ಎಸ್.ಎಸ್.ದೀಪಕ್, ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರಾದ ಮುತ್ತಪ್ಪ, ಪಿಎಂಜಿಎಸ್‍ವೈ ಎಂಜಿನಿಯರ್ ಪ್ರಭು, ತಾಲ್ಲೂಕು ಕಾರ್ಮಿಕ ಅಧಿಕಾರಿ ಎಂ.ಎಂ.ಯತ್ನಟ್ಟಿ, ಲೋಕೋಪಯೋಗಿ ಇಲಾಖೆ ಎಂಜಿನಿಯರ್, ಜಿಲ್ಲಾ ಸಾಂಖ್ಯಿಕ ಅಧಿಕಾರಿ ನಾರಾಯಣ, ಪೌರಾಯುಕ್ತರಾದ ಎಚ್.ಆರ್.ರಮೇಶ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿದೇಶಕರಾದ ಕುಮಾರ ಇತರರು ಇದ್ದರು.

 

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.