Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮೂರ್ನಾಡಿನಲ್ಲಿ 102ನೇ ವಾರ್ಷಿಕ ಕೈಲ್ ಪೊಳ್ದ್ ಆಚರಣೆ : ವಿವಿಧ ಆಟೋಟಗಳು*
  • *ಸೆ.5 ರಂದು ಶಿಕ್ಷಕರ ದಿನಾಚರಣೆ*
  • *ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ : ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ*
  • *ಟೈಲರಿಂಗ್ ಯಂತ್ರೋಪಕರಣ ವಿತರಣೆ*
  • *ಹೊನ್ನಮ್ಮನ ಕೆರೆ ಆವರಣದಲ್ಲಿ ಸ್ವಚ್ಛತಾ ಶ್ರಮದಾನ*
  • *ಪೊಲೀಸ್ ಪೇದೆ ಹುದ್ದೆ :  ನೇರ ನೇಮಕಾತಿ ಪರೀಕ್ಷೆ ಸುಸೂತ್ರವಾಗಿ ನಡೆಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*   
  • *31 ನೇ ವರ್ಷದ ಕೈಲ್ ಪೊವ್ದ್ ನ್ನು ಸಂಭ್ರಮದಿಂದ ಆಚರಿಸಿದ CNC*
  • *ಮಡಿಕೇರಿಯಲ್ಲಿ ಬೀದಿನಾಯಿ ಉಪಟಳ ತಡೆಗೆ ಕ್ರಮ*
  • *ಕೊಡಗು ವಿದ್ಯಾಲಯದಲ್ಲಿ ಈದ್ ಮಿಲಾದ್ ಆಚರಣೆ*
  • *ಸುಂಟಿಕೊಪ್ಪ : ಯುವಶಕ್ತಿ ದಾರಿ ತಪ್ಪದಂತೆ ಸಮಾಜ ಬೆನ್ನೆಲುಬಾಗಿ ನಿಲ್ಲಬೇಕು: ಬಿ.ಸಿ. ದಿನೇಶ್*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಗಾಢ ನಿದ್ದೆಯಲ್ಲಿದ್ದ ಮಕ್ಕಳನ್ನು ಕಾಡಿದ ಅಗ್ನಿ : 52 ವಿದ್ಯಾರ್ಥಿಗಳು ಪಾರಾಗಿದ್ದೇ ಪವಾಡ : ನಂತರ ನಡೆದದ್ದೇ…*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಗಾಢ ನಿದ್ದೆಯಲ್ಲಿದ್ದ ಮಕ್ಕಳನ್ನು ಕಾಡಿದ ಅಗ್ನಿ : 52 ವಿದ್ಯಾರ್ಥಿಗಳು ಪಾರಾಗಿದ್ದೇ ಪವಾಡ : ನಂತರ ನಡೆದದ್ದೇ…*

ಅಕ್ಟೋಬರ್ 9, 20253 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಅ.9 : ಹರ್ ಮಂದಿರ್ ಆಶ್ರಮ ವಸತಿ ಶಾಲೆಯಲ್ಲಿ ನಡೆದ ಅಗ್ನಿ ಅವಘಡದಲ್ಲಿ 2ನೇ ತರಗತಿಯ ವಿದ್ಯಾರ್ಥಿಯೋರ್ವ ಸಾವನ್ನಪ್ಪಿರುವ ಘಟನೆ ಮಡಿಕೇರಿ ತಾಲ್ಲೂಕಿನ ಬೆಟ್ಟಗೇರಿ ಗಾ.ಪಂ ವ್ಯಾಪ್ತಿಯ ಹೆರವನಾಡು ಗ್ರಾಮದ ಕಾಟಕೇರಿ ಗ್ರಾಮದಲ್ಲಿ ನಡೆದಿದೆ. ಅದೃಷ್ಟವಶಾತ್ ಉಳಿದ 52 ವಿದ್ಯಾರ್ಥಿಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಭಾಗಮಂಡಲ ಹೋಬಳಿ ಚೆಟ್ಟಿಮಾನಿ ಗ್ರಾಮದ ಕೃಷಿಕ ಕೇಕಡ ಅನಿಲ್ ಕುಮಾರ್ ಹಾಗೂ ಕುಂದಚೇರಿ ಸರಕಾರಿ ಶಾಲೆಯ ಅತಿಥಿ ಶಿಕ್ಷಕಿ ತ್ರಿವೇಣಿ ದಂಪತಿಯ ಪುತ್ರ ಪುಷ್ಪಕ್ (7) ಅಗ್ನಿ ದುರಂತಕ್ಕೆ ಬಲಿಯಾದ ಬಾಲಕನಾಗಿದ್ದಾನೆ. ದೆಹಲಿಯ ಎನ್‌ಜಿಓ ಸಂಸ್ಥೆ ಕಾಟಕೇರಿ ಗ್ರಾಮದಲ್ಲಿ ನಡೆಸುತ್ತಿರುವ ಹರ್ ಮಂದಿರ್ ಆಶ್ರಮ ವಸತಿ ಶಾಲೆಯ ವಸತಿ ನಿಲಯದಲ್ಲಿ ಗುರುವಾರ ನಸುಕಿನ 4 ಗಂಟೆಯ ವೇಳೆಗೆ ಬೆಂಕಿ ಕಾಣಿಸಿಕೊಂಡಿದೆ. ಗಾಢ ನಿದ್ದೆಯಲ್ಲಿದ್ದ ಒಟ್ಟು 53 ವಿದ್ಯಾರ್ಥಿಗಳಲ್ಲಿ 52 ಮಂದಿ ಹೇಗೋ ಹೊರಗೆ ಓಡಿ ಬಂದಿದ್ದಾರೆ. ಆದರೆ ಪುಷ್ಪಕ್ ಹೊರ ಬರಲಾಗದೆ ಬೆಂಕಿಯಲ್ಲಿ ಸಿಲುಕಿ ಅಸುನೀಗಿದ್ದಾನೆ.
ಬೆಂಕಿ ಅವಘಡದಲ್ಲಿ ವಿದ್ಯಾರ್ಥಿಗಳಾದ ಸಿದ್ದಾಪುರದ ತನ್ವಿತ್ ಹಾಗೂ ಹಾಸನದ ಭುವನ್, ಸಿಬ್ಬಂದಿಗಳಾದ ಸುಮಿತ್ರ ಹಾಗೂ ಮೋನಿಕಾ ಗಾಯಗೊಂಡಿದ್ದು, ಮಡಿಕೇರಿಯ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಚೇತರಿಸಿಕೊಂಡಿದ್ದಾರೆ. *ಬಡ ವಿದ್ಯಾರ್ಥಿಗಳ ಶಾಲೆ* ಹರ್ ಮಂದಿರ್ ವಸತಿ ಶಾಲೆ 2019ರಲ್ಲಿ ಆರಂಭಗೊಂಡಿದ್ದು, 1ರಿಂದ 7ನೇ ತರಗತಿಯವರೆಗೆ ಬಡ ವಿದ್ಯಾರ್ಥಿಗಳಿಗೆ ಕುಠೀರ ಮಾದರಿಯ ಕೊಠಡಿಗಳಲ್ಲಿ ಆಂಗ್ಲ ಮಾಧ್ಯಮದಲ್ಲಿ ಉಚಿತ ಶಿಕ್ಷಣ ನೀಡಲಾಗುತ್ತಿದೆ. ರಾಜ್ಯದ ವಿವಿಧ ಭಾಗಗಳ ಒಟ್ಟು 102 ವಿದ್ಯಾರ್ಥಿಗಳು ಇಲ್ಲಿ ವ್ಯಾಸಂಗ ಮಾಡುತ್ತಿದ್ದು, ಈ ಪೈಕಿ 72 ಮಕ್ಕಳು ವಸತಿ ನಿಲಯದಲ್ಲಿ ವಾಸವಿದ್ದಾರೆ. ದಸರಾ ರಜೆ ಹಿನ್ನೆಲೆಯಲ್ಲಿ ಊರಿಗೆ ಹೋಗಿದ್ದ ಕೆಲವು ವಿದ್ಯಾರ್ಥಿಗಳು ಮರಳಿ ಶಾಲೆಗೆ ಬಂದಿರಲಿಲ್ಲ. ಮೃತ ಪುಷ್ಪಕ್ ಹಾಗೂ ಆಕೆಯ ಅಕ್ಕ 6ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಸಿಂಚನ(10) ಸೇರಿದಂತೆ 53 ವಿದ್ಯಾರ್ಥಿಗಳು ವಸತಿ ಶಾಲೆಗೆ ಮರಳಿದ್ದರು. ಬುಧವಾರ ರಾತ್ರಿ 30 ಬಾಲಕರು ಹಾಗೂ 23 ಬಾಲಕಿಯರು ಮಲಗಿದ್ದರು. ಶಾಲಾ ಶಿಕ್ಷಕರು ಹಾಗೂ ಇತರ ಸಿಬ್ಬಂದಿಗಳು ಕೂಡ ಇದೇ ವಠಾರದಲ್ಲಿ ವಾಸವಾಗಿದ್ದರು. ಗುರುವಾರ ನಸುಕಿನಲ್ಲಿ ವಸತಿ ನಿಲಯದ ಮೇಲ್ಛಾವಣಿಗೆ ಬೆಂಕಿ ತಗುಲಿ ಸಂಪೂರ್ಣ ಕಟ್ಟಡ ಹೊತ್ತಿ ಉರಿದಿದೆ. ಈ ಸಂದರ್ಭ ಎಚ್ಚರಗೊಂಡ ಕಾಲೂರು ಮೂಲದ ವಿದ್ಯಾರ್ಥಿ ಬಬಿನ್ ಬಿದ್ದಪ್ಪ ಎಂಬಾತ ಕೂಗಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ. ಮಕ್ಕಳ ಕೂಗಾಟ ಕೇಳಿ ಎಚ್ಚರಗೊಂಡ ಶಾಲಾ ಸಿಬ್ಬಂದಿಗಳು ಹಾಗೂ ಗ್ರಾಮಸ್ಥರು ಆಗಮಿಸಿ ವಿದ್ಯಾರ್ಥಿಗಳನ್ನು ವಸತಿ ನಿಲಯದಿಂದ ಹೊರಗೆ ಕರೆ ತಂದಿದ್ದಾರೆ. ಆ ಹೊತ್ತಿಗಾಗಲೇ ಬೆಂಕಿ ವಸತಿ ನಿಲಯದ ಎಲ್ಲಾ ಕೊಠಡಿಗಳನ್ನು ವ್ಯಾಪಿಸಿದೆ. ಹೊರಗೆ ಬಂದ ವಿದ್ಯಾರ್ಥಿಗಳ ಸಂಖ್ಯೆಯನ್ನು ಎಣಿಸಿದ ಸಂದರ್ಭ ಓರ್ವ ವಿದ್ಯಾರ್ಥಿ ಇಲ್ಲದಿರುವುದು ಕಂಡು ಬಂದಿದೆ. ತೀವ್ರ ಬೆಂಕಿ ಹರಡಿದ್ದರಿಂದ ಶಾಲಾ ಸಿಬ್ಬಂದಿ ಸಹಿತ ಗ್ರಾಮಸ್ಥರು ಕೂಡ ಕೊಠಡಿಗೆ ನುಗ್ಗಲಾಗದೆ ಅಸಹಾಯಕ ಪರಿಸ್ಥಿತಿ ಎದುರಿಸಿದ್ದಾರೆ. ಮಾಹಿತಿ ತಿಳಿದ ತಕ್ಷಣ ಅಗ್ನಿಶಾಮಕ ದಳ ಸ್ಥಳಕ್ಕಾಗಮಿಸಿ ಬೆಂಕಿ ನಂದಿಸಿದೆ. ಆದರೆ ಆ ಹೊತ್ತಿಗಾಗಲೇ ದಟ್ಟ ಹೊಗೆ ಮತ್ತು ಬೆಂಕಿಯ ನಡುವೆ ಸಿಲುಕಿದ್ದ ವಿದ್ಯಾರ್ಥಿ ಪುಷ್ಪಕ್ ಹೊರ ಬರಲಾರದೆ ಸ್ಥಳದಲ್ಲಿಯೇ ಸಜೀವ ದಹನವಾಗಿದ್ದಾನೆ. ಬೆಂಕಿ ನಂದಿಸುವ ಕಾರ್ಯಾಚರಣೆ ವೇಳೆ ಪುಷ್ಪಕ್ ನ ಮೃತದೇಹ ಬಹುತೇಕ ಸುಟ್ಟು ಹೋದ ಸ್ಥಿತಿಯಲ್ಲಿ ವಸತಿ ನಿಲಯದ ಕೊಠಡಿಯಲ್ಲಿ ಪತ್ತೆಯಾಗಿದೆ. ಬಳಿಕ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಿ ಪೋಷಕರಿಗೆ ಹಸ್ತಾಂತರಿಸಲಾಯಿತು. ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ವೆಂಕಟ್ ರಾಜಾ, ಹೆಚ್ಚುವರಿ ಪೊಲೀಸ್ ವರಿಷ್ಟಾಧಿಕಾರಿ ಬಾರಿಕೆ ದಿನೇಶ್, ಮಡಿಕೇರಿ ತಹಶೀಲ್ದಾರ್ ಶ್ರೀಧರ್, ಡಿಡಿಪಿಐ ಗಂಗಾಧರಪ್ಪ, ಅಗ್ನಿಶಾಮಕ ದಳದ ಅಧಿಕಾರಿ, ಮಡಿಕೇರಿ ಕ್ಷೇತ್ರ ಶಿಕ್ಷಣಾಧಿಕಾರಿ, ಚೆಸ್ಕಾಂ ಹಿರಿಯ ಅಧಿಕಾರಿಗಳು, ಗ್ರಾಮಾಂತರ ಠಾಣಾ ಪೊಲೀಸ್, ವಿಧಿ ವಿಜ್ಞಾನ ವಿಭಾಗದ ತಜ್ಞರು ಭೇಟಿ ನೀಡಿ ಪರಿಶೀಲನೆ ನಡೆಸಿದರು. *ತನಿಖೆಗೆ ಕ್ರಮ* ಘಟನೆ ನಡೆದ ಸ್ಥಳಕ್ಕಾಗಮಿಸಿದ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಮೃತ ಬಾಲಕನ ಪೋಷಕರಿಗೆ ಸಾಂತ್ವನ ಹೇಳಿದರು. ಅವಘಡದ ಕುರಿತು ತೀವ್ರ ಬೇಸರ ವ್ಯಕ್ತಪಡಿಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಜಿಲ್ಲಾಧಿಕಾರಿ ಘಟನೆ ಕುರಿತು ಸಂಬಂಧಿಸಿದ ಇಲಾಖೆಯ ಉನ್ನತ ಅಧಿಕಾರಿಗಳಿಂದ ತನಿಖೆ ಮಾಡಿಸಲಾಗುತ್ತದೆ. ಮೃತ ವಿದ್ಯಾರ್ಥಿಯ ಕುಟುಂಬಕ್ಕೆ ಪರಿಹಾರ ನೀಡುವ ವಿಚಾರವಾಗಿ ಸರಕಾರದ ಗಮನ ಸೆಳೆಯಲಾಗುತ್ತದೆ. ನೊಂದ ಕುಟುಂಬದ ಜೊತೆ ಜಿಲ್ಲಾಡಳಿತ ಇರಲಿದೆ ಎಂದು ಭರವಸೆ ನೀಡಿದರು. ಹೆಚ್ಚುವರಿ ಪೊಲೀಸ್ ವರಿಷ್ಟಾಧಿಕಾರಿ ಬಾರಿಕೆ ದಿನೇಶ್ ಅವರು ಮಾತನಾಡಿ ಶಾಲಾ ಸಿಬ್ಬಂದಿಗಳು 52 ಮಕ್ಕಳನ್ನು ರಕ್ಷಿಸಿದ್ದಾರೆ. ಘಟನಾ ಸ್ಥಳವನ್ನು ಪರಿಶೀಲನೆ ಮಾಡಲಾಗಿದ್ದು, ಪೊಲೀಸ್ ಇಲಾಖೆಯಿಂದಲೂ ತನಿಖೆ ನಡೆಯಲಿದೆ ಎಂದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮೂರ್ನಾಡಿನಲ್ಲಿ 102ನೇ ವಾರ್ಷಿಕ ಕೈಲ್ ಪೊಳ್ದ್ ಆಚರಣೆ : ವಿವಿಧ ಆಟೋಟಗಳು*

ಸೆಪ್ಟೆಂಬರ್ 1, 2026

*ಸೆ.5 ರಂದು ಶಿಕ್ಷಕರ ದಿನಾಚರಣೆ*

ಸೆಪ್ಟೆಂಬರ್ 1, 2026

*ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ : ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ*

ಸೆಪ್ಟೆಂಬರ್ 1, 2026

*ಸೆ.5 ರಂದು ಶಿಕ್ಷಕರ ದಿನಾಚರಣೆ*

ಸೆಪ್ಟೆಂಬರ್ 1, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಸೆ.1 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಶಿಕ್ಷಕರ…

*ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ : ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ*

ಸೆಪ್ಟೆಂಬರ್ 1, 2026

*ಟೈಲರಿಂಗ್ ಯಂತ್ರೋಪಕರಣ ವಿತರಣೆ*

ಸೆಪ್ಟೆಂಬರ್ 1, 2026

*ಹೊನ್ನಮ್ಮನ ಕೆರೆ ಆವರಣದಲ್ಲಿ ಸ್ವಚ್ಛತಾ ಶ್ರಮದಾನ*

ಸೆಪ್ಟೆಂಬರ್ 1, 2026

*ಪೊಲೀಸ್ ಪೇದೆ ಹುದ್ದೆ :  ನೇರ ನೇಮಕಾತಿ ಪರೀಕ್ಷೆ ಸುಸೂತ್ರವಾಗಿ ನಡೆಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*   

ಸೆಪ್ಟೆಂಬರ್ 1, 2026

*31 ನೇ ವರ್ಷದ ಕೈಲ್ ಪೊವ್ದ್ ನ್ನು ಸಂಭ್ರಮದಿಂದ ಆಚರಿಸಿದ CNC*

ಸೆಪ್ಟೆಂಬರ್ 1, 2026

*ಮಡಿಕೇರಿಯಲ್ಲಿ ಬೀದಿನಾಯಿ ಉಪಟಳ ತಡೆಗೆ ಕ್ರಮ*

ಸೆಪ್ಟೆಂಬರ್ 1, 2026

*ಕೊಡಗು ವಿದ್ಯಾಲಯದಲ್ಲಿ ಈದ್ ಮಿಲಾದ್ ಆಚರಣೆ*

ಸೆಪ್ಟೆಂಬರ್ 1, 2026

*ಸುಂಟಿಕೊಪ್ಪ : ಯುವಶಕ್ತಿ ದಾರಿ ತಪ್ಪದಂತೆ ಸಮಾಜ ಬೆನ್ನೆಲುಬಾಗಿ ನಿಲ್ಲಬೇಕು: ಬಿ.ಸಿ. ದಿನೇಶ್*

ಸೆಪ್ಟೆಂಬರ್ 1, 2026

*ಸಣ್ಣ ಪ್ರಮಾಣದ ಬೆಟ್ಟ ಕುಸಿತ*

ಸೆಪ್ಟೆಂಬರ್ 1, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.