Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ವಿರಾಜಪೇಟೆಯಲ್ಲಿ ಐಎಎಸ್ ಮತ್ತು ಐಪಿಎಸ್ ತರಬೇತಿ ಕೇಂದ್ರ ಉದ್ಘಾಟನೆ : ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಚಟುವಟಿಕೆಗಳಲ್ಲಿ ಭಾಗವಹಿಸಿ : ಎಸ್.ಹೆಚ್.ಮತೀನ್*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ವಿರಾಜಪೇಟೆಯಲ್ಲಿ ಐಎಎಸ್ ಮತ್ತು ಐಪಿಎಸ್ ತರಬೇತಿ ಕೇಂದ್ರ ಉದ್ಘಾಟನೆ : ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಚಟುವಟಿಕೆಗಳಲ್ಲಿ ಭಾಗವಹಿಸಿ : ಎಸ್.ಹೆಚ್.ಮತೀನ್*

ಅಕ್ಟೋಬರ್ 10, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ವಿರಾಜಪೇಟೆ ಅ.10 NEWS DESK : ಸ್ಪರ್ಧಾತ್ಮಕ ಯುಗದಲ್ಲಿ ಎಲ್ಲರಿಗೂ ಸ್ಪರ್ಧಿಸುವ ಅವಕಾಶವಿದ್ದು, ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಇದರ ಪ್ರಯೋಜನವನ್ನು ಪಡೆದುಕೊಳ್ಳಬೇಕು ಎಂದು ಪುರಸಭೆ ಸದಸ್ಯರಾದ ಎಸ್.ಹೆಚ್.ಮತೀನ್ ಹೇಳಿದರು. ವಿರಾಜಪೇಟೆಯ ಮೌಂಟೇನ್ ವ್ಯೂವ್ ಶಾಲೆಯಲ್ಲಿ 8 ಮತ್ತು 9ನೇ ತರಗತಿ ವಿದ್ಯಾರ್ಥಿಗಳಿಗೆ ನಡೆದ ಐಎಎಸ್ ಮತ್ತು ಐಪಿಎಸ್ ತರಬೇತಿ ಕೇಂದ್ರ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಕೇಂದ್ರದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು. ಗ್ರಾಮೀಣ ಭಾಗದ ಬಡ ವಿದ್ಯಾರ್ಥಿಗಳು ತರಬೇತಿ ತಯಾರಿ ನಡೆಸುವ ಕುರಿತು ಮತ್ತು ಪರೀಕ್ಷೆಗಳನ್ನು ಬರೆದು ಉನ್ನತ ಹುದ್ದೆಯನ್ನು ಹೊಂದಬೇಕೆಂಬ ಉದ್ದೇಶದಿಂದ ಈ ತರಬೇತಿ ಕಾರ್ಯಕ್ರಮವನ್ನು ನಡೆಸಲಾಗುತ್ತಿದೆ. ಇದು ಕೊಡಗಿನಲ್ಲಿಯೇ ಮೊಟ್ಟಮೊದಲು ನಮ್ಮ ವಿರಾಜಪೇಟೆಯಲ್ಲಿ ಪ್ರಾರಂಭವಾಗಿದೆ ಎಂದು ಭಾವಿಸುವುದಾಗಿ ಹೇಳಿದರಲ್ಲದೆ. ನಮ್ಮ ಕಾಲದಲ್ಲಿ ಉನ್ನತ ಮಟ್ಟದ ವಿದ್ಯಾಭ್ಯಸ ಕೇವಲ ಕನಸಾಗಿತ್ತು. ಈಗಿನ ವಿದ್ಯಾರ್ಥಿಗಳಿಗೆ ಇದು ಕೈಗೆಟುಕುವಂತ್ತಿದೆ. ಎಲ್ಲರೂ ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದರು. ಸಾಹಿತಿಗಳಾದ ರಜಿತ ಕಾರ್ಯಪ್ಪ ಮಾತನಾಡಿ, ಬಹುತೇಕ ಕೇಂದ್ರಗಳಲ್ಲಿ ನಾಗರಿಕ ಸೇವಾ ಪರೀಕ್ಷೆ ಬರೆಯುವ ಅಭ್ಯರ್ಥಿಗಳಿಗೆ ಪದವಿ ಹಂತದಲ್ಲಿ ತರಬೇತಿ ನೀಡಿದರೆ ಈ ಶಾಲೆ ಪ್ರೌಢಶಾಲೆಯಲ್ಲಿ ತರಬೇತಿಯನ್ನ ನೀಡುತ್ತಿದೆ, ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಮಾಡಿ ನಾಗರಿಕ ಸೇವಾ ಪರೀಕ್ಷೆಗಳಿಗೆ ಸಜ್ಜುಗೊಳಿಸುವ ಶಾಲೆಯಾಗಿ ಹೊರಹೊಮ್ಮಿದೆ. ಗ್ರಾಮೀಣ ಹಾಗೂ ನಗರ ಪ್ರದೇಶದ ವಿದ್ಯಾರ್ಥಿಗಳನ್ನು ಗಮನದಲ್ಲಿಟ್ಟುಕೊಂಡು ಗುಣಮಟ್ಟದ ತರಬೇತಿ ನೀಡಲಾಗುತ್ತಿದ್ದು ವಿದ್ಯಾರ್ಥಿಗಳು ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ಪಡೆಯಬೇಕು. ದುಶ್ಟಟಗಳಿಗೆ ಬಲಿಯಾಗದೆ ಉತ್ತಮ ಜೀವನ ನಡೆಸುವಂತಾಗಬೇಕು. ಸಮಾಜಕ್ಕೆ ಮಾದರಿಯಾಗಬೇಕು. ವಿದ್ಯೆಯಿಂದ ಜೀವನದಲ್ಲಿ ಏನನ್ನು ಬೇಕಾದರೂ ಸಾಧಿಸಬಹುದು. ಹಾಗಾಗಿ ವಿದ್ಯೆಗೆ ಮಹತ್ವ ನೀಡಿ ಎಂದು ಹೇಳಿದರು. ಶಾಲಾ-ಕಾಲೇಜು ಹಂತದಿಂದಲೇ ವಿದ್ಯಾರ್ಥಿಗಳು ಪುಸ್ತಕಗಳನ್ನು ಓದಿದರೆ ಹೊಸ ಯೋಚನಾ ಲಹರಿ ಬೆಳೆಯಲಿದೆ ಯುಪಿಎಸ್ಸಿ ಕೆಪಿಎಸ್ಸಿ ಐಎಎಸ್ ಪರೀಕ್ಷೆ ಬರೆಯುವ ಪದವೀಧರರಲ್ಲಿ ನಿರಂತರ ಅಧ್ಯಯನಶೀಲತೆ ಇರಬೇಕು. ಪುಸ್ತಕಗಳನ್ನು ಓದಿ ಪ್ರಸಕ್ತ ವಿದ್ಯಾಮಾನಗಳನ್ನು ಅರಿತುಕೊಳ್ಳಬೇಕು ಎಂದರು. ಪುರಸಭೆಯ ಮಾಜಿ ಸದಸ್ಯೆ ತಸ್ಲಿಂ ಅಕ್ತರ್ ಮಾತನಾಡಿ ವಿದ್ಯಾರ್ಥಿ ಜೀವನದಲ್ಲಿ ತಮ್ಮ ಅಮೂಲ್ಯ ಸಮಯವನ್ನು ವ್ಯರ್ಥಮಾಡದೆ ವಿದ್ಯೆಯೆಡೆಗೆ ಗಮನ ಹರಿಸಬೇಕು. ಇಂತಹ ಒಂದು ಉತ್ತಮ ತರಬೇತಿಯನ್ನು ಶಾಲೆಯಲ್ಲಿ ನೀಡುತ್ತಿರುವುದು ಶ್ಲಾಘನೀಯವೆಂದರು. ಸಹಕಾರ ಸಂಘದ ಅಧ್ಯಕ್ಷ ಅಲ್ತಾಫ್ ಮಾತನಾಡಿ ಮೌಂಟೇನ್ ವ್ಯೂ ಶಾಲೆ ಸಮಾಜಕ್ಕೆ ಮಾದರಿಯಾಗುವ ಕೆಲಸ ಮಾಡಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಉಪನ್ಯಾಸಕರಾದ ಶಾಫಿ ಅವರು ವಿದ್ಯಾರ್ಥಿಗಳಿಗೆ ಶುಭ ಕೋರಿ ತರಬೇತಿ ಕಾರ್ಯದ ಬಗ್ಗೆ ವಿವರಣೆ ನೀಡಿದರು. ಈ ಸಂದರ್ಭ ತಂತ್ರಜ್ಞಾನದ ಬಗೆಗಿನ ಮಾಹಿತಿ ಕೈಪಿಡಿಯನ್ನು ಬಿಡುಗಡೆ ಮಾಡಲಾಯಿತು. ಮತ್ತು ತಂತ್ರಜ್ಞಾನ ಯಂತ್ರದ ಉದ್ಘಾಟನೆ ಮಾಡಲಾಯಿತು. ರೋಬೋಟ್ ತಯಾರಿಕೆಯಲ್ಲಿ ವಿಜೇತ ಇಬ್ಬರೂ ವಿದ್ಯಾರ್ಥಿಗಳಿಗೆ ಬಹುಮಾನ ನೀಡಿ ಪ್ರೋತ್ಸಾಹಿಸಲಾಯಿತು. ಶಾಲೆಯ ಪ್ರಾಂಶುಪಾಲರಾದ ಸಯ್ಯದ್ ನೆಕಾತ್ ಅಸ್ಮಾ ಅವರು ಮಾತನಾಡಿ ವಿದ್ಯಾರ್ಥಿಗಳಿಗೆ ಕಲಿಕೆಯ ಹಂತದಲ್ಲಿ ಕೌಶಲ ಶಿಕ್ಷಣ ನೀಡುವುದು, ಉದ್ಯಮದ ಕೌಶಲಗಳನ್ನು ವೃದ್ಧಿಸುವ ಮೂಲಕ ಉತ್ತಮ ಉದ್ಯೋಗ ಅವಕಾಶ ಕಲ್ಪಿಸುವುದು ಪ್ರಾಯೋಗಿಕ ಕಲಿಕೆಗೂ ಉತ್ತೇಜನ ನೀಡುವುದು ಮುಂದಿನ ವೃತ್ತಿಗಳ ಆಯ್ಕೆಗೆ ನೆರವಾಗುತ್ತದೆ. ಇದರಿಂದ ಸ್ಥಳೀಯ ವಿದ್ಯಾರ್ಥಿಗಳಿಗೂ ಅನುಕೂಲವಾಗಲಿದೆ ಎಂದರು. ಶಾಲಾ ಆಡಳಿತ ಮಂಡಳಿ ಅಧ್ಯಕ್ಷರಾದ ಕಶ್ಮೀರಾ ಸಿಮ್ರಾನ್ ಮಾತನಾಡಿ, ಬಡವರು ಹಿಂದುಳಿದವರ ಮಕ್ಕಳು ಪಾಲಕರ ವೃತ್ತಿಯನ್ನೇ ಮೆಚ್ಚಿ ಕೂರಬೇಕಿಲ್ಲ. ಸರಕಾರಿ ಹುದ್ದೆ ಅಥವಾ ಸ್ವಾವೋದ್ಯಮ ಶುರು ಮಾಡುವ ಬಗ್ಗೆ ಕನಸು ಕಾಣಬೇಕು ಸೋಲನ್ನು ಕೂಡ ಸ್ವೀಕರಿಸುವ ಮನೋಭಾವ ರೂಡಿಸಿಕೊಳ್ಳಬೇಕು. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಉನ್ನತ ಹುದ್ದೆಯ ಕನಸು ನನಸು ಮಾಡುವ ಉದ್ದೇಶದಿಂದ ಈ ತರಬೇತಿ ನೀಡಲು ಯೋಜನೆ ಹಾಕಿದ್ದೇವೆ ಎಂದರು. ಈ ಸಂದರ್ಭ ಆಡಳಿತಾಧಿಕಾರಿ ಕರೀನಾ ಸರೋಶ್ ಸೇರಿದಂತೆ ಶಾಲಾ ಆಡಳಿತ ಮಂಡಳಿಯವರು, ಶಿಕ್ಷಕರು, ವಿದ್ಯಾರ್ಥಿಗಳು ಹಾಜರಿದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.