

ಮಡಿಕೇರಿ NEWS DESK ಅ.10 : ಮಡಿಕೇರಿ ದಸರಾದ ಕೊನೆಯ ದಿನ ದಶಮಂಟಪಗಳಿಗೆ ಬಹುಮಾನ ವಿತರಿಸುವ ಸಂದರ್ಭ ವಕೀಲ ಯಕ್ಷಿತ್ ಕೊತ್ತೋಳಿ ಮೇಲೆ ಪೊಲೀಸ್ ಅಧಿಕಾರಿಗಳಿಂದ ಹಲ್ಲೆಯಾಗಿದೆ ಎಂದು ಬೆಂಗಳೂರು ವಕೀಲರ ಸಂಘ ಅಸಮಾಧಾನ ವ್ಯಕ್ತಪಡಿಸಿದೆ. ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬೆಂಗಳೂರು ವಕೀಲರ ಸಂಘದ ಅಧ್ಯಕ್ಷ ವಿವೇಕ್ ಸುಬ್ಬಾರೆಡ್ಡಿ ಅವರು ಶ್ರೀ ಕೋಟೆ ಮಾರಿಯಮ್ಮ ದೇವಾಲಯ ಸಮಿತಿಯ ಸದಸ್ಯ, ವಕೀಲ ಯಕ್ಷಿತ್ ಅವರ ಮೇಲಿನ ಹಲ್ಲೆಯನ್ನು ತೀವ್ರವಾಗಿ ಖಂಡಿಸುವುದಾಗಿ ತಿಳಿಸಿದರು. ಪೊಲೀಸರು ಕಾನೂನು ಮರೆತು ಅಮಾನವೀಯವಾಗಿ ನಡೆದುಕೊಂಡಿದ್ದಾರೆ ಎಂದು ಆರೋಪಿಸಿದ ಅವರು, ಹಲ್ಲೆ ನಡಿಸಿದವರ ವಿರುದ್ಧ ನ್ಯಾಯಾಲಯದಲ್ಲಿ ದೂರು ದಾಖಲಿಸುವುದಾಗಿ ಹೇಳಿದರು. ಸುದ್ದಿಗೋಷ್ಠಿಯಲ್ಲಿ ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಪ್ರವೀಣ್ ಗೌಡ, ಉಪಾಧ್ಯಕ್ಷ ಗಿರೀಶ್ ಕುಮಾರ್, ವಕೀಲ ಯಕ್ಷಿತ್ ಕೊತ್ತೋಳಿ, ಹಾಗೂ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.








