
ಮಡಿಕೇರಿ NEWS DESK ಅ.11 : ರಾಷ್ಟ್ರೀಯ ಜನಗಣತಿಯ ಸಂದರ್ಭ ಆದಿಮಸಂಜಾತ, ಇಂಡಿಜಿನಸ್, ಆ್ಯನಿಮಿಸ್ಟಿಕ್ ನಂಬಿಗೆಯ ಏಕ ಜನಾಂಗೀಯ ಕೊಡವರ ಪ್ರತ್ಯೇಕ ಗುರುತು ದಾಖಲೀಕರಣವಾದರೆ ಮಾತ್ರ ಕೊಡವರಿಗೆ ಸಂವಿಧಾನಬದ್ಧ ಹಕ್ಕು ದೊರೆಯಲು ಸಾಧ್ಯ ಎಂದು ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ.
ಕೇಂದ್ರ ಸರಕಾರದ ಮೂಲಕ 2026 ಅಕ್ಟೋಬರ್ ನಿಂದ ನಡೆಯಲಿರುವ ಭಾರತ ದೇಶದ 16ನೇ ರಾಷ್ಟ್ರೀಯ ಜನಗಣತಿಯ ಸಂದರ್ಭ ಎಲ್ಲಾ ಮೂರು ಕಾಲಂನಲ್ಲಿ “ಕೊಡವ” ಎಂದೇ ಬರೆಸಬೇಕೆಂಬ ಕರೆಯೂ ಸೇರಿದಂತೆ ಸಂಸತ್ ಹಾಗೂ ವಿಧಾನಸಭೆಯಲ್ಲಿ ಕೊಡವರಿಗೆ ವಿಶೇಷ ರಾಜಕೀಯ ಪ್ರಾತಿನಿಧ್ಯ ನೀಡಬೇಕು ಎಂದು ಒತ್ತಾಯಿಸಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ವತಿಯಿಂದ ನೂರೊಕ್ಕ ನಾಡಿನ ಚೆಟ್ಟಳ್ಳಿಯಲ್ಲಿ ನಡೆದ 15ನೇ ಮಾನವ ಸರಪಳಿ ಜನಜಾಗೃತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕೊಡವಲ್ಯಾಂಡ್ ಭೂ ರಾಜಕೀಯ ಸ್ವಯಂ ಆಡಳಿತ, ಕೊಡವರಿಗೆ ವಿಶ್ವರಾಷ್ಟ್ರ ಸಂಸ್ಥೆಯ ಇಂಡಿಜಿನಸ್ ಪಿಪಲ್ಸ್ ರೈಟ್ಸ್, ಎಸ್.ಟಿ.ಪಟ್ಟಿಯಲ್ಲಿ ವರ್ಗೀಕರಣ, ಸಿಕ್ಕಿಂನ “ಸಂಘ” ಮತಕ್ಷೇತ್ರದಂತೆ ಕೊಡವರಿಗೆ ಸಂಸತ್ತು ಮತ್ತು ವಿಧಾನಸಭೆಯಲ್ಲಿ ವಿಶೇಷ ಪ್ರಾತಿನಿಧ್ಯ, ಕೊಡವರ ಪೂರ್ವಾರ್ಜಿತ ಭೂ ಹಕ್ಕು ಮತ್ತು ಧಾರ್ಮಿಕ ಸಂಸ್ಕಾರ ತೋಕ್-ಗನ್ ಹಕ್ಕು ಚಿರಸ್ಥಾಯಿಯಾಗಿ ಮುಂದುವರೆಯಬೇಕಾದರೆ ರಾಷ್ಟ್ರೀಯ ಜನಗಣತಿಯಲ್ಲಿ ‘ಕೊಡವರು’ ಎಂದೇ ದಾಖಲೀಕರಣವಾಗುವ ಅಗತ್ಯವಿದೆ ಎಂದರು. 2026-27 ರಲ್ಲಿ ನಡೆಯಲಿರುವ 16ನೇ ರಾಷ್ಟ್ರೀಯ ಜನಗಣತಿಯೊಂದಿಗೆ ಜನಾಂಗವಾರು ಮಾಹಿತಿ ಕಲೆಹಾಕುವ ಸಂದರ್ಭ ಆದಿಮ ಸಂಜಾತ ಏಕ-ಜನಾಂಗೀಯ (ಆ್ಯನಿಮಿಸ್ಟಿಕ್) ಕೊಡವರಿಗಾಗಿ ಪ್ರತ್ಯೇಕ ಕೋಡ್ ಮತ್ತು ಕಾಲಮ್ ನ್ನು ಅಳವಡಿಸಬೇಕು, ಇದರ ಆಧಾರದಡಿ ಮುಂದೆ ಜನಪ್ರತಿನಿಧಿ ಕಾಯ್ದೆಗೆ ತಿದ್ದುಪಡಿ ತರುವ ಮೂಲಕ ಕ್ಷೇತ್ರ ಪುನರ್ ವಿಂಗಡಣೆಗೆ ಮಾನದಂಡವಾಗಲಿರುವ ಈ ಜನಗಣತಿಯು ಕೊಡವರ ರಾಜಕೀಯ ಸಬಲೀಕರಣ, ಸ್ವಯಂ ನಿರ್ಧಾರದ ಹಕ್ಕು ಸ್ಥಾಪಿಸಲು ಮೆಟ್ಟಿಲಾಗಲಿದೆ. ಅಲ್ಲದೆ ಕೊಡವರ ಧಾರ್ಮಿಕ ಸಂಸ್ಕಾರ ತೋಕ್-ಗನ್ ಹಕ್ಕು ಚಿರಸ್ಥಾಯಿಯಾಗಿ ಮುಂದುವರಿಯಲು ಪೂರಕವಾಗಲಿದೆ. ಕೊಡವರು ಯಾವುದೇ ಧರ್ಮ ಅಥವಾ ಜಾತಿಗೆ ಸೇರಿದವರಲ್ಲ. ಇಂದು ಜನಗಣತಿಯೂ ಸೇರಿದಂತೆ ರಾಜ್ಯ ದಾಖಲೆಗಳ ಎಲ್ಲಾ ಕಾಲಂಗಳಲ್ಲಿ ಈ ದೇಶದ ಬಹುಧರ್ಮ, ಪ್ರಭಲಧರ್ಮ ಮತ್ತು ಬಲಾಢ್ಯ ಜಾತಿಯನ್ನು ದೃಷ್ಟಿಯಲ್ಲಿಟ್ಟು ರಚಿಸಲ್ಪಟ್ಟಿರುವ ಧರ್ಮ ಮತ್ತು ಜಾತಿ ಬಗ್ಗೆ ಮಾತ್ರ ಉಲ್ಲೇಖ ಇರುವುದರಿಂದ ಆ್ಯನಿಮಿಸ್ಟಿಕ್ ನಂಬಿಗೆಯ ಕೊಡವರು ಅನಿವಾರ್ಯವಾಗಿ ಧರ್ಮ ಮತ್ತು ಜಾತಿ ಕಾಲಂಗಳನ್ನು ಒಪ್ಪಿಕೊಂಡು ಕೊಡವ ಎಂದು ದಾಖಲಿಸಬೇಕಾದ ಪರಿಸ್ಥಿತಿ ಬಂದಿದೆ ಎಂದು ಬೇಸರ ವ್ಯಕ್ತಪಡಿಸಿದರು.
1871-72 ರಿಂದ 1931ರ ವರೆಗೆ ನಡೆದ ರಾಷ್ಟಿçÃಯ ಜನಗಣತಿಯಲ್ಲಿ ಕೊಡವರನ್ನು ಧರ್ಮೇತರ ಮತ್ತು ಜಾತಿಯೇತರ ಜನಾಂಗ/ಮೂಲವಂಶಸ್ಥ (ರೇಸ್) ಎಂದು ದಾಖಲಿಸಲ್ಪಡುವ ಮೂಲಕ ಕೊಡವರ ಪ್ರತ್ಯೇಕ ಅಸ್ತಿತ್ವ ಮತ್ತು ಸ್ವತಂತ್ರ ವ್ಯಕ್ತಿತ್ವವನ್ನು ಗುರುತಿಸಿ ನಮ್ಮ ಹೆಗ್ಗುರುತು ರಾಜ್ಯ ದಾಖಲೆಯಲ್ಲಿ ನಳನಳಿಸುವಂತಾಗಿತ್ತು. ತದನಂತರ ನಮ್ಮನ್ನು 2021ರ ವರೆಗೆ ಪ್ರತಿ ದಶಮಾನಗಳಿಗೊಮ್ಮೆ ನಡೆಸುವ ರಾಷ್ಟಿçÃಯ ಜನಗಣತಿಯಲ್ಲಿ ಕೊಡವರನ್ನು ಬಲಾಢ್ಯ ಧಾರ್ಮಿಕ ಮತ್ತು ಜಾತಿಯೊಂದಿಗೆ ವಿಲೀನಗೊಳಿಸಿ ನಮ್ಮ ಅಸ್ತಿತ್ವ ಮತ್ತು ಹೆಗ್ಗುರುತು ವಿನಾಶದೊಂದಿಗೆ ಕೊಡವರ ಅಸ್ಮಿತೆ ಮತ್ತು ಸತ್ವವನ್ನು ಧ್ವಂಸ ಮಾಡಲಾಯಿತು. ಮುಂದೆ ಅದು ಕೊಡವರ ಸ್ವಯಂ ನಿರ್ಣಯದ ಹಕ್ಕು ಮತ್ತು ಸಾಂವಿಧಾನಿಕ ಹಕ್ಕುಗಳನ್ನು ಪ್ರತಿಪಾದಿಸಲು ಆಗಲಾರದಷ್ಟು ಕ್ಷೀಣಗೊಂಡಿತು ಎಂದು ಆರೋಪಿಸಿದರು. ಕೊಡವರ ವಿರಳ ಸಂಖ್ಯೆಯು ಕೊಡವರ ಪ್ರತ್ಯೇಕ ಅಸ್ತಿತ್ವ ಮತ್ತು ಹೆಗ್ಗುರುತನ್ನು ಜೋಪಾನ ಮಾಡಲು ವಿಶೇಷ ಹಕ್ಕು ಕೇಳಲೆಬಾರದು, ಕೊಡವರೇನಿದ್ದರು ಬಲಾಡ್ಯ ಜನಸಂಖ್ಯಾ ಬಾಹುಳ್ಯದೊಂದಿಗೆ ಗುರುತಿಸಿಕೊಳ್ಳಬೇಕೆನ್ನುವ ಅವ್ಯಕ್ತ ಕಾರ್ಯಸೂಚಿಯೊಂದು ಪಿತೂರಿ ಮಾಡುತ್ತ ಬಂತು. ಕೊಡವರು ಭೂದೇವಿ ಅರ್ಥಾತ್ ಅವರ ಜನ್ಮಭೂಮಿ ಕೊಡವಲ್ಯಾಂಡ್, ಜಲದೇವಿ ಕಾವೇರಿ, ವನದೇವಿ/ದೇವಕಾಡ್, ಪಾರಮಾರ್ಥಿಕ ಮಂದ್, ಧಾರ್ಮಿಕ ಸಂಸ್ಕಾರ, ತೋಕ್-ಗನ್, ಗೆಜ್ಜೆತಂಡ್, ಸೂರ್ಯ-ಚಂದ್ರ, ಪರ್ವತ ದೇವಿ, ಗುರು-ಕಾರೋಣ, ಸ್ವರ್ಗೀಯ ದಿವ್ಯಾತ್ಮಗಳು, ತೂಟಂಗಳ-ಕ್ಯಾಕೋಳ (ಸಮಾಧಿ ಸ್ಥಳ) ಗಳನ್ನು ಪೂಜ್ಯಭಾವನೆಯಿಂದ ಆರಾದಿಸುತ್ತಾರೆ. ಸಪ್ತಪಧಿ ಇಲ್ಲದ ಮದುವೆ, ಮಂಗಳ ಸೂತ್ರ ಪದ್ಧತಿ ಇಲ್ಲದ (ಮದುವೆಯ ಮುನ್ನದಿನ ರಾತ್ರಿ ಮಧುಮಗಳ ತಾಯಿ ಮಧುಮಗಳ ಕೊರಳಿಗೆ ಪವಿತ್ರ ‘ಪತ್ತಾಕ್’ ಕಟ್ಟುವ ವಿಶಿಷ್ಟ ಪರಂಪರೆ ನಡೆದು ಬಂದಿದೆ.) ಕೊಡವರ ಎಲ್ಲಾ ಶುಭಕಾರ್ಯ, ಅಶುಭಕಾರ್ಯಗಳಲ್ಲಿ ಮದ್ಯ ಸಮರಾಧನೆ ಮತ್ತು ಪಂದಿಕರಿ ಬೋಜನ ಕಡ್ಡಾಯ. ತೋಕ್-ಗನ್ ಎಲ್ಲಾ ಕಾರ್ಯದಲ್ಲೂ ಪೂಜಾ ಪರಿಕರವಾಗಿ ಬಳಸುತ್ತೇವೆ. ಈ ರೀತಿಯ ಸಂಸ್ಕಾರವನ್ನ ಆ್ಯನಿಮಿಸ್ಟಿಕ್ ನಂಬಿಗೆಯ ಜನರೆಂದು ವಿಶ್ವರಾಷ್ಟç ಸಂಸ್ಥೆ ಗುರುತಿಸಿದೆ. ಬುಡಕಟ್ಟು ಕೊಡವರಲ್ಲಿ ಯಾವುದೇ ಉಪಜಾತಿ-ಉಪವರ್ಗ, ಉಪ ಪಂಗಡಗಳಿಲ್ಲ. ಧರ್ಮ ಪರಿವರ್ತನೆ/ಧರ್ಮಧೀಕ್ಷೆ ಮೂಲಕ ಕೊಡವರ ಸಂಖ್ಯೆ ವೃದ್ಧಿಸುವ ಪದ್ಧತಿಯೂ ಇಲ್ಲ. ಕೊಡವರು ಯಾವುದೇ ಮಿಶನರಿ ಧರ್ಮವಲ್ಲ. ಕೊಡವರಲ್ಲಿ ಧರ್ಮಗರು-ರಾಜಗುರು ಪದ್ಧತಿ ಇಲ್ಲ. ಸಂವಿಧಾನವೇ ನಮಗೆ ರಾಜಗುರು, ಧರ್ಮಗುರು. ಆದ್ದರಿಂದ ಕೊಡವರಿಗೆ ರಾಜ್ಯಾಂಗ ಖಾತ್ರಿ ದೊರಕಬೇಕು. ಆ ಮೂಲಕ ಪ್ರಪಂಚದ ಅತ್ಯಂತ ದೊಡ್ಡ ಜನಾಂಗೀಯ ವೈವಿದ್ಯತೆಯ ಮತ್ತು ಬೃಹತ್ ಸಂವಿಧಾನಿಕ ಪಾರ್ಲಿಮೆಂಟರಿ ಪಾರ್ಟಿಸಿಪೇಟರಿ ಪ್ರಜಾತಂತ್ರ ರಾಷ್ಟ್ರವಾದ ಭಾರತದಲ್ಲಿ ನಮ್ಮ ಅಸ್ತಿತ್ವ, ಹೆಗ್ಗುರುತು, ಅಸ್ಮಿತೆ ಉಳಿಯುವುದರೊಂದಿಗೆ ನಮ್ಮ ಜನ್ಮಭೂಮಿಯಲ್ಲಿ ನಮ್ಮ ಚಾರಿತ್ರಿಕ ನಿರಂತರತೆಗೆ ಕಾಯ್ದೆ ಬದ್ಧ ರಕ್ಷಣೆ ದೊರಕಬೇಕಾದರೆ ರಾಷ್ಟ್ರೀಯ ಜನಗಣತಿಯಲ್ಲಿ ಕೊಡವ ಎಂದು ದಾಖಲಿಸಬೇಕು. ಈ ಸಂಬಂಧ ಈಗಾಗಲೇ ಈ ರಾಷ್ಟ್ರದ ನುರಿತ ಸಂವಿಧಾನ ತಜ್ಞರು ಮಾನವ ಶಾಸ್ತç ವಿಜ್ಞಾನಿಗಳು, ಸಮಾಜ ವಿಜ್ಞಾನಿಗಳು ಮತ್ತು ರಾಜಕೀಯ ಶಾಸ್ತ್ರ ವಿಜ್ಞಾನಿಗಳ ಜೊತೆ ಸಂಪರ್ಕ ಮತ್ತು ಚರ್ಚೆಯಲ್ಲಿ ತೊಡಗಿಸಿಕೊಂಡಿದ್ದೇವೆ ಎಂದು ಇದೇ ಸಂದರ್ಭ ಎನ್.ಯು.ನಾಚಪ್ಪ ಹೇಳಿದರು. ಕ್ರಮ ವಲಸಿಗ ಬಾಂಗ್ಲಾದೇಶಿ ರೋಹಿಂಗ್ಯಗಳಿಗೆ ನೆಲೆ ಕಲ್ಪಿಸಲು ಅವರನ್ನು ಮತದಾರರ ಪಟ್ಟಿಯಲ್ಲಿ ಸೇರಿಸಿ ಮುಂದೆ ಜನಗಣತಿ ಸಂದರ್ಭ ಅವರನೆಲ್ಲ ಕೊಡವ ಎಂದು ದಾಖಲಿಸುವ ಹನ್ನಾರ ನಡೆದಿದೆ. ಮತಬ್ಯಾಂಕ್ ವೃದ್ಧಿ ಮಾಡಿಕೊಂಡು ದುಪ್ಪಟ್ಟು ಮತದಾರರ ಆಧಾರದಲ್ಲಿ ಕೊಡಗಿಗೆ ಪಾರ್ಲಿಮೆಂಟ್ ಸೀಟ್ ಬೇಕೆಂದು ಒತ್ತಾಯಿಸಲು ಎರಡು ರಾಷ್ಟಿçÃಯ ರಾಜಕೀಯ ಪಕ್ಷಗಳು ಲಜ್ಜೆಗೇಡಿ ಮತಭಿಕ್ಷೆ ಕಾರ್ಯದಲ್ಲಿ ತೊಡಗಿವೆ. ಬಾಂಗ್ಲಾದೇಶಿ ರೋಹಿಂಗ್ಯಗಳಿಗೆ ನೆಲೆ ಕಲ್ಪಿಸಲು ಕೊಡವರ ಭೂಮಿಗಳನ್ನು ಬಲವಂತ ತೆರವುಗೊಳಿಸಿ ಭೂಮಿ, ವಸತಿ ಹಂಚುವ ಒಳಸಂಚು ನಡೆಲಾಗುತ್ತಿದೆ. ಇದನ್ನು ವಿರೋಧಿಸಿದರೆ ಕೊಡಗಿನಲ್ಲಿ ಕಾರ್ಮಿಕರ ಕೊರತೆ ಎದುರಾಗುತ್ತದೆ ಎಂದು ನೆಪವೊಡ್ಡಲಾಗುತ್ತಿದೆ. ಮುಂದೆ ಅರಾಜಕತೆ ನಿರ್ಮಾಣವಾಗಿ ಸ್ಥಳೀಯರಿಗೆ ರಕ್ಷಣೆ ಇಲ್ಲದಾಗುವ ಸಾಧ್ಯತೆಗಳಿದೆ ಎಂದು ಎನ್.ಯು.ನಾಚಪ್ಪ ಆರೋಪಿಸಿದರು. ಕಾರ್ಮಿಕರ ಕೊರತೆ ಇದ್ದರೆ ಟರ್ಕಿ ದೇಶದ ವಲಸಿಗ ಕಾರ್ಮಿಕರನ್ನು ಪ್ಯಾರಿಸ್‌ನಲ್ಲಿ ಗೆಸ್ಟ್ ವರ್ಕರ್ ಎಂದು ಪರಿಗಣಿಸಲಾಗಿದೆ. ಇದೇ ಮಾದರಿಯನ್ನು ಕೊಡಗಿನಲ್ಲೂ ಅನುಸರಿಸಬೇಕು ಎಂದು ಒತ್ತಾಯಿಸಿದರು.
ಮೋದಿ-ಶೇಖ್ ಹಸಿನಾ ಒಪ್ಪಂದ 2015ರಲ್ಲಿ ಡಾಕಾದಲ್ಲಿ ನಡೆದಾಗ ಈ ಗೆಸ್ಟ್ ವರ್ಕರ್‌ನೀತಿ ಮುನ್ನಲೆಗೆ ಬಂದಿದೆ. ಅದೇ ರೀತಿ ಕೊಡಗಿನಲ್ಲಿ ಹೊರ ರಾಜ್ಯದ ಕಾರ್ಮಿಕರನ್ನು ಗೆಸ್ಟ್ ವರ್ಕರ್ ಪರ್ಮಿಟ್ ಮೇಲೆ ಆಹ್ವಾನಿಸಿ ಕೆಲಸ ಮುಗಿದ ನಂತರ ಅವರ ಊರುಗಳಿಗೆ, ದೇಶಗಳಿಗೆ ಹಿಂತಿರುಗಬೇಕು. ಪುನಃ ಕೃಷಿ ವರ್ಷ ಆರಂಭದಲ್ಲಿ ಅವರ ಗೆಸ್ಟ್ ವರ್ಕರ್ ಪರ್ಮಿಟ್ ನವೀಕರಿಸಬೇಕು. ಈ ನಿಯಮ ಜಾರಿಯಾಗಬೇಕು ಎಂದು ಸಲಹೆ ನೀಡಿದರು.
*ಬೇಡಿಕೆಗಳು* 2026-27ರ 16ನೇ ರಾಷ್ಟ್ರೀಯ ಜನಗಣತಿ ಮತ್ತು ಜಾತಿ ಗಣತಿಯಲ್ಲಿ ಕೊಡವರಿಗೆ ಪ್ರತ್ಯೇಕ ಕೋಡ್ ಹಾಗೂ ಕಾಲಮ್ ವ್ಯವಸ್ಥೆ ಮಾಡಬೇಕು. ಕೊಡವ ಲ್ಯಾಂಡ್ ಭೌಗೋಳಿಕ-ರಾಜಕೀಯ ಸ್ವಾಯತ್ತತೆ ನೀಡಬೇಕು. ಸಂವಿಧಾನದಡಿ ಕೊಡವರನ್ನು ಎಸ್‌ಟಿ ಪಟ್ಟಿಯಲ್ಲಿ ವರ್ಗೀಕರಿಸಬೇಕು. ಕೊಡವರ ಧಾರ್ಮಿಕ ಸಂಸ್ಕಾರ ತೋಕ್-ಗನ್ ಹಕ್ಕು ಚಿರಸ್ಥಾಯಿಯಾಗಿ ಉಳಿಸಬೇಕು, ಸಿಕ್ಕಿಂನ ಬೌದ್ಧ ಸನ್ಯಾಸಿಗಳಿಗೆ ನೀಡಿದ “ಸಂಘ” ಕ್ಷೇತ್ರದಂತೆಯೇ 2026 ರ ಮತಕ್ಷೇತ್ರ ಪುನರ್ ವಿಂಗಡಣೆ ನಿರ್ಣಯದ ಸಂದರ್ಭ ಸಂಸತ್ತು ಮತ್ತು ವಿಧಾನಸಭೆಯಲ್ಲಿ ಕೊಡವರಿಗೆ ಪ್ರತ್ಯೇಕ ವಿಶೇಷ ರಾಜಕೀಯ ಸ್ಥಾನಮಾನ ಕಲ್ಪಿಸಬೇಕು. ವಿಶ್ವರಾಷ್ಟç ಸಂಸ್ಥೆಯ ಅಂತರಾಷ್ಟಿçÃಯ ಕಾನೂನಿನಡಿ ಆದಿಮಸಂಜಾತ (ಆನಿಮಿಸ್ಟಿಕ್) ಕೊಡವ ಸಮುದಾಯವನ್ನು ಸಂರಕ್ಷಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಕುರಿತು ಸರಕಾರದ ಗಮನ ಸೆಳೆದರು. ಅಲ್ಲದೆ ಜಾತಿ ಜನಗಣತಿಯ ಮೂರೂ ಕಾಲಂಗಳಲ್ಲಿ ಕೊಡವರು-ಕೊಡವ ಎಂದು ನಮೂದಿಸುವಂತೆ ಮನವಿ ಮಾಡಿದರು.
*ಅ.21 ರಂದು ಅಮ್ಮತ್ತಿಯಲ್ಲಿ ಮಾನವ ಸರಪಳಿ* 16ನೇ ಕೊಡವ ಮಾನವ ಸರಪಳಿಯೂ ಅ.21 ರಂದು ಮಂಗಳವಾರ ಬೆಳಿಗ್ಗೆ 10.30 ಗಂಟೆಗೆ ಅಮ್ಮತ್ತಿಯಲ್ಲಿ ನಡೆಯಲಿದ್ದು, ಅ.27ರಂದು ಬೆಳಿಗ್ಗೆ 10.30 ಗಂಟೆಗೆ 17ನೇ ಮಾನವ ಸರಪಳಿ ಹುದಿಕೇರಿ (ಪುದಿಕೇರಿ)ಯಲ್ಲಿ ನಡೆಯಲಿದೆ ಎಂದು ಎನ್.ಯು.ನಾಚಪ್ಪ ತಿಳಿಸಿದರು. ಇಲ್ಲಿಯವರೆಗೆ ಬಿರುನಾಣಿ, ಟಿ.ಶೆಟ್ಟಿಗೇರಿ, ಕಡಂಗ, ಕಕ್ಕಬ್ಬೆ, ಬಾಳೆಲೆ, ಪೊನ್ನಂಪೇಟೆ, ಮಾದಾಪುರ, ಸುಂಟಿಕೊಪ್ಪ, ಸಿದ್ದಾಪುರ, ನಾಪೋಕ್, ಗೋಣಿಕೊಪ್ಪ, ವಿರಾಜಪೇಟೆ, ಮೂರ್ನಾಡು, ಚೇರಂಬಾಣೆ ಹಾಗೂ ಚೆಟ್ಟಳ್ಳಿಯಲ್ಲಿ ಕೊಡವ ಮಾನವ ಸರಪಳಿ ನಡೆಸಲಾಗಿದೆ ಎಂದರು. ಚೋಳಪಂಡ ಜ್ಯೋತಿ ನಾಣಯ್ಯ, ಪಳಂಗAಡ ಸುಮಿ ಅಪ್ಪಯ್ಯ, ಚೋಳಪಂಡ ತಾಜ ಕಾಳಯ್ಯ, ಪಳಂಗಂಡ ಗೀತಾ ಸುಬ್ರಮಣಿ, ಮುಳ್ಳಂಡ ಮಾಯಮ್ಮ, ಬಲ್ಲಾರಂಡ ಸ್ವಾತಿ ನಾಣಯ್ಯ, ಪಚ್ಚಾರಂಡ ಶಾಂತಿ ಪೊನ್ನಪ್ಪ, ಪುತ್ತರಿರ ಸೀತಮ್ಮ ಮೊಣ್ಣಪ್ಪ, ಅಡಿಕೇರ ಶಾಂತಿ, ಪುತ್ತರಿರ ಲತಾ ಜೋಯಪ್ಪ, ಪೊರಿಮಂಡ ದಿನಮಣಿ ಪೂವಯ್ಯ, ಚೋಳಪಂಡ ನಾಣಯ್ಯ, ಚೆಟ್ಟಳ್ಳಿ ಕೊಡವ ಸಮಾಜದ ಅಧ್ಯಕ್ಷ ಮುಳ್ಳಂಡ ರತ್ತು ಚೆಂಗಪ್ಪ, ಬಿದ್ದಂಡ ಅಚ್ಚಯ್ಯ, ಕೊಂಗೇಟಿರ ಅನಿಲ್ ಕುಟ್ಟಪ್ಪ, ಬಿದ್ದಂಡ ಮಾದಯ್ಯ, ಕಡೇಮಾಡ ವಿನ್ಸಿ ಅಪ್ಪಯ್ಯ, ಪುತ್ತರಿರ ಕರುಣ್ ಕಾಳಯ್ಯ, ಬಟ್ಟೀರ ವೇಣು ನಾಚಪ್ಪ, ಪುತ್ತರಿರ ಗಣೇಶ್ ಭೀಮಯ್ಯ, ಬಲ್ಲಾರಂಡ ಮೋಟಯ್ಯ, ಪತ್ತರಿರ ಕಾಶಿ ಸುಬ್ಬಯ್ಯ, ಬಟ್ಟೀರ ಕಿಶನ್, ಬಟ್ಟೀರ ರಕ್ಷ ಕಾಳಪ್ಪ, ಮುಳ್ಳಂಡ ಸನ್ನಿ ಅಯ್ಯಪ್ಪ, ಮುಳ್ಳಂಡ ಅಂಜನ್ ಮುತ್ತಪ್ಪ, ಮುಳ್ಳಂಡ ಕುಟ್ಟಪ್ಪ, ಪುತ್ತರಿರ ಜಯ ಬೊಳ್ಳಿಯಪ್ಪ, ಐಚೆಟ್ಟಿರ ಉಮೇಶ್ ಮಾಚಯ್ಯ, ಚೋಳಪಂಡ ಪೂವಯ್ಯ, ಕ್ಯಾಪ್ಟನ್ ಮುಳ್ಳಂಡ ತಿಮ್ಮಯ್ಯ, ಮುಳ್ಳಂಡ ಕಾಶಿ ದೇವಯ್ಯ, ಮಂದನೆರವAಡ ವಸಂತ ನಾಣಯ್ಯ, ಕೆಚ್ಚೆಟ್ಟಿರ ರಾಜ ಉತ್ತಯ್ಯ, ಪುತ್ತರಿರ ರಮೇಶ್ ಮುತ್ತಣ್ಣ, ಬಲ್ಲಾರಂಡ ದೇವ್ ದೇವಯ್ಯ, ಪುತ್ತರಿರ ಗಾಯನ್, ಬಟ್ಟಿರ ನೆಹರು ಮಂದಣ್ಣ, ಬದಲೆರ ಕೌಶಿ ಬೊಳ್ಳಿಯಪ್ಪ, ಬಲ್ಲಾರಂಡ ಉದಯ ಉತ್ತಪ್ಪ, ಪುತ್ತರಿರ ನಂಜಪ್ಪ, ಪುತ್ತರಿರ ರವಿ ಮಂದಣ್ಣ, ಬಲ್ಲಾರಂಡ ಅಚ್ಚಯ್ಯ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸಿಎನ್‌ಸಿ ಹೋರಾಟಕ್ಕೆ ಬೆಂಬಲ ಸೂಚಿಸಿದರು. ರಾಷ್ಟ್ರಗೀತೆ ಜನ-ಗಣ-ಮನ ಪಠಣದೊಂದಿಗೆ ಕಾರ್ಯಕ್ರಮ ಸಮಾರೋಪಗೊಂಡಿತು.









