
ಮಡಿಕೇರಿ ಅ.13 NEWS DESK : ಪೊನ್ನಂಪೇಟೆ ನಾಗರಿಕ ವೇದಿಕೆ ವತಿಯಿಂದ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರನ್ನು ಸನ್ಮಾನಿಸಲಾಯಿತು. ಪೊನ್ನಂಪೇಟೆ ಕೊಡವ ಸಮಾಜದಲ್ಲಿ ನಡೆದ ಕಾರ್ಯಕ್ರಮದ ವೇದಿಕೆಯ ಪ್ರಮುಖರು ಹಾಗೂ ಪದಾಧಿಕಾರಿಗಳು ಶಾಸಕರನ್ನು ಸನ್ಮಾನಿಸಿ, ಗೌರವಿಸಿದರು. ಈ ಸಂದರ್ಭ ಮಾತನಾಡಿದ ಶಾಸಕರು, ನಾಗರಿಕ ವೇದಿಕೆಯವರು ಈ ಭಾಗದ ಜನರ ಸಮಸ್ಯೆಗಳಿಗೆ ಸ್ಪಂದಿಸುತ್ತಾ ಜನರ ನಾಡಿಮಿಡಿತವನ್ನು ಅರಿತವರಾಗಿದ್ದಾರೆ. ಹಲವಾರು ಸಾಮಾಜಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಾಗರಿಕ ವೇದಿಕೆ ವತಿಯಿಂದ ಆಯೋಜನೆಗೊಳ್ಳುತ್ತಿರುವುದು ಸಂತಸದ ವಿಷಯ. ನಾಗರಿಕ ವೇದಿಕೆಯವರ ಈ ಪ್ರಯತ್ನ ಮುಂದೆಯೂ ಹೀಗೆ ಬೆಳೆದು ಯಶಸ್ಸು ಕಾಣಲಿ ಎಂದು ಶುಭ ಹಾರೈಸಿದರು. ಇದೇ ಸಂದರ್ಭ ಕರ್ನಾಟಕ ಕ್ರೀಡಾ ಪ್ರಾಧಿಕಾರದ ನೂತನ ಉಪಾಧ್ಯಕ್ಷ ಅರುಣ್ ಮಾಚಯ್ಯ ಅವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಶಾಸಕರ ಪತ್ನಿ ಕಾಂಚನ್ ಪೊನ್ನಣ್ಣ, ನಾಗರಿಕ ವೇದಿಕೆ ಅಧ್ಯಕ್ಷ ವಿಶ್ವನಾಥ್, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ತಿತೀರ ಧರ್ಮಜ ಉತ್ತಪ್ಪ, ಪ್ರಮುಖರಾದ ಚೆಪ್ಪುಡೀರ ಪೊನ್ನಪ್ಪ, ಮುಕಳೇರ ಸುರೇಶ್, ಎರ್ಮು ಹಾಜಿ, ಹಿರಿಯರಾದ ಮುಕಳೇರ ಕುಶಾಲಪ್ಪ, ಪೆಮ್ಮಂಡ ಪೊನ್ನಪ್ಪ, ಪ್ರಮುಖರಾದ ಕಾಳಿಮಾಡ ಪ್ರಶಾಂತ್, ಮುಕಟ್ಟೀರ ಸಂದೀಪ್, ಬಾನಂಡ ಪೃಥ್ವಿ ಹಾಗೂ ಪ್ರಮುಖರು ಕಾಕೇರ ರವಿ, ಗಿರೀಶ್, ದಿಲು, ಅಜ್ಜಿಕುಟ್ಟಿರ ಪೊನ್ನು, ಶಾಜಿ ಅಚ್ಚುತನ್, ಹ್ಯಾರೀಶ್ ಹಾಗೂ ಪ್ರಮುಖರು ಉಪಸ್ಥಿತರಿದ್ದರು.









