
ಮಡಿಕೇರಿ ಅ.13 NEWS DESK : ಕುಶಾಲನಗರ ಕೊಡಗು ಹೆಗ್ಗಡೆ ಕ್ಷೇಮಾಭಿವೃದ್ಧಿ ಸಂಘದ ವಾರ್ಷಿಕ ಮಾಹಸಭೆ ಮತ್ತು ಕೈಲ್‍ಪೊಳ್ದ್ ಒತ್ತರ್ಮೆಕೂಟವು ಸಂಭ್ರದಿಂದ ನಡೆಯಲಿದೆ. ಕುಶಾಲನಗರ ಕೇರಳ ಸಮಾಜದಲ್ಲಿ ನಡೆದ ಮಹಾಸಭೆಯಲ್ಲಿ ಸಮಾಜಕ್ಕೆ ನಿವೇಶನ ಖರೀದಿಸಿ ಆ ನಿವೇಶನದಲ್ಲಿ ಸುಸಜ್ಜಿತ ಸಮುದಾಯ ಭವನವನ್ನು ನಿರ್ಮಿಸಲು ಸಲಹೆಗಳು ಕೇಳಿಬಂದವು. ಕಾರ್ಯಕ್ರಮದಲ್ಲಿ ಶೈಕ್ಷಣಿಕ ಮತ್ತು ಕ್ರೀಡಾಕ್ಷೇತ್ರದಲ್ಲಿ ಸಾಧನೆ ಮಾಡಿದ ಜನಾಂಗಭಾಂದವನ್ನು ಗುರುತಿಸಿ ಸನ್ಮನಿಸಲಾಯಿತು. ಸಂಘದ ಅಧ್ಯಕ್ಷರಾದ ಚಳಿಯಂಡ ಯಶ್ವಥ್ ಅಚ್ಚಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮಡಿಕೇರಿ ಪ್ರಾದೇಶಿಕ ಸಾರಿಗೆ ನಿಗಮದ ಬ್ರೇಕ್ ಇನ್ಸ್ಪೆಕ್ಟರ್ ಗಳಾದ ಪೊಕ್ಕಳಿಚಂಡ ಮೋಹನ್ ಕುಮಾರ್, ಕುಶಾಲನಗರ ಜೆ.ಸಿ.ಐ ಅಧ್ಯಕ್ಷ ತಂಬಂಡ ತೇಜ ದಿನೇಶ್, ಸಂಘದ ಉಫಾಧ್ಯಕ್ಷರಾದ ಚಂಗಚಂಡ ಸುಬ್ರಮಣಿ, ಕಾರ್ಯದರ್ಶಿ ಪಂದಿಕಂಡ ವಿಠಲ್, ಮಂಡೇಡ ದೀಪಕ್, ಖಜಾಂಚಿ ಕೊಂಗೆಪ್ಪಂಡ ನಂಜಪ್ಪ, ನಿರ್ದೆಶಕರುಗಳಾದ ಪುದಿಯತಂಡ ಬೆಳ್ಳಿಯಪ್ಪ, ಪುದಿಯತಂಡ ಗಾಂಧಿ, ಕಾಟಿಕುಟ್ಟೀರ ಮೊಣ್ಣಪ್ಪ, ಮೇಲತಂಡ ಮಂಜುಳ, ಪೊಕ್ಕಳಿಚಂಡ ಲಲಿತ ಚಂಗಚಂಡ ನಂಜಪ್ಪ, ಮಂಡೇಯಂಡ ಪಳಂಗಪ್ಪ, ಪ್ರಮುಖರಾದ ಕೊಂಗೆಪ್ಪಂಡ ಶಶಿ ಬೀಮಯ್ಯ,ಪಡಞರಂಡ ಪ್ರಭು ಕುಮಾರ್, ಕೊಪ್ಪಡ ಪಳಂಗಪ್ಪ, ಪಾನಿಕುಟ್ಟೀರ ಕುಟ್ಟಪ್ಪ, ಕೊಕ್ಕೇರ ಜಗನಾಥ್, ತಂಬಂಡ ಮಂಜುನಾಥ್, ಕೊಂಗೆಪ್ಪಂಡ ರವಿ, ಚಳಿಯಂಡ ಕಮಲ, ಪಂದಿಕಂಡ ಇಶ್ವರ್ ಚಳಿಯಂಡ ಅಚ್ಚಯ್ಯ ಮುಂತಾದವರು ಹಾಜರಿದ್ದರು.









