ಮಡಿಕೇರಿ NEWS DESK ಅ.13 : ಚಾಲಕನ ನಿಯಂತ್ರಣ ತಪ್ಪಿದ ಗೂಡ್ಸ್ ವಾಹನವೊಂದು ಪಲ್ಟಿಯಾಗಿ ಇಬ್ಬರು ವ್ಯಕ್ತಿಗಳು ಹಾಗೂ ಮೂರು ಹಸುಗಳು ಗಾಯಗೊಂಡಿರುವ ಘಟನೆ ಸೋಮವಾರಪೇಟೆ ತಾಲ್ಲೂಕಿನ ಶನಿವಾರಸಂತೆ ರಸ್ತೆಯ ಕಾಗಡಿಕಟ್ಟೆ ಬಳಿ ನಡೆದಿದೆ. ಇಂದು ನಸುಕಿನಲ್ಲಿ ಈ ಘಟನೆ ನಡೆದಿದ್ದು, ಗೋವುಗಳ ಸಾಗಾಟ ಕುರಿತು ಹಿಂದೂ ಜಾಗರಣಾ ವೇದಿಕೆ ಆಕ್ಷೇಪ ವ್ಯಕ್ತಪಡಿಸಿದೆ. ಪಲ್ಟಿಯಾದ ವಾಹನದಲ್ಲಿ ಅಕ್ರಮವಾಗಿ ಗೋವು ಸಾಗಾಟವಾಗುತ್ತಿತ್ತು ಎಂದು ಆರೋಪಿಸಿರುವ ವೇದಿಕೆಯ ಜಿಲ್ಲಾ ಸಂಯೋಜಕ ಬೋಜೇಗೌಡ ಅವರು ಘಟನೆಯ ಬಗ್ಗೆ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ. ಕೊಡಗು ಜಿಲ್ಲೆಯಲ್ಲಿ ಗೋವುಗಳ ಸಾಗಾಟ, ಹತ್ಯೆ, ಗೋಮಾಂಸ ಮಾರಾಟಕ್ಕೆ ನಿಷೇಧವಿದ್ದರೂ ಇತ್ತೀಚಿನ ದಿನಗಳಲ್ಲಿ ಗೋವುಗಳ ಕಳ್ಳತನ, ಸಾಗಾಟ ಮತ್ತು ಹತ್ಯೆ ಪ್ರಕರಣಗಳು ಮಿತಿ ಮೀರುತ್ತಿದೆ. ಪೊಲೀಸ್ ಇಲಾಖೆ ಇದನ್ನು ನಿಯಂತ್ರಿಸದಿದ್ದಲ್ಲಿ ಹಿಂದೂ ಸಂಘಟನೆಗಳು ಬೃಹತ್ ಹೋರಾಟವನ್ನು ರೂಪಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.










