Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮೂರ್ನಾಡಿನಲ್ಲಿ 102ನೇ ವಾರ್ಷಿಕ ಕೈಲ್ ಪೊಳ್ದ್ ಆಚರಣೆ : ವಿವಿಧ ಆಟೋಟಗಳು*
  • *ಸೆ.5 ರಂದು ಶಿಕ್ಷಕರ ದಿನಾಚರಣೆ*
  • *ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ : ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ*
  • *ಟೈಲರಿಂಗ್ ಯಂತ್ರೋಪಕರಣ ವಿತರಣೆ*
  • *ಹೊನ್ನಮ್ಮನ ಕೆರೆ ಆವರಣದಲ್ಲಿ ಸ್ವಚ್ಛತಾ ಶ್ರಮದಾನ*
  • *ಪೊಲೀಸ್ ಪೇದೆ ಹುದ್ದೆ :  ನೇರ ನೇಮಕಾತಿ ಪರೀಕ್ಷೆ ಸುಸೂತ್ರವಾಗಿ ನಡೆಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*   
  • *31 ನೇ ವರ್ಷದ ಕೈಲ್ ಪೊವ್ದ್ ನ್ನು ಸಂಭ್ರಮದಿಂದ ಆಚರಿಸಿದ CNC*
  • *ಮಡಿಕೇರಿಯಲ್ಲಿ ಬೀದಿನಾಯಿ ಉಪಟಳ ತಡೆಗೆ ಕ್ರಮ*
  • *ಕೊಡಗು ವಿದ್ಯಾಲಯದಲ್ಲಿ ಈದ್ ಮಿಲಾದ್ ಆಚರಣೆ*
  • *ಸುಂಟಿಕೊಪ್ಪ : ಯುವಶಕ್ತಿ ದಾರಿ ತಪ್ಪದಂತೆ ಸಮಾಜ ಬೆನ್ನೆಲುಬಾಗಿ ನಿಲ್ಲಬೇಕು: ಬಿ.ಸಿ. ದಿನೇಶ್*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಸ್ವಚ್ಚ ಕೊಡಗು ಸುಂದರ ಕೊಡಗು ಅಭಿಯಾನಕ್ಕೆ ಅತ್ಯುತ್ತಮ ಸ್ಪಂದನೆ : ಸಾವ೯ಜನಿಕರು ಸ್ವಯಂ ಪ್ರೇರಣೆಯಿಂದ ಪಾಲ್ಗೊಳ್ಳಲು ಕರೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಸ್ವಚ್ಚ ಕೊಡಗು ಸುಂದರ ಕೊಡಗು ಅಭಿಯಾನಕ್ಕೆ ಅತ್ಯುತ್ತಮ ಸ್ಪಂದನೆ : ಸಾವ೯ಜನಿಕರು ಸ್ವಯಂ ಪ್ರೇರಣೆಯಿಂದ ಪಾಲ್ಗೊಳ್ಳಲು ಕರೆ*

ಅಕ್ಟೋಬರ್ 13, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಅ.13 NEWS DESK : ಸ್ವಚ್ಚ ಕೊಡಗು – ಸುಂದರ ಕೊಡಗು ಅಭಿಯಾನಕ್ಕೆ ಜಿಲ್ಲೆಯಾದ್ಯಂತ ಅತ್ಯುತ್ತಮ ಸ್ಪಂದನ ದೊರಕಿದ್ದು, ಅ. 15 ರಂದು ಸ್ವಚ್ಚತೆ ಸಂಬಂಧಿತ ಬೃಹತ್ ಅಭಿಯಾನ ನಡೆಯಲಿದೆ ಎಂದು ಕೂಗ್೯ ಹೋಟೇಲ್, ರೆಸಾಟ್೯ ಅಸೋಸಿಯೇಷನ್ ಅಧ್ಯಕ್ಷ ಕುಂಡ್ಯೋಳಂಡ ದಿನೇಶ್ ಕಾಯ೯ಪ್ಪ ತಿಳಿಸಿದ್ದಾರೆ. ಕೂಗ್೯ ಹೋಟೇಲ್, ರೆಸಾಟ್೯ ಅಸೋಸಿಯೇಷನ್ ನೇತೃತ್ವದಲ್ಲಿ ಕೊಡಗು ಜಿಲ್ಲಾಡಳಿತ, ಕೊಡಗು ಜಿಲ್ಲಾ ಪಂಚಾಯತ್, ಕೊಡಗು ಚೇಂಬರ್ ಆಫ್ ಕಾಮಸ್೯, ಕೊಡಗು ಹೋಂಸ್ಟೇ ಅಸೋಸಿಯೇಷನ್, ರೋಟರಿ , ಲಯನ್ಸ್ ಸಂಸ್ಥೆಗಳು, ಪ್ರವಾಸೋದ್ಯಮ ಇಲಾಖೆ, ರೆಡ್ ಕ್ರಾಸ್, ಸ್ಥಳೀಯ ಸಂಘ ಸಂಸ್ಥೆಗಳು, ಹಲವಾರು ಶಿಕ್ಷಣ ಸಂಸ್ಥೆಗಳು, ವಿವಿಧ ಸಂಘಟನೆಗಳು ಈ ಬೖಹತ್ ಅಭಿಯಾನಕ್ಕೆ ಕೈ ಜೋಡಿಸಿದೆ. ಜಿಲ್ಲೆಯಾದ್ಯಂತಲಿನಿಂದ ಅಭಿಯಾನಕ್ಕೆ ಸಹಕಾರ ನೀಡುವುದಾಗಿ ನಿರೀಕ್ಷೆಗೂ ಮೀರಿದ ಸ್ಪಂದನೆ ಸಂಘಟನೆಗಳ ಪ್ರಮುಖರಿಂದ ದೊರಕಿದೆ. ಅ.15 ರಂದು ಬುಧವಾರ ಸ್ವಚ್ಚ ಕೊಡಗು ಸುಂದರ ಕೊಡಗು ಅಭಿಯಾನಕ್ಕೆ ಜಿಲ್ಲಾ ಕೇಂದ್ರವಾದ ಮಡಿಕೇರಿಯ ಜನರಲ್ ತಿಮ್ಮಯ್ಯ ವೃತ್ತದ  ಬಳಿ ಬೆಳಗ್ಗೆ 8 ಗಂಟೆಗೆ ಶಾಸಕ ಡಾ.ಮಂಥರ್ ಗೌಡ, ಜಿಲ್ಲಾಧಿಕಾರಿ ವೆಂಕಟರಾಜಾ, ಕೊಡಗು ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಜಿ.ಪಂ. ಮುಖ್ಯ ಕಾಯ೯ನಿವ೯ಹಣಾಧಿಕಾರಿ ಆನಂದ್ ಪ್ರಕಾಶ್ ಮೀನಾ ಸೇರಿದಂತೆ ಅನೇಕ ಗಣ್ಯರು ಚಾಲನೆ ನೀಡಲಿದ್ದಾರೆ. ಗೋಣಿಕೊಪ್ಪಲಿನಲ್ಲಿ ವಿಧಾನಪರಿಷತ್ ಸದಸ್ಯ ಎಂ.ಪಿ. ಸುಜಾಕುಶಾಲಪ್ಪ, ಕುಶಾಲನಗದಲ್ಲಿ ಜಿಲ್ಲಾ ಚೇಂಬರ್ ಆಫ್ ಕಾಮಸ್೯ ಅಧ್ಯಕ್ಷ ಬಿ.ಆರ್. ನಾಗೇಂದ್ರ ಪ್ರಸಾದ್, ವೀರಾಜಪೇಟೆಯಲ್ಲಿ ಸಕಾ೯ರಿ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಸಮಿತಿ ಜಿಲ್ಲಾಧ್ಯಕ್ಷ ತೀತೀರ ಧಮ೯ಜ ಉತ್ತಪ್ಪ, ಸೋಮವಾರಪೇಟೆಯಲ್ಲಿ ತಾಲೂಕು ಹೋಂಸ್ಟೇ ಅಸೋಸಿಯೇಷನ್ ಅಧ್ಯಕ್ಷ ರೋಹಿತ್ ಮತ್ತು ಹೋಟೇಲ್, ರೆಸಾಟ್೯ ಅಸೋಸಿಯೇಷನ್ ಉಪಾಧ್ಯಕ್ಷ ಬಿ.ಎಸ್. ಸುಂದರ್ ಅಭಿಯಾನಕ್ಕೆ ಚಾಲನೆ ನೀಡಲಿದ್ದಾರೆ. ಇದೇ ವೇಳೆ ಜಿಲ್ಲೆಯಾದ್ಯಂತ ಸ್ವಚ್ಚ ಕೊಡಗು ಹೆಸರಿನ ಸ್ವಚ್ಚತಾ ಕಾಯ೯ ಪ್ರಾರಂಭವಾಗಲಿದೆ. ಆಯಾ ತಾಲೂಕು ಕೇಂದ್ರಗಳು, ಸ್ಥಳೀಯ ಸಂಸ್ಥೆಗಳು, ಗ್ರಾಮಪಂಚಾಯತ್ ಗಳಲ್ಲಿ ಸ್ಥಳೀಯ ಪ್ರತಿನಿಧಿಗಳು, ಸಂಘ ಸಂಸ್ಥೆಗಳ ಪ್ರಮುಖರು ಈ ಅಭಿಯಾನಕ್ಕೆ ಚಾಲನೆ ನೀಡಲಿದ್ದಾರೆ. ಕೊಡಗು ವಿವಿಗೆ ಸೇರಿದ 23 ಕಾಲೇಜುಗಳ 1500 ಎನ್ ಎಸ್ ಎಸ್ ವಿದ್ಯಾಥಿ೯ಗಳೂ ತಮ್ಮ ಕಾಲೇಜು ವ್ಯಾಪ್ತಿಯ ಪ್ರದೇಶಗಳಲ್ಲಿ ಸ್ವಚ್ಚತಾ ಕಾಯ೯ ನಡೆಸಲಿದ್ದಾರೆ. ಅಂತೆಯೇ ಜಿಲ್ಲೆಯ ಶಾಲಾ, ಕಾಲೇಜು ವಿದ್ಯಾಥಿ೯ಗಳು ತಮ್ಮ ಶಿಕ್ಷಣ ಸಂಸ್ಥೆಗಳ ವ್ಯಾಪ್ತಿಯಲ್ಲಿ ಸ್ವಚ್ಚತಾ ಕಾಯ೯ಕೈಗೊಳ್ಳಬಹುದಾಗಿದೆ. ಕೆಡಿಸಿಸಿ ಬ್ಯಾಂಕ್ ಸೇರಿದಂತೆ ಜಿಲ್ಲೆಯ ಎಲ್ಲಾ ಬ್ಯಾಂಕ್ ಗಳ ಅಧಿಕಾರಿ, ಸಿಬ್ಬಂದಿಗಳೂ ಸಹಕಾರ ನೀಡುತ್ತಿದ್ದಾರೆ. ವತ೯ಕರು ತಮ್ಮ ಅಂಗಡಿ ವ್ಯಾಪ್ತಿಯಲ್ಲಿ ಸ್ವಚ್ಚತೆ ಕೈಗೊಳ್ಳುವ ಮೂಲಕ ಸ್ವಚ್ಚತಾ ಆಂದೋಲನದಲ್ಲಿ ಪಾಲ್ಗೊಳ್ಳಬೇಕೆಂದು ದಿನೇಶ್ ಕೋರಿದ್ದಾರೆ. ಜಿಲ್ಲೆಯ ಎಲ್ಲಾ ಸಂಘಸಂಸ್ಥೆಗಳು, ಸಾವ೯ಜನಿಕರು ಸ್ವಯಂ ಪ್ರೇರಣೆಯಿಂದ ಈ ಸ್ವಚ್ಚತಾ ಅಭಿಯಾನದಲ್ಲಿ ಪಾಲ್ಗೊಳ್ಳುವಂತೆಯೂ ದಿನೇಶ್ ಮನವಿ ಮಾಡಿದ್ದಾರೆ. ಬುಧವಾರದಂದು ಸಂಗ್ರಹವಾದ ತ್ಯಾಜ್ಯವನ್ನು ಆಯಾ ಪಂಚಾಯತ್, ಸ್ಥಳೀಯ ಸಂಸ್ಥೆಗಳ ಅಧಿಕಾರಿ, ಸಿಬ್ಬಂದಿಗಳ ಸಹಕಾರದೊಂದಿಗೆ, ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ವತಿಯಿಂದ ಸಂಗ್ರಹಿಸಿ, ಶಾಸಕರಾದ ಎ.ಎಸ್. ಪೊನ್ನಣ್ಣ ಸೂಚನೆಯಂತೆ ಮೈಸೂರಿನ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಸಾಗಿಸಲಾಗುತ್ತದ ಎಂದೂ ದಿನೇಶ್ ಮಾಹಿತಿ ನೀಡಿದ್ದಾರೆ. ಸ್ವಚ್ಚತಾ ಅಭಿಯಾನದಲ್ಲಿ ಪಾಲ್ಗೊಳ್ಳುವ ಪ್ರತೀಯೋವ೯ರು ವೈಯಕ್ತಿಕ ಸುರಕ್ಷತೆ ಬಗ್ಗೆ ಗಮನ ನೀಡಬೇಕು. ರಸ್ತೆಯ ಇಕ್ಕೆಲಗಳಲ್ಲಿ ಸ್ವಚ್ಚತಾ ಕಾಯ೯ ಕೈಗೊಳ್ಳವಾಗ ರಸ್ತೆಯಲ್ಲಿ ಸಾಗುವ ವಾಹನಗಳ ಬಗ್ಗೆ ಗಮನ ನೀಡಬೇಕು, ಗಾಜು ಸೇರಿದಂತೆ ಅಪಾಯಕಾರಿ ವಸ್ತುಗಳ ಸಂಗ್ರಹಣೆಯಲ್ಲಿ ವೈಯಕ್ತಿಕ ಎಚ್ಚರಿಕೆ ವಹಿಸಿರಬೇಕು ಎಂದೂ ದಿನೇಶ್ ಮನವಿ ಮಾಡಿದ್ದಾರೆ.  ಅ.15 ರಂದು ಸಕಾ೯ರಿ ಕಛೇರಿಗಳ ಅದಿಕಾರಿ, ಸಿಬ್ಬಂದಿಗಳು ಮತ್ತು ಖಾಸಗಿ ಶಾಲಾ ಶಿಕ್ಷಕ, ಬೋದಕೇತರ ವಗ೯, ಬ್ಯಾಂಕ್ ಸಿಬ್ಬಂದಿಗಳು, ಮತ್ತು ವಿದ್ಯಾಥಿ೯ಗಳು ಬೆಳಗ್ಗೆ 10 ಗಂಟೆಯಿಂದ 11 ಗಂಟೆಯವರೆಗೆ ಸ್ವಚ್ಚತಾ ಅಭಿಯಾನದಲ್ಲಿ ಪಾಲ್ಗೊಳ್ಳಬಹುದಾಗಿದೆ ಎಂದು ಕೂಗ್೯ ಹೋಟೇಲ್, ರೆಸಾಟ್೯ ಅಸೋಸಿಯೇಷನ್ ಪ್ರಧಾನ ಕಾಯ೯ದಶಿ೯ ನಸೀರ್ ಅಹಮ್ಮದ್ ತಿಳಿಸಿದ್ದಾರೆ.  ಕೊಡಗು ಜಿಲ್ಲೆಯ ಪ್ರಮುಖ ರಸ್ತೆಗಳು, ಹೆದ್ದಾರಿಯನ್ನೇ ಮುಖ್ಯವಾಗಿರಿಸಿಕೊಂಡು ಈ ಸ್ವಚ್ಚತಾ ಅಭಿಯಾನ ಕೈಗೊಳ್ಳಲಾಗಿದೆ. ಮುಂದಿನ ದಿನಗಳಲ್ಲಿಯೂ ಕೊಡಗು ಸ್ವಚ್ಚತೆ ಸಂಬಂಧಿತ ಮತ್ತಷ್ಟು ಕಾಯ೯ಕ್ರಮ ಆಯೋಜಿಸುವ ಉದ್ದೇಶವಿದೆ ಎಂದೂ ನಾಸೀರ್ ಅಹಮ್ಮದ್ ತಿಳಿಸಿದರು.  ಕೊಡಗಿನ ಸ್ವಚ್ಚತೆಯು ಪ್ರತೀಯೋವ೯ರಿಗೂ ಸಂಬಂಧಿಸಿದ್ದಾಗಿದೆ. ಈ ನಿಟ್ಟಿನಲ್ಲಿ ಕೂಗ್೯ ಹೋಟೇಲ್, ರೆಸಾಟ್೯ ಅಸೋಸಿಯೇಷನ್ ಸ್ವಚ್ಚ ಕೊಡಗು – ಸುಂದರ ಕೊಡಗು ಅಭಿಯಾನ ಹಮ್ಮಿಕೊಂಡು ಸ್ವಚ್ಚತೆ ಸಂಬಂಧಿತ ಜಾಗ್ರತಿ ಮೂಡಿಸುವ ಪ್ರಯತ್ನ ಮಾಡುತ್ತಿದೆ ಎಂದು ಅವರು ತಿಳಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮೂರ್ನಾಡಿನಲ್ಲಿ 102ನೇ ವಾರ್ಷಿಕ ಕೈಲ್ ಪೊಳ್ದ್ ಆಚರಣೆ : ವಿವಿಧ ಆಟೋಟಗಳು*

ಸೆಪ್ಟೆಂಬರ್ 1, 2026

*ಸೆ.5 ರಂದು ಶಿಕ್ಷಕರ ದಿನಾಚರಣೆ*

ಸೆಪ್ಟೆಂಬರ್ 1, 2026

*ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ : ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ*

ಸೆಪ್ಟೆಂಬರ್ 1, 2026

*ಸೆ.5 ರಂದು ಶಿಕ್ಷಕರ ದಿನಾಚರಣೆ*

ಸೆಪ್ಟೆಂಬರ್ 1, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಸೆ.1 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಶಿಕ್ಷಕರ…

*ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ : ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ*

ಸೆಪ್ಟೆಂಬರ್ 1, 2026

*ಟೈಲರಿಂಗ್ ಯಂತ್ರೋಪಕರಣ ವಿತರಣೆ*

ಸೆಪ್ಟೆಂಬರ್ 1, 2026

*ಹೊನ್ನಮ್ಮನ ಕೆರೆ ಆವರಣದಲ್ಲಿ ಸ್ವಚ್ಛತಾ ಶ್ರಮದಾನ*

ಸೆಪ್ಟೆಂಬರ್ 1, 2026

*ಪೊಲೀಸ್ ಪೇದೆ ಹುದ್ದೆ :  ನೇರ ನೇಮಕಾತಿ ಪರೀಕ್ಷೆ ಸುಸೂತ್ರವಾಗಿ ನಡೆಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*   

ಸೆಪ್ಟೆಂಬರ್ 1, 2026

*31 ನೇ ವರ್ಷದ ಕೈಲ್ ಪೊವ್ದ್ ನ್ನು ಸಂಭ್ರಮದಿಂದ ಆಚರಿಸಿದ CNC*

ಸೆಪ್ಟೆಂಬರ್ 1, 2026

*ಮಡಿಕೇರಿಯಲ್ಲಿ ಬೀದಿನಾಯಿ ಉಪಟಳ ತಡೆಗೆ ಕ್ರಮ*

ಸೆಪ್ಟೆಂಬರ್ 1, 2026

*ಕೊಡಗು ವಿದ್ಯಾಲಯದಲ್ಲಿ ಈದ್ ಮಿಲಾದ್ ಆಚರಣೆ*

ಸೆಪ್ಟೆಂಬರ್ 1, 2026

*ಸುಂಟಿಕೊಪ್ಪ : ಯುವಶಕ್ತಿ ದಾರಿ ತಪ್ಪದಂತೆ ಸಮಾಜ ಬೆನ್ನೆಲುಬಾಗಿ ನಿಲ್ಲಬೇಕು: ಬಿ.ಸಿ. ದಿನೇಶ್*

ಸೆಪ್ಟೆಂಬರ್ 1, 2026

*ಸಣ್ಣ ಪ್ರಮಾಣದ ಬೆಟ್ಟ ಕುಸಿತ*

ಸೆಪ್ಟೆಂಬರ್ 1, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.