ಮಡಿಕೇರಿ ಅ.14 NEWS DESK : ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ನೇಮಕಾತಿಯ ಪರಿಸ್ಕೃತ ಮಾರ್ಗಸೂಚಿಯಂತೆ ಜಿಲ್ಲಾಧಿಕಾರಿ ಅವರ ಅನುಮೋದನೆಯಂತೆ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನಲ್ಲಿ ಖಾಲಿ ಇರುವ 15 ಅಂಗನವಾಡಿ ಕಾರ್ಯಕರ್ತೆಯರ ಹುದ್ದೆ ಹಾಗೂ 63 ಅಂಗನವಾಡಿ ಸಹಾಯಕಿಯರ ಗೌರವ ಸೇವೆಯ ಹುದ್ದೆಗಳನ್ನು ಭರ್ತಿ ಮಾಡಲು ಆನ್‍ಲೈನ್ ವೆಬ್‍ಸೈಟ್ ವಿಳಾಸ https://karnemakaone.kar.nic.in/abcd/ ನಲ್ಲಿ ಆನ್‍ಲೈನ್ ಮುಖಾಂತರ ಅರ್ಹ ಹೆಣ್ಣು ಮಕ್ಕಳು ಹಾಗೂ ಮಹಿಳಾ ಲಿಂಗತ್ವ ಅಲ್ಪಸಂಖ್ಯಾತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ನವೆಂಬರ್, 13 ರ ಸಂಜೆ 5.30 ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ. (ಹೆಚ್ಚಿನ ಮಾಹಿತಿಗೆ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ಸೋಮವಾರಪೇಟೆ ಕಚೇರಿ ದೂರವಾಣಿ ಸಂಖ್ಯೆ 08276-200023 ಅಥವಾ 08276-282281 ಕ್ಕೆ ಕಚೇರಿ ಸಮಯದಲ್ಲಿ ಸಂಪರ್ಕಿಸುವುದು. ಅರ್ಜಿ ಸಲ್ಲಿಸಲು 4 ಹಂತಗಳಿದ್ದು ಅಪೂರ್ಣ ಮಾಹಿತಿಯನ್ನೊಳಗೊಂಡ ಅರ್ಜಿಯನ್ನು ತಿರಸ್ಕರಿಸಲಾಗುವುದು.
ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳಿಗೆ ಆನ್‍ಲೈನ್ ನಲ್ಲಿ ಸಲ್ಲಿಸಿದ ಅರ್ಜಿಗಳನ್ನು ಮಾತ್ರ ಪರಿಗಣಿಸಲಾಗುವುದು. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮೊದಲು ನೇಮಕಾತಿಯ ಮಾರ್ಗಸೂಚಿ/ ನಿಬಂಧನೆಗಳನ್ನು ಸ್ಪಷ್ಟವಾಗಿ ಓದಿಕೊಂಡು ನೀಡಲಾಗಿರುವ ಸೂಚನೆಯಂತೆ ಅರ್ಜಿ ಭರ್ತಿಮಾಡಿ ಅವಶ್ಯಕ ದೃಢೀಕೃತ ದಾಖಲೆಗಳನ್ನು ಡಿಜಿ ಲಾಕರ್ ಬಳಸಿ ಸ್ಕ್ಯಾನ್ ಮಾಡಿ ಅರ್ಜಿ ಸಲ್ಲಿಸುವುದು. ಆನ್‍ಲೈನ್ ಮೂಲಕವೇ ಎಲ್ಲಾ ಅಗತ್ಯ ದಾಖಲಾತಿಗಳನ್ನು ಸಲ್ಲಿಸುವುದು. ನಂತರ ಸಲ್ಲಿಸುವ ದಾಖಲಾತಿಗಳನ್ನು ಪರಿಗಣಿಸಲಾಗುವುದಿಲ್ಲ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಇದೇ ನವೆಂಬರ್ 13 ಕ್ಕೆ 19 ವರ್ಷ ಪೂರ್ಣಗೊಂಡಿರಬೇಕು ಹಾಗೂ 35 ವರ್ಷ ಮೀರಿರಬಾರದು ಹಾಗೂ ವಿಕಲಚೇತನರಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆ ಇರುತ್ತದೆ. ಅಭ್ಯರ್ಥಿಯು ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಕನಿಷ್ಟ ವಿದ್ಯಾರ್ಹತೆ ಪಿ.ಯು.ಸಿ. ತೇರ್ಗಡೆ ಹೊಂದಿರಬೇಕು. ಅಭ್ಯರ್ಥಿಯು ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಎಸ್ಸೆಸ್ಸೆಲ್ಸಿ ಯಲ್ಲಿ ಕನ್ನಡ ಭಾಷೆಯನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯನ್ನಾಗಿ ಓದಿರಬೇಕು. ಅಭ್ಯರ್ಥಿಯು ಅಂಗನವಾಡಿ ಸಹಾಯಕಿ ಹುದ್ದೆಗೆ ಕನಿಷ್ಟ ವಿದ್ಯಾರ್ಹತೆ ಎಸ್‍ಎಸ್‍ಎಲ್‍ಸಿ ಅಥವಾ ತತ್ಸಮಾನ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು. ವಿವರವಾದ ಖಾಲಿ ಹುದ್ದೆಗಳ ಪಟ್ಟಿಯನ್ನು ಶಿಶು ಅಭಿವೃದ್ಧಿ ಯೋಜನಾ ಕಚೇರಿ, ಸೋಮವಾರಪೇಟೆ ಹಾಗೂ ಗ್ರಾಮ ಪಂಚಾಯಿತಿಗಳ ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದೆ ಎಂದು ಸೋಮವಾರಪೇಟೆ ಸಿಡಿಪಿಒ ತಿಳಿಸಿದ್ದಾರೆ.










