Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?
  • *ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*
  • ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!
  • *ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*
  • *ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*
  • *ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*
  • *ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*
  • *ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*
  • *ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*
  • *ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ತಲಕಾವೇರಿ ಜಾತ್ರೋತ್ಸವಕ್ಕೆ ಚಾಲನೆ*
ಇತ್ತೀಚಿನ ಸುದ್ದಿಗಳು

*ತಲಕಾವೇರಿ ಜಾತ್ರೋತ್ಸವಕ್ಕೆ ಚಾಲನೆ*

October 15, 20251 Min Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ನಾಪೋಕ್ಲು ಅ.15 NEWS DESK : ತಲಕಾವೇರಿ ಜಾತ್ರೋತ್ಸವಕ್ಕೆ ಸಂಬಂಧಿಸಿದಂತೆ ನಡೆಯುವ ವಿವಿಧ ಕಾರ್ಯಕ್ರಮಗಳಿಗೆ ಯಾವುದೇ ವಿಘ್ನ ಬಾರದಿರಲಿ ಎಂದು ಪ್ರಾರ್ಥಿಸಿ, ಭಾಗಮಂಡಲದ ಶ್ರೀ ಭಗಂಡೇಶ್ವರ ದೇವಾಲಯದಲ್ಲಿ ನಂದಾ ದೀಪವನ್ನು ಉರಿಸಿ ಚಾಲನೆ ನೀಡಲಾಯಿತು. ಸೆ.26 ರಿಂದ ಆರಂಭಗೊಂಡ ವಿವಿಧ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಅಜ್ಞಾ ಮುಹೂರ್ತ, ಪತ್ತಾಯಕ್ಕೆ  ಅಕ್ಕಿ ಹಾಕುವುದು ಸೇರಿದಂತೆ ವಿವಿಧ ಕಾರ್ಯಕ್ರಮಗಳು ನಡೆಯಿತು. ಮಂಗಳವಾರ ಅಕ್ಷಯಪಾತ್ರೆಗೆ ಅಕ್ಕಿ ಹಾಕುವ ಕಾರ್ಯಕ್ರಮ ಜರುಗಿತು. ಅರ್ಚಕ ರವಿ ಭಟ್  ನೇತೃತ್ವದಲ್ಲಿ   ದೇವಾಲಯದಲ್ಲಿ ವಿಶೇಷ ಪೂಜೆ ನಡೆಸಿ, ಬಳಿಕ ಅಪರ ಜಿಲ್ಲಾಧಿಕಾರಿ ಐಶ್ವರ್ಯ ಹಾಗೂ ತಲಕಾವೇರಿ ಕ್ಷೇತ್ರದ ತಕ್ಕರಾದ ಕೋಡಿ ಮೋಟಯ್ಯ ನಂದಾದೀಪವನ್ನು ಹಚ್ಚಿಸಿದರು. ಬೆಳಿಗ್ಗೆ 11:45ಕ್ಕೆ ಧನುರ್ ಲಗ್ನದಲ್ಲಿ ಭಾಗಮಂಡಲ ತಕ್ಕರಾದ ಬಳ್ಳಡ್ಕ ಅಪ್ಪಾಜಿ ಅಕ್ಷಯ ಪಾತ್ರೆಗೆ ಅಕ್ಕಿಯನ್ನು ಸುರಿದು ಚಾಲನೆ ನೀಡಿದರು. ಇಂದಿನಿಂದ ಒಂದು ತಿಂಗಳ ಕಾಲ ಕಿರು ಸಂಕ್ರಮಣದವರೆಗೆ ನಂದಾದೀಪ ತುಪ್ಪದಿಂದ ಉರಿಯಲಿದೆ. ತುಲಾ ಮಾಸದಲ್ಲಿ ಜಾತ್ರೆಗೆ ಯಾವುದೇ ವಿಘ್ನ ಬಾರದಿರಲಿ ಎಂಬ ನಂಬಿಕೆಯಿಂದ ನಂದಾ ದೀಪವನ್ನು ಉರಿಸಲಾಗುತ್ತಿದೆ. ಬಳಿಕ ಮಹಿಳೆಯರು ಭಕ್ತರು ಪಡಿಯಕ್ಕಿಯನ್ನು ಮನೆಗಳಿಗೆ ಕೊಂಡೊಯ್ದರು. ಅಕ್ಷಯಪಾತ್ರೆಯಿಂದ ಕೊಂಡೊಯ್ದ  ಅಕ್ಕಿಯಿಂದ ಸಂಪತ್ತು ವೃದ್ದಿಸಲಿದೆ ಎಂಬ ನಂಬಿಕೆ ಭಕ್ತರದ್ದು. ಸಂಜೆ 4:45 ಕ್ಕೆ ಮೀನಾ ಲಗ್ನದಲ್ಲಿ ಕಾಣಿಕೆ ಡಬ್ಬಿಯನ್ನು ಇರಿಸಲಾಯಿತು. ಸಾಂಪ್ರದಾಯಿಕ  ಆಚರಣೆಯಲ್ಲಿ ಭಾಗಮಂಡಲ ತಕ್ಕರಾದ ಬಳ್ಳಡ್ಕ ಅಪ್ಪಾಜಿ, ತಲಕಾವೇರಿ ತಕ್ಕರಾದ ಕೋಡಿ ಮೋಟಯ್ಯ, ಕಾರ್ಯನಿರ್ವಹಣಾಧಿಕಾರಿ ಚಂದ್ರಶೇಖರ್,  ಕೊಡಗು  ಗೌಡ ಸಮಾಜಗಳ ಒಕ್ಕೂಟದ ಅಧ್ಯಕ್ಷ ಆನಂದ್ ಕರಂದ್ಲಾಜೆ, ಕಾರ್ಯದರ್ಶಿ ಪೇರಿಯನ ಉದಯ ಅಕಾಡೆಮಿ ಸದಸ್ಯರಾದ ಕುದುಪಜೆ ಪ್ರಕಾಶ್, ಪಟ್ಟಮಾಡ ಗಿರಿ, ಮಣವಟ್ಟಿರ ಪಾಪು, ಅಪಾಡಂಡ ಕೌಂಡಿನ್ಯ, ಬಡ್ಡಿರ ನಂದ, ದೇವಂಗೋಡಿ ಹರ್ಷ, ಭಾಗಮಂಡಲ ನಾಡು ಗೌಡ ಯುವ ಒಕ್ಕೂಟದ ಅಧ್ಯಕ್ಷರಾದ ಕುದುಕುಳಿ ಕಿಶೋರ್ ಸ್ಥಳೀಯ ಬಳ್ಳಡ್ಕ ಕುಟುಂಬಸ್ಥರು ಸೇರಿದಂತೆ  ಭಕ್ತರು ಪಾಲ್ಗೊಂಡಿದ್ದರು.

ವರದಿ : ದುಗ್ಗಳ ಸದಾನಂದ.

 

 

 

Share. Facebook Twitter Pinterest LinkedIn Tumblr Email WhatsApp
Previous Article*ಮಾಂದಲಪಟ್ಟಿ ಜೀಪು ಚಾಲಕರ ಸಂಘದಿಂದ ಸ್ವಚ್ಛತಾ ಶ್ರಮದಾನ*
Next Article *ಮಡಿಕೇರಿ : ಫೀ.ಮಾ.ಕಾರ್ಯಪ್ಪ ಕಾಲೇಜಿನ ವಿದ್ಯಾರ್ಥಿಗಳಿಂದ ಹೆಚ್‍ಐವಿ ಏಡ್ಸ್ ಕುರಿತು ಜಾಗೃತಿ*

Related Posts

ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?

February 11, 2026

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!

February 11, 2026

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ಮಡಿಕೇರಿ, NEWS DESK ಫೆ.11 : ದಕ್ಷಿಣ ಕೊಡಗಿನ ಪೊನ್ನಂಪೇಟೆ ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ನಿರಂತರವಾಗಿ ಜಾನುವಾರುಗಳ ಮೇಲೆ ದಾಳಿ…

ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!

February 11, 2026

*ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*

February 11, 2026

*ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*

February 11, 2026

*ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*

February 11, 2026

*ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*

February 11, 2026

*ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*

February 11, 2026

*ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*

February 11, 2026

*ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*

February 11, 2026

*ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*

February 10, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.