
ಮಡಿಕೇರಿ ಅ.15 NEWS DESK : ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪ್ರವಾಸೋದ್ಯಮ ಇಲಾಖೆ, ಕೂರ್ಗ್ ಹೋಟೇಲ್, ರೆಸಾರ್ಟ್ ಅಸೋಸಿಯೇಷನ್, ರೋಟರಿ ಲಯನ್ಸ್ ಹಾಗೂ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ರಾಷ್ಟ್ರೀಯ ಸೇವಾ ಯೋಜನೆಯ ಸಂಯೋಗದಲ್ಲಿ ನಡೆದ ಸ್ವಚ್ಛ ಕೊಡಗು-ಸುಂದರ ಕೊಡಗು ಅಭಿಯಾನಕ್ಕೆ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಎನ್‌ಎಸ್‌ಎಸ್ ವಿದ್ಯಾರ್ಥಿಗಳು ಕೈಜೋಡಿಸಿದ್ದಾರೆ. ನಗರದ ಜನರಲ್ ತಿಮ್ಮಯ್ಯ ವೃತ್ತದಿಂದ ಖಾಸಗಿ ಬಸ್ ನಿಲ್ದಾಣದವರೆಗೆ ರಸ್ತೆಗಳಲ್ಲಿದ್ದ ಪ್ಲಾಸ್ಟಿಕ್ ತ್ಯಾಜ್ಯಗಳನ್ನು ವಿದ್ಯಾರ್ಥಿಗಳು ಹೆಕ್ಕಿ ಸ್ವಚ್ಛಗೊಳಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಮೇಜರ್ ಪ್ರೊ.ಬಿ.ರಾಘವ ಮಾತನಾಡಿ ಸ್ವಚ್ಛತೆಯ ಬಗ್ಗೆ ಅರಿವು ಮೂಡಿಸಿದರು. ಅಭಿಯಾನದಲ್ಲಿ ಕಾಲೇಜಿನ ಹಿರಿಯ ಪ್ರಾಧ್ಯಾಪಕರಾದ ಪ್ರೊ. ಕೆ.ಪಿ.ನಾಗರಾಜ್, ಎನ್‌ಎಸ್‌ಎಸ್ ಯೋಜನಾಧಿಕಾರಿಗಳಾದ ಡಾ.ಶೈಲಶ್ರೀ ಕೆ ಹಾಗೂ ಅಲೋಕ್ ಬಿ.ಜೈ, ಎನ್ ಎಸ್ ಎಸ್ ವಿದ್ಯಾರ್ಥಿ ನಾಯಕರು ಹಾಗೂ 70ಕ್ಕೂ ಹೆಚ್ಚು ಸ್ವಯಂಸೇವಕರು ಪಾಲ್ಗೊಂಡಿದ್ದರು.









