Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?
  • *ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*
  • ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!
  • *ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*
  • *ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*
  • *ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*
  • *ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*
  • *ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*
  • *ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*
  • *ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಸ್ವಚ್ಛ ಕೊಡಗು – ಸುಂದರ ಕೊಡಗು ಸ್ವಚ್ಛತಾ ಆಂದೋಲನಕ್ಕೆ ಕೊಡಗಿನಾದ್ಯಂತ ಅಭೂತಪೂವ೯ ಸ್ಪಂದನೆ*
ಇತ್ತೀಚಿನ ಸುದ್ದಿಗಳು

*ಸ್ವಚ್ಛ ಕೊಡಗು – ಸುಂದರ ಕೊಡಗು ಸ್ವಚ್ಛತಾ ಆಂದೋಲನಕ್ಕೆ ಕೊಡಗಿನಾದ್ಯಂತ ಅಭೂತಪೂವ೯ ಸ್ಪಂದನೆ*

October 15, 20253 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ಅ.15 NEWS DESK : ಕೂಗ್೯ ಹೋಟೇಲ್, ರೆಸಾಟ್೯ ಅಸೋಸಿಯೇಷನ್ ವತಿಯಿಂದ ವಿವಿಧ ಸಂಘಸಂಸ್ಥೆಗಳ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಸ್ವಚ್ಛ ಕೊಡಗು – ಸುಂದರ ಕೊಡಗು ಹೆಸರಿನ ಸ್ವಚ್ಛತಾ ಅಭಿಯಾನಕ್ಕೆ ಜಿಲ್ಲೆಯಾದ್ಯಂತ ಅತ್ಯುತ್ತಮ ಸ್ಪಂದನೆ ದೊರಕಿದೆ. ಜಿಲ್ಲೆಯ ಎಲ್ಲೆಲ್ಲೂ ಸಾವಿರಾರು ಸಂಖ್ಯೆಯಲ್ಲಿ ವಿವಿಧ ಸಂಘಸಂಸ್ಥೆಗಳ ಸದಸ್ಯರು ಸ್ವಚ್ಚತಾ ಅಭಿಯಾನದಲ್ಲಿ ಪಾಲ್ಗೊಳ್ಳುವ ಮೂಲಕ ಕೊಡಗಿನ ಸ್ವಚ್ಛತೆ ಸಂಬಂಧಿತ ಕಾಳಜಿ ತೋರಿದ್ದಾರೆ. ನಗರದ ಜನರಲ್ ತಿಮ್ಮಯ್ಯ ವೃತ್ತದಲ್ಲಿ ಆಯೋಜಿತ ಕಾಯ೯ಕ್ರಮದಲ್ಲಿ ಕಸ ಹೆಕ್ಕುವ ಮೂಲಕ ಸ್ವಚ್ಛ ಕೊಡಗು – ಸುಂದರ ಕೊಡಗು ಅಭಿಯಾನಕ್ಕೆ ಶಾಸಕ ಡಾ.ಮಂತರ್ ಗೌಡ ಮತ್ತು ಜಿಲ್ಲಾಧಿಕಾರಿ ವೆಂಕಟ್ ರಾಜಾ ಚಾಲನೆ ನೀಡಿದರು.  ಸ್ವಚ್ಛ ಮತ್ತು ಸುಂದರ ಕೊಡಗು ನಿರ್ಮಾಣದ ಜವಾಬ್ದಾರಿ ಜಿಲ್ಲೆಯ ಪ್ರತೀಯೋವ೯ರ ಮೇಲಿದೆ. ಕೊಡಗನ್ನು ಅಸುಚಿತ್ವದಿಂದ ಸಂರಕ್ಷಿಸುವ ನಿಟ್ಟಿನಲ್ಲಿ ಜಿಲ್ಲೆಯಾದ್ಯಂತ ಕೂಗ್೯ ಹೋಟೇಲ್, ರೆಸಾಟ್೯ ಅಸೋಸಿಯೇಷನ್ ವತಿಯಿಂದ ಸ್ವಚ್ಛತಾ ಆಂದೋಲನದ ಆಯೋಜನೆ ಶ್ಲಾಘನೀಯ ಎಂದು ಮಡಿಕೇರಿ ಶಾಸಕ ಡಾ.ಮಂತರ್ ಗೌಡ  ಹೇಳಿದರು. ಕೊಡಗು ಜಿಲ್ಲೆಯ ಸುಂದರ ಪ್ರಕೃತಿ, ಸಂಪನ್ಮೂಲ ಕಾಪಾಡದಿದ್ದರೆ ಭವಿಷ್ಯದಲ್ಲಿ ತೊಡಕು ಉಂಟಾಗುತ್ತದೆ. ಈಗಾಗಲೇ ಏಕಬಳಕೆ ಪ್ಲಾಸ್ಟಿಕ್ ಅನ್ನು ನಿಷೇಧಿಸಲಾಗಿದೆ. ಮಡಿಕೇರಿಯಲ್ಲಿ 2 ಲೀಟರ್ ಗಿಂತ ಕಡಿಮೆ ಸಂಗ್ರಹ ಸಾಮರ್ಥ್ಯದ ನೀರಿನ ಬಾಟಲ್ ಗಳ ಮಾರಾಟ ಹಾಗೂ ಬಳಕೆಯನ್ನೂ ನಿಷೇಧಿಸಲಾಗಿದೆ. ಇದರಿಂದ ಕಸದ ಪ್ರಮಾಣ ಕಡಿಮೆಯಾಗಿದೆ ಎಂದು ಹೇಳಿದ ಶಾಸಕರು, ಜಿಲ್ಲೆಯ ಸ್ವಚ್ಛತೆ ಕಾಪಾಡುವುದು ಎಲ್ಲರ ಜವಾಬ್ದಾರಿಯಾಗಿದೆ. ಒಂದು ದಿನಕ್ಕೆ ಈ ಕಾರ್ಯಕ್ರಮ ಮೀಸಲಾಗದೆ ವರ್ಷವಿಡಿ ಸ್ವಚ್ಛತಾ ಜಾಗೃತಿ ಹೊಂದಿರಬೇಕು. ಹಸಿರು ಸಂರಕ್ಷಣೆಯ ಕ್ರಾಂತಿ ಮಾಡಲು ಪ್ರತಿಯೊಬ್ಬರು ಕೈಜೋಡಿಸಬೇಕು. ಮನೆಯಿಂದಲೇ ಶೂನ್ಯ ತ್ಯಾಜ್ಯ ಬಗ್ಗೆ ಚಿಂತಿಸಬೇಕು. ಪ್ರವಾಸಿಗರು ಕಸ ಎಸೆದು ಪ್ರಕೃತಿಗೆ ಧಕ್ಕೆ ತರುತ್ತಿರುವ ಪ್ರಕರಣಗಳು ಆಗಿಂದಾಗ್ಗೆ ವರದಿಯಾಗುತ್ತಿವೆ. ಕೊಡಗಿನ ಸ್ವಚ್ಛತೆ ಕಾಪಾಡುವ ಜವಾಬ್ದಾರಿ ಎಲ್ಲರ ಮೇಲಿದೆ. ಸಾರ್ವಜನಿಕ ಸ್ಥಳದಲ್ಲಿ ಕಸ ಎಸೆಯುವುದು ಕಂಡುಬಂದಲ್ಲಿ ಸಂಬಂಧಿಸಿದ ಸ್ಥಳೀಯ ಆಡಳಿತ ಕೂಡಲೇ ಕ್ರಮವಹಿಸಬೇಕು ಎಂದು ಅಭಿಪ್ರಾಯಪಟ್ಟರು.  ಸ್ವಚ್ಛ ಕೊಡಗು – ಸುಂದರ ಕೊಡಗು ಸ್ವಚ್ಚತಾ ಅಭಿಯಾನದಲ್ಲಿ ಜಿಲ್ಲೆಯಾದ್ಯಂತ ಸಂಗ್ರಹವಾಗುವ ಕಸವನ್ನು ವೈಜ್ಞಾನಿಕವಾಗಿ ಮೈಸೂರಿನ ತ್ಯಾಜ್ಯ ಸಂಗ್ರಹಾಲಯಕ್ಕೆ ಕೊಂಡೊಯ್ದು ವಿಲೇವಾರಿ ಮಾಡಲಾಗವುದು ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಮಾಹಿತಿ ನೀಡಿದರು.  ಕೊಡಗಿನೆಲ್ಲೆಡೆ ಶುಚಿತ್ವ ಕಾರ್ಯ ಕೈಗೊಳ್ಳಲಾಗಿದೆ. ಸರಕಾರಿ ಅಧಿಕಾರಿಗಳನ್ನು ನೋಡೆಲ್ ಅಧಿಕಾರಿಗಳನ್ನು ನೇಮಿಸಿ ಅಭಿಯಾನಲ್ಲಿ ಸಂಗ್ರಹವಾಗುವ ತ್ಯಾಜ್ಯ ವಿಲೇವಾರಿಗೆ ಮೇಲ್ವಿಚಾರಣೆ ಮಾಡಲಾಗುತ್ತದೆ. ಅಪಾರ ಸಂಖ್ಯೆಯಲ್ಲಿ ಸಂಘ-ಸಂಸ್ಥೆಗಳು ಈ ಅಭಿಯಾನಕ್ಕೆ ಕೈ ಜೋಡಿಸಿವೆ. ಕೊಡಗಿಗೆ ಅಗತ್ಯವಾಗಿದ್ದ ಅಭಿಯಾನ ಇದಾಗಿದ್ದು, ಅಸಾಧ್ಯ ಯಾವುದು ಇಲ್ಲ ಎಂಬುದನ್ನು ಸಾಬೀತುಪಡಿಸಿದೆ. ಎಂದು ಅವರು ಹಷ೯ ವ್ಯಕ್ತಪಡಿಸಿದರು. ಕೂಗ್೯ ಹೋಟೇಲ್, ರೆಸಾಟ್೯ ಅಸೋಸಿಯೇಷನ್ ಅಧ್ಯಕ್ಷ ಕುಂಡ್ಯೋಳಂಡ ದಿನೇಶ್ ಕಾಯ೯ಪ್ಪ ಮಾತನಾಡಿ, ಇದು ಕೊಡಗು ಸ್ವಚ್ಛತೆಯ ನಿಟ್ಟಿನಲ್ಲಿ ಪ್ರಥಮ ಹೆಜ್ಜೆಯಾಗಿದೆ. ಈ ಅಭಿಯಾನದಲ್ಲಿ ಜಿಲ್ಲೆಯ ವಿವಿಧೆಡೆಗಳ 320 ಕ್ಕೂ ಅಧಿಕ ಸಂಘಸಂಸ್ಥೆಗಳು ಪಾಲ್ಗೊಂಡಿವೆ. ನಿರೀಕ್ಷೆಗೂ ಮೀರಿದ ಸ್ಪಂದನೆ ವ್ಯಕ್ತವಾಗಿದೆ. ಹಲವು ವರ್ಷಗಳಿಂದ ಪ್ರವಾಸೋದ್ಯಮದಿಂದ ಕೊಡಗಿಗೆ ಸಮಸ್ಯೆ ಉಂಟಾಗುತ್ತಿದೆ ಎಂಬ ಆರೋಪವಿದೆ. ಈ ಆರೋಪವನ್ನು ದೂರಮಾಡಿ, ಜವಾಬ್ದಾರಿಯುತ ಪ್ರವಾಸೋದ್ಯಮಕ್ಕೆ ಒತ್ತು ನೀಡಲು ಪ್ರವಾಸೋದ್ಯಮ ಅವಲಂಬಿತರು ಜವಾಬ್ದಾರಿ ತೆಗೆದುಕೊಂಡು ಈ ಯೋಜನೆ ರೂಪಿಸಲಾಗಿದೆ. ಸುಮಾರು 320 ಕ್ಕೂ ಅಧಿಕ ಸಂಘ ಸಂಸ್ಥೆಗಳು ಈ ಮಹತ್ಕಾರ್ಯಕ್ಕೆ ಕೈ ಜೋಡಿಸುವುದರೊಂದಿಗೆ ಜಿಲ್ಲೆಯಲ್ಲಿ ನವ ಚರಿತ್ರೆ ಬರೆದಿದೆ. ಈ ಸ್ವಚ್ಛತಾ ಆಂದೋಲನದಿಂದಾಗಿ ದೇಶಕ್ಕೇ ಕೊಡಗು ಮಾದರಿಯಾಗಲಿದೆ ಎಂದು ದಿನೇಶ್ ಹೇಳಿದರು.  ಇದು ಒಂದು ದಿನಕ್ಕೆ ಸೀಮಿತವಲ್ಲ. ಮುಂದಿನ ದಿನಗಳಲ್ಲಿ ಪ್ರವಾಸಿ ತಾಣಗಳಲ್ಲಿ ಸ್ವಚ್ಛತಾ ಕಾರ್ಯ ಹಮ್ಮಿಕೊಳ್ಳಲಾಗುವುದು. ತ್ಯಾಜ್ಯ ಮುಕ್ತ, ಸ್ವಚ್ಛ ಕೊಡಗು ನಿರ್ಮಾಣದ ಸಂಕಲ್ಪದೊದಿಗೆ ವಿವಿಧ ಕಾಯ೯ಯೋಜನೆ ಜಾರಿಗೊಳಿಸಿ ಭವಿಷ್ಯದಲ್ಲಿ ಕೊಡಗನ್ನು ಪ್ಲಾಸ್ಟಿಕ್ ಮುಕ್ತ ಜಿಲ್ಲೆಯನ್ನಾಗಿಸುವ ಗುರಿಯನ್ನು ಸಂಘ ಹೊಂದಿದೆ ಎಂದೂ ದಿನೇಶ್ ಮಾಹಿತಿ ನೀಡಿದರು. ಕೊಡಗಿನ ಜನತೆಯಲ್ಲಿ ಸ್ವಚ್ಚತೆಯ ಬಗೆಗಿನ ಕಾಳಜಿ ಶ್ಲಾಘನೀಯವಾಗಿದ್ದು ಮುಂದಿನ ದಿನಗಳಲ್ಲಿ ಇಂಥ ಸ್ವಚ್ಚತಾ ಅಭಿಯಾನವನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಹಮ್ಮಿಕೊಳ್ಳಲಾಗುತ್ತದೆ ಎಂದರು.  ಮಡಿಕೇರಿ ನಗರಸಭೆಯ ಅಧ್ಯಕ್ಷೆ ಕಲಾವತಿ, ಉಪಾಧ್ಯಕ್ಷ ಮಹೇಶ್ ಜೈನಿ, ಪೌರಾಯುಕ್ತ ಹೆಚ್.ಆರ್.ರಮೇಶ್, ಬಿಜೆಪಿ ಜಿಲ್ಲಾಧ್ಯಕ್ಷ ನಾಪಂಡ ರವಿಕಾಳಪ್ಪ, ಕೂಗ್೯ ಹೋಟೇಲ್, ರೆಸಾಟ್೯ ಅಸೋಸಿಯೇಷನ್ ಪ್ರಧಾನ ಕಾಯ೯ದಶಿ೯ ನಾಸೀರ್ ಅಹಮ್ಮದ್, ಉಪಾಧ್ಯಕ್ಷ ಜಾಹೀರ್ ಅಹಮ್ಮದ್, ಗೌರವ ಸಲಹೆಗಾರ ಜಿ.ಚಿದ್ವಿಲಾಸ್, ಸ್ವಚ್ಛ ಕೊಡಗು ಸುಂದರ ಕೊಡಗು ಅಭಿಯಾನದ ಸಾಮಾಜಿಕ ಜಾಲತಾಣ ಪ್ರಚಾರ ಸಮಿತಿ ಸಂಚಾಲಕ ಅನಿಲ್ ಹೆಚ್.ಟಿ. ಸಂಘಧ ನಿದೇ೯ಶಕ ಹರಿಕೖಷ್ಣ, ಮದನ್ , ಚೇಂಬರ್ ಆಫ್ ಕಾಮಸ್೯ ಮಡಿಕೇರಿ ಘಟಕದ ಅಧ್ಯಕ್ಷ ಸಂತೋಷ್ ಅಣ್ಕೇಕರ್, ಹೋಂಸ್ಟೇ ಅಸೋಸಿಯೇಷನ್ ಅಧ್ಯಕ್ಷೆ ಮೋಂತಿ ಗಣೇಶ್, ಕಾಯ೯ದಶಿ೯ ನವೀನ್ ಎ.ಕೆ.ರೋಟರಿ ಮಿಸ್ಟಿ ಹಿಲ್ಸ್ ಅಧ್ಯಕ್ಷ ರತ್ನಾಕರ್ ರೈ, ಕಾಯ೯ದಶಿ೯ ಬಿ.ಕೆ. ಕಾಯ೯ಪ್ಪ, ರೋಟರಿ ವುಡ್ಸ್ ಅಧ್ಯಕ್ಷ ಕಿರಣ್ ಕುಂದರ್, ಕಾಯ೯ದಶಿ೯ ಪ್ರಮೀಳಾ ಶೆಟ್ಟಿ, ರೆಡ್ ಕ್ರಾಸ್ ಜಿಲ್ಲಾಧ್ಯಕ್ಷ ಬಿ.ಕೆ.ರವೀಂದ್ರ ರೈ, ಔಷಧಿ ವ್ಯಾಪಾರಸ್ಥರ ಸಂಘದ ಜಿಲ್ಲಾ ನಿದೇ೯ಶಕರಾದ ಪ್ರಸಾದ್ ಗೌಡ, ವಸಂತ್ ಕುಮಾರ್ ಅಂಬೆಕಲ್ ವಿನೋದ್ , ಜನರಲ್ ತಿಮ್ಮಯ್ಯ ಶಾಲಾ ಪ್ರಾಂಶುಪಾಲೆ ಬಾಳೆಯಡ ಸವಿತಾ ಪೂವಯ್ಯ, ತಿಮ್ಮಯ್ಯ ಶಾಲಾ ವಿದ್ಯಾಥಿ೯, ಶಿಕ್ಷಕಿಯರು, ಇನ್ನರ್ ವೀಲ್ ಕಾಯ೯ದಶಿ೯ ನಮಿತಾ ರೈ, ಕೊಡಗು ಅಭಿವೖದ್ದಿ ಸಮಿತಿಯ ಸಂಚಾಲಕ ಪ್ರಸನ್ನ ಭಟ್, ಕನ್ನಡ ಸಾಹಿತ್ಯ ಪರಿಷತ್ ಪ್ರಧಾನ ಕಾಯ೯ದಶಿ೯ ಮುನೀರ್ ಅಹಮ್ಮದ್, ಪ್ರವಾಸೋದ್ಯಮ ಇಲಾಖೆಯ ಪ್ರಬಾರ ಉಪನಿದೇ೯ಶಕ ಬಸಪ್ಪ, ಅಧಿಕಾರಿ ಜತಿನ್, ಕೊಡಗು ಪ್ರೆಸ್ ಕ್ಲಬ್ ಅಧ್ಯಕ್ಷ ಬೊಳ್ಳಜಿರ ಅಯ್ಯಪ್ಪ ಸೇರಿದಂತೆ ಅನೇಕರು ಹಾಜರಿದ್ದರು. ಶಾಸಕ ಡಾ.ಮಂಥರ್ ಗೌಡ , ಜಿಲ್ಲಾಧಿಕಾರಿ ವೆಂಕಟ್ ರಾಜ್ ನಗರದ ತಿಮ್ಮಯ್ಯ ವೃತ್ತದ ವ್ಯಾಪ್ತಿಯಲ್ಲಿ ತ್ಯಾಜ್ಯ ಹೆಕ್ಕಿದ್ದಲ್ಲದೇ ರಸ್ತೆ ಬದಿಯ ಚರಂಡಿಯೊಳಕ್ಕೂ ಇಳಿದು ಅಲ್ಲಿ ಬಿದ್ದಿದ್ದ ಬಾಟಲಿ, ಕಸ ತ್ಯಾಜ್ಯವನ್ನು ಹೆಕ್ಕಿ ಮಾದರಿಯಾದರು.  ಕೂಗ್೯ ಹೋಟೇಲ್, ರೆಸಾಟ್೯ ಅಸೋಸಿಯೇಷನ್ ವತಿಯಿಂದ ಜಾರಿಗೊಂಡ ಸ್ವಚ್ಛ ಕೊಡಗು – ಸುಂದರ ಕೊಡಗು ಅಭಿಯಾನಕ್ಕೆ ಕೊಡಗು ಜಿಲ್ಲಾಡಳಿತ, ಜಿ.ಪಂ., ಪ್ರವಾಸೋದ್ಯಮ ಇಲಾಖೆ, ಮಡಿಕೇರಿ ನಗರಸಭೆ, ಸ್ಥಳೀಯ ಸಂಸ್ಥೆಗಳು ,ಕೊಡಗು ಚೇಂಬರ್ ಆಫ್ ಕಾಮಸ್೯, ಕೊಡಗು ಹೋಂಸ್ಟೇ ಅಸೋಸಿಯೇಷನ್, ರೋಟರಿ, ಲಯನ್ಸ್ ಸಂಸ್ಥೆಗಳು,ಕೊಡಗು ಟ್ರಾವಲ್ ಅಸೋಸಿಯೇಷನ್ , ರೆಡ್ ಕ್ರಾಸ್, ಖಾಸಗಿ ಶಿಕ್ಷಣ ಸಂಸ್ಥೆ, ವಿವಿಧ ಸಂಘಸಂಸ್ಥೆಗಳು ಬೆಂಬಲ ಸೂಚಿಸಿ ಜಿಲ್ಲಾದ್ಯಂತ ಸ್ವಚ್ಛತಾ ಅಭಿಯಾನದಲ್ಲಿ ಪಾಲ್ಗೊಂಡವು.

 

 

Share. Facebook Twitter Pinterest LinkedIn Tumblr Email WhatsApp
Previous Article*ಸಮಥ೯ ಕನ್ನಡಿಗರು ಸಂಸ್ಥೆಯಿಂದ ನಿಮ್ಮ ಪ್ರತಿಭೆ – ನಮ್ಮ ವೇದಿಕೆ ಸ್ಪಧೆ೯* 
Next Article *ತಮ್ಮ ಇಲಾಖೆಯ ವೈಫಲ್ಯವನ್ನು ಮರೆಮಾಚಲು ಆರ್‌ಎಸ್‌ಎಸ್ ವಿರುದ್ಧ ಹೇಳಿಕೆ : ಪ್ರಿಯಾಂಕ್ ಖರ್ಗೆ ವಿರುದ್ಧ ವಿರಾಜಪೇಟೆ ಬಿಜೆಪಿ ಅಸಮಾಧಾನ*

Related Posts

ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?

February 11, 2026

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!

February 11, 2026

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ಮಡಿಕೇರಿ, NEWS DESK ಫೆ.11 : ದಕ್ಷಿಣ ಕೊಡಗಿನ ಪೊನ್ನಂಪೇಟೆ ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ನಿರಂತರವಾಗಿ ಜಾನುವಾರುಗಳ ಮೇಲೆ ದಾಳಿ…

ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!

February 11, 2026

*ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*

February 11, 2026

*ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*

February 11, 2026

*ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*

February 11, 2026

*ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*

February 11, 2026

*ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*

February 11, 2026

*ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*

February 11, 2026

*ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*

February 11, 2026

*ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*

February 10, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.