ಮಡಿಕೇರಿ ಅ.15 NEWS DESK : ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಆದೇಶದ ಮೇರೆಗೆ ಕೊಡಗು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಲ್ಲಿ ಸೇವೆ ಸಲ್ಲಿಸಲು ಅರೆಕಾಲಿಕ ಕಾನೂನು ಸ್ವಯಂ ಸೇವಕರ(ಪ್ಯಾರ ಲೀಗಲ್ ವಾಲೆಂಟಿಯರ್ಸ್) ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರೆಕಾಲಿಕ ಕಾನೂನು ಸ್ವಯಂ ಸೇವಕರ ನೇಮಕಾತಿಗಾಗಿ ಸೇವಾ ಮನೋಭಾವನೆಯಿಂದ ಕೆಲಸ ನಿರ್ವಹಿಸಲು ಹಾಗೂ ಕಾನೂನು ಸೇವಾ ಕೇಂದ್ರ ಮತ್ತು ಸಾಮಾನ್ಯ ಜನರ ನಡುವೆ ಸೇತುವೆಯಾಗಿ ಕೆಲಸ ನಿರ್ವಹಿಸಲು ಇಚ್ಚಿಸುವ ಮಾಜಿ ಸೈನಿಕರು ಅರ್ಜಿ ಸಲ್ಲಿಸಬಹುದು. ಈ ಸೇವೆ ಸಲ್ಲಿಸುವವರಿಗೆ ಯಾವುದೇ ವೇತನ, ಶುಲ್ಕ ಇಲ್ಲದಿದ್ದರು ಕೆಲವೊಮ್ಮೆ ಗೌರವ ಧನಕ್ಕೆ ಅರ್ಹರಾಗಿರುತ್ತಾರೆ. ಅರೆಕಾಲಿಕ ಸ್ವಯಂ ಸೇವಕರಾಗಿ ಕಾರ್ಯ ನಿರ್ವಹಿಸಲು ಇಚ್ಚಿಸುವ ಮಾಜಿ ಸೈನಿಕರು ತಮ್ಮ ಇಚ್ಚೆಯನ್ನು ಅಕ್ಟೋಬರ್, 23 ರೊಳಗೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಮಡಿಕೇರಿ ಕಾರ್ಯಾಲಯಕ್ಕೆ ಸಲ್ಲಿಸುವಂತೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಜಂಟಿ ನಿರ್ದೇಶಕರಾದ ಬಿ.ಆರ್.ಶೆಟ್ಟಿ ತಿಳಿಸಿದ್ದಾರೆ.










