Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*
  • *ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*
  • *ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*
  • *ಸೌಂದರ್ಯ ತಜ್ಞರು ನಿತ್ಯ ವ್ಯಾಯಾಮದೊಂದಿಗೆ ತಮ್ಮ ಆರೋಗ್ಯ ವೃದ್ಧಿಸಿಕೊಳ್ಳುವ ಬಗ್ಗೆ ಗಮನಹರಿಸಬೇಕು ಎಂದು ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಪಟು ತಾತಪಂಡ ಜ್ಯೋತಿ ಸೋಮಯ್ಯ ಕಿವಿಮಾತು ಹೇಳಿದರು*
  • *ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಪುನಾರಂಭಿಸಲು ಅಶ್ವಿನ್‌ ವೈಷ್ಣವ್‌ಗೆ ಯದುವೀರ್‌ ಮನವಿ ಭೂ ಸ್ವಾಧೀನ ಪ್ರಕ್ರಿಯೆಗೆ ಚಾಲನೆ ನೀಡಲು ಕ್ರಮ ಕೈಗೊಳ್ಳಬೇಕೆಂದು ಸಂಸದರ ಪತ್ರ*
  • *ಕೊಡವ ಭಾಷೆಗೂ ಸಾಂವಿಧಾನಿಕ ಭದ್ರತೆ ನೀಡಬೇಕು : ಸಣ್ಣ ಸಣ್ಣ ಭಾಷೆಗಳನ್ನು ಹತ್ತಿಕಿದರೆ ಏಕತೆಗೆ ದಕ್ಕೆ : ಸಿಎನ್‌ಸಿ ಪ್ರತಿಪಾದನೆ*
  • *‘ಜಂತು ಹುಳು ರಹಿತ ಮಕ್ಕಳು – ಆರೋಗ್ಯವಂತ ಮಕ್ಕಳು’ ರಾಷ್ಟ್ರೀಯ ಜಂತು ಹುಳು ನಿವಾರಣಾ ಕಾರ್ಯಕ್ರಮ*
  • *ಫೆ.14 ರಂದು ಕೊಡವ ಭವನ ಉದ್ಘಾಟನೆ*
  • *ಮಡಿಕೇರಿಯಲ್ಲಿ “ಆರೋಗ್ಯ ಹಕ್ಕಿನ ಜಾಥಾ”*
  • *ಕೊಡವ ಕುಟುಂಬಗಳ ನಡುವಣ “ಮುಲ್ಲೇಂಗಡ ಕಬಡ್ಡಿ ನಮ್ಮೆ”*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಅ.18 ರಂದು ಮಡಿಕೇರಿಯಲ್ಲಿ ನೀಮಾ ಬೆಳ್ಳಿ ಮಹೋತ್ಸವ ಮತ್ತು ಧನ್ವಂತರಿ ಜಯಂತಿ*
ಇತ್ತೀಚಿನ ಸುದ್ದಿಗಳು

*ಅ.18 ರಂದು ಮಡಿಕೇರಿಯಲ್ಲಿ ನೀಮಾ ಬೆಳ್ಳಿ ಮಹೋತ್ಸವ ಮತ್ತು ಧನ್ವಂತರಿ ಜಯಂತಿ*

October 15, 20252 Mins Read
Share
Facebook Twitter LinkedIn Pinterest WhatsApp Email

ಮಡಿಕೇರಿ ಅ.14 NEWS DESK : ನ್ಯಾಷನಲ್ ಇಂಟಿಗ್ರೇಟೆಡ್ ಮೆಡಿಕಲ್ ಅಸೋಸಿಯೇಷನ್ ನ (ನೀಮಾ) ಕೊಡಗು ಜಿಲ್ಲಾ ಘಟಕದ ವತಿಯಿಂದ ಧನ್ವಂತರಿ ಜಯಂತಿ ಮತ್ತು ಬೆಳ್ಳಿ ಮಹೋತ್ಸವ ಸಮಾರಂಭ ಅ.18 ರಂದು ಮಡಿಕೇರಿಯಲ್ಲಿ ನಡೆಯಲಿದೆ ಎಂದು ನೀಮಾ ಅಧ್ಯಕ್ಷ ಡಾ.ರಾಜಾರಾಮ ಎ.ಆರ್ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ನಗರದ ಶ್ರೀ ಲಕ್ಷ್ಮೀ ನರಸಿಂಹ ಕಲ್ಯಾಣ ಮಂಟಪದಲ್ಲಿ ಶನಿವಾರ ಬೆಳಿಗ್ಗೆ 7 ಗಂಟೆಗೆ ಗಣಪತಿ ಹೋಮ ಮತ್ತು ಧನ್ವಂತರಿ ಹವನ ನಡೆಯಲಿದೆ. 10 ಗಂಟೆಗೆ ಗಣ್ಯರು ಸಭಾ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ನೀಮಾದ ಮಾಜಿ ಅಧ್ಯಕ್ಷರು ತಮ್ಮ ಅನುಭವ ಹಂಚಿಕೊಳ್ಳಲಿದ್ದಾರೆ. ಸಹಸ್ರಾಕ್ಷ, ಉಕ್ಕಿನಡ್ಕ ಡಾ.ಜಯ ಗೋವಿಂದ ಯು. ‘ಸಮಾಜದ ಮೇಲೆ ನೀಮಾ’ದ ಪ್ರಭಾವ ಎಂಬ ವಿಷಯದ ಕುರಿತು ಮಾತನಾಡಲಿದ್ದಾರೆ. ಅಲ್ಲದೆ ‘ನೀಮಾ’ ಬೆಳ್ಳಿ ಮಹೋತ್ಸವದ ಹಿನ್ನೆಲೆಯಲ್ಲಿ ಹೊರ ತರಲಾಗುತ್ತಿರುವ ಸ್ಮರಣ ಸಂಚಿಕೆಯನ್ನೂ ಬಿಡುಗಡೆ ಮಾಡಲಿದ್ದಾರೆ. ಬೆಂಗಳೂರು ಕೆಎಯುಪಿಯ ಡಾ.ಎಂ.ಡಿ.ರಫಿ ಹಕೀಂ ಹಾಗೂ ಕೆಎಸ್‍ಬಿ ನೀಮಾ ಅಧ್ಯಕ್ಷರು ಮಾತನಾಡಲಿದ್ದಾರೆ ಎಂದು ಹೇಳಿದ್ದಾರೆ. *ಸನ್ಮಾನ* ತಮ್ಮ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳ ಸಾಧಕರನ್ನು ಸನ್ಮಾನಿಸಿ ಗೌರವಿಸಲಾಗುವುದು. ಸಮಾಜ ಸೇವೆ ರವೀಂದ್ರ ರೈ, ಯೋಗ ಗುರು ಕೆ.ಕೆ.ಮಹೇಶ್, ತಣಲ್ ಸಂಸ್ಥೆಯ ಮಹಮ್ಮದ್, ವನ್ಯಜೀವಿ ಪಶುವೈದ್ಯ ಡಾ.ಬಿ.ಸಿ.ಚಿಟ್ಟಿಯಪ್ಪ, ಲೀಡ್ ಬ್ಯಾಂಕ್ ನ ನಿವೃತ್ತ ವ್ಯವಸ್ಥಾಪಕ ಆರ್.ಕೆ.ಬಾಲಚಂದ್ರ, ಲೇಖನಿ ಮೂಲಕ ಶಾಂತಿ ಸಾರುವ ಕೆ.ಟಿ.ವತ್ಸಲಾ, ಕೊಡಗು ರಕ್ತದಾನಿಗಳ ಸಂಘದ ಎಂ.ಎ.ರಫೀಕ್, ಕಾಮಧೇನು ಗೋ ಶಾಲೆಯ ಕಾವಾಡಿ ಕಾನ ಕೃಷ್ಣ ಭಟ್, ಪಕ್ಷಿ ಮತ್ತು ವನ್ಯಜೀವಿ ಸಂರಕ್ಷಣೆಯ ಅಭಿಯಾನದ ಡಾ.ಎಸ್.ವಿ.ನರಸಿಂಹನ್, ಮೇಕೇರಿಯ ಸಾಯಿ ಮಂದಿರದ ಅಧ್ಯಕ್ಷ ಸೋಮಣ್ಣ, ಅಂತರಾಷ್ಟ್ರೀಯ ಬ್ಯಾಡ್ಮಿಂಟನ್ ಕೋಚ್ ಜ್ಯೋತಿ ಸೋಮಯ್ಯ, ನೀಮಾ ಹರ್ಬಲ್ ಗಾರ್ಡನ್ ನ ಭೂದಾನಿ ಗಜರಾಜ ನಾಯ್ಡು, ಲಯನ್ಸ್ ಬಿಲ್ಡಿಂಗ್ ಸಮಿತಿಯ ಅಧ್ಯಕ್ಷ ಅಂಬೆಕಲ್ ನವೀನ್ ಕುಶಾಲಪ್ಪ, ಅಕ್ಷಯ ಡಿಸ್ಟಿಬ್ಯೂಟರ್ಸ್‍ನ ಚಂದ್ರಶೇಖರ್ ಭಟ್, ಪ್ರಮುಖರಾದ ಆಮಿಲ್, ಚರಕ್ ಫಾರ್ಮ, ಡಾ.ಮಹೇಶ್ ಶರ್ಮ, ಡಾ.ಮಮತ ಕೆ.ವಿ, ಡಾ.ಪುಷ್ಪಕಲಾ ಬದರಿ ನಾರಾಯಣ, ಡಾ.ಅದ್ವೈತ್ ಗೋಹಿಲ್, ಡಾ.ಕೀರ್ತನ, ಡಾ.ನವೀನ್ ವರ್ಗೀಸ್, ಡಾ.ರವಿ ಪ್ರಕಾಶ್ ಕಜೆ, ಡಾ.ದೀಪಾಮಾಲ ತ್ರಿಪತಿ ಹಾಗೂ ಡಾ.ಮುಮ್ತಾಜ್ ಆಲಿ ಅವರುಗಳನ್ನು ಸನ್ಮಾನಿಸಲಾಗುವುದು. ಮಧ್ಯಾಹ್ನ 3.30 ಗಂಟೆಗೆ ಕೊಡಗು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸಹಯೋಗದೊಂದಿಗೆ ನಡೆಯಲಿರುವ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಹಿರಿಯ ಸ್ತ್ರೀ ರೋಗ ತಜ್ಞೆ ಡಾ.ಜಯಲಕ್ಷ್ಮಿ ಪಾಟ್ಕರ್, ಕೊಡಗು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಕೆ.ಎಂ.ಸತೀಶ್, ಕೆವಿಜಿ ಪ್ರಾಂಶುಪಾಲ ಡಾ.ಡಿ.ವಿ.ಲೀಲಾಧರ್ ಹಾಗೂ ಕೊಡಗು ಡಿಎಒ ಡಾ.ಎಂ.ಶೈಲಜಾ ಪಾಲ್ಗೊಳ್ಳಲಿದ್ದಾರೆ. ಸಂಜೆ 4.30 ಗಂಟೆಯಿಂದ 5 ಗಂಟೆಯ ವರೆಗೆ ‘ವೈದ್ಯಕೀಯ ನಿರ್ಲಕ್ಷ್ಯ ಮತ್ತು ವೈದ್ಯರ ಅರಿವು’ ವಿಷಯದ ಕುರಿತು ಕೊಡಗು ಕೌಟುಂಬಿಕ ನ್ಯಾಯಾಲಯದ ಪ್ರಧಾನ ನ್ಯಾಯಾಧೀಶ ಸಿ.ಕೆ.ಬಸವರಾಜ್ ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಸದಸ್ಯ ಕಾರ್ಯದರ್ಶಿ ಶುಭ ಮಾತನಾಡಲಿದ್ದಾರೆ. ನಂತರ ನೀಮಾ ಕೊಡಗು ಸದಸ್ಯರಿಗೆ ಅಭಿನಂದನಾ ಕಾರ್ಯಕ್ರಮ ನಡೆಯಲಿದೆ. ಇದೇ ಸಂದರ್ಭ ವೈದ್ಯರು ಹಾಗೂ ವೈದ್ಯಕೀಯ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಗುವುದು ಎಂದು ಡಾ.ರಾಜಾರಾಮ ಎ.ಆರ್. ಮಾಹಿತಿ ನೀಡಿದ್ದಾರೆ. *ಆರೋಗ್ಯ ಶಿಬಿರ* ಸುಳ್ಯದ ಕೆ.ವಿ.ಜಿ ಆಯುರ್ವೇದ ಮೆಡಿಕಲ್ ಕಾಲೇಜ್ ನ ಸಹಯೋಗದೊಂದಿಗೆ ‘ಆಯುರ್ವೇದ ಆರೋಗ್ಯ ಶಿಬಿರ’ ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ನಡೆಯಲಿದೆ. ಆಯುರ್ವೇದಿಕ್ ಪೋಸ್ಟರ್ಸ್, ಸ್ಟಾಲ್ಸ್ ಮತ್ತು ಔಷಧೀಯ ಸಸ್ಯಗಳ ಪ್ರದರ್ಶನ ಕೂಡ ಇರಲಿದೆ ಎಂದು ತಿಳಿಸಿದ್ದಾರೆ.

 

Share. Facebook Twitter Pinterest LinkedIn Tumblr Email WhatsApp
Previous Article*ಕೊಡಗು : ಸಾಂತ್ವನ ಕೇಂದ್ರದಲ್ಲಿ 5558 ಪ್ರಕರಣಗಳು ಇತ್ಯರ್ಥ*
Next Article *ರಾಜ್ಯ ಮಟ್ಟದ ಸ್ಪರ್ಧೆ : ಚಿನ್ನ ಮತ್ತು ಬೆಳ್ಳಿ ಗೆದ್ದ ಕೂರ್ಗ್ ಟೆಕ್ವಾಂಡೊ ತರಬೇತಿ ಕೇಂದ್ರದ ವಿದ್ಯಾರ್ಥಿಗಳು*

Related Posts

*ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*

February 11, 2026

*ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*

February 11, 2026

*ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*

February 10, 2026

*ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*

February 11, 2026

ಮಡಿಕೇರಿ ಫೆ.11 NEWS DESK : ಕರ್ನಾಟಕ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ನವೆಂಬೆರ್ 4…

*ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*

February 10, 2026

*ಸೌಂದರ್ಯ ತಜ್ಞರು ನಿತ್ಯ ವ್ಯಾಯಾಮದೊಂದಿಗೆ ತಮ್ಮ ಆರೋಗ್ಯ ವೃದ್ಧಿಸಿಕೊಳ್ಳುವ ಬಗ್ಗೆ ಗಮನಹರಿಸಬೇಕು ಎಂದು ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಪಟು ತಾತಪಂಡ ಜ್ಯೋತಿ ಸೋಮಯ್ಯ ಕಿವಿಮಾತು ಹೇಳಿದರು*

February 10, 2026

*ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಪುನಾರಂಭಿಸಲು ಅಶ್ವಿನ್‌ ವೈಷ್ಣವ್‌ಗೆ ಯದುವೀರ್‌ ಮನವಿ ಭೂ ಸ್ವಾಧೀನ ಪ್ರಕ್ರಿಯೆಗೆ ಚಾಲನೆ ನೀಡಲು ಕ್ರಮ ಕೈಗೊಳ್ಳಬೇಕೆಂದು ಸಂಸದರ ಪತ್ರ*

February 10, 2026

*ಕೊಡವ ಭಾಷೆಗೂ ಸಾಂವಿಧಾನಿಕ ಭದ್ರತೆ ನೀಡಬೇಕು : ಸಣ್ಣ ಸಣ್ಣ ಭಾಷೆಗಳನ್ನು ಹತ್ತಿಕಿದರೆ ಏಕತೆಗೆ ದಕ್ಕೆ : ಸಿಎನ್‌ಸಿ ಪ್ರತಿಪಾದನೆ*

February 10, 2026

*ಫೆ.14 ರಂದು ಕೊಡವ ಭವನ ಉದ್ಘಾಟನೆ*

February 10, 2026

*ಮಡಿಕೇರಿಯಲ್ಲಿ “ಆರೋಗ್ಯ ಹಕ್ಕಿನ ಜಾಥಾ”*

February 10, 2026

*ಕೊಡವ ಕುಟುಂಬಗಳ ನಡುವಣ “ಮುಲ್ಲೇಂಗಡ ಕಬಡ್ಡಿ ನಮ್ಮೆ”*

February 10, 2026

*104 ಮೊಬೈಲ್ ಫೋನ್‌ಗಳನ್ನು ವಾರಸುದಾರರಿಗೆ ಹಸ್ತಾಂತರಿಸಿದ ಕೊಡಗು ಜಿಲ್ಲಾ ಪೊಲೀಸ್*

February 10, 2026

*ತಾಲ್ಲೂಕು ಮಟ್ಟದ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನ*

February 10, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.