
ಮಡಿಕೇರಿ NEWS DESK ಅ.16 : ನೂತನವಾಗಿ ಆಯ್ಕೆಯಾದ ಬೆಂಗಳೂರು ಕೊಡವ ಸಮಾಜದ ಆಡಳಿತ ಮಂಡಳಿಯ ನಿಯೋಗ ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಒಡೆಯರ್ ಅವರನ್ನು ಭೇಟಿ ಮಾಡಿತು. ಕೊಡವ ಸಮಾಜದ ಮುಂದಿನ ಕಾರ್ಯ ಚಟುವಟಿಕೆಗಳ ಕುರಿತು ವಿವರಿಸಿದ ಪ್ರಮುಖರು ಅಗತ್ಯ ಸಹಕಾರವನ್ನು ಕೋರಿದರು. ಬೆಂಗಳೂರು ಕೊಡವ ಸಮಾಜದ ನೂತನ ಅಧ್ಯಕ್ಷ ಚಿರಿಯಪಂಡ ಸುರೇಶ್ ನಂಜಪ್ಪ ಅವರ ನೇತೃತ್ವದಲ್ಲಿ ಭೇಟಿಯಾದ ಪದಾಧಿಕಾರಿಗಳು ಸಂಸದರನ್ನು ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಿತು.









